3 ULB ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು. BSB BSB: And after they had fasted and prayed, they laid their hands on them and sent them off.
4 ULB ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು. BSB BSB: So Barnabas and Saul, sent forth by the Holy Spirit, went down to Seleucia and sailed from there to Cyprus.
5 ULB ಸಲಾಮಿಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು. BSB BSB: When they arrived at Salamis, they proclaimed the word of God in the Jewish synagogues. And John was with them as their helper.
6 ULB ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. BSB BSB: They traveled through the whole island as far as Paphos, where they found a Jewish sorcerer and false prophet named Bar-Jesus,
8 ULB ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. BSB BSB: But Elymas the sorcerer (for that is what his name means) opposed them and tried to turn the proconsul from the faith.
9 ULB ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ, BSB BSB: Then Saul, who was also called Paul, filled with the Holy Spirit, looked directly at Elymas
10 ULB ಅವನನ್ನು ದೃಷ್ಟಿಸಿನೋಡಿ; <<ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ? BSB BSB: and said, “O child of the devil and enemy of all righteousness, you are full of all kinds of deceit and trickery! Will you never stop perverting the straight ways of the Lord?
11 ULB ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ>> ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು. BSB BSB: Now look, the hand of the Lord is against you, and for a time you will be blind and unable to see the light of the sun.” Immediately mist and darkness came over him, and he groped about, seeking someone to lead him by the hand.
12 ULB ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು. BSB BSB: When the proconsul saw what had happened, he believed, for he was astonished at the teaching about the Lord.
13 ULB ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು. BSB BSB: After setting sail from Paphos, Paul and his companions came to Perga in Pamphylia, where John left them to return to Jerusalem.
15 ULB ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; <<ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ>> ಎಂದು ಅವರಿಗೆ ಹೇಳಿ ಕಳುಹಿಸಿದರು. BSB BSB: After the reading from the Law and the Prophets, the synagogue leaders sent word to them: “Brothers, if you have a word of encouragement for the people, please speak.”
17 ULB <<ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪಿತೃಗಳು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು. BSB BSB: The God of the people of Israel chose our fathers. He made them into a great people during their stay in Egypt, and with an uplifted arm He led them out of that land.
18 ULB ಆತನು ಸುಮಾರು ನಲವತ್ತು ವರುಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು, BSB BSB: He endured their conduct for about forty years in the wilderness.
19 ULB ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವಾಸ್ಥ್ಯವಾಗಿ ಹಂಚಿಕೊಟ್ಟನು. BSB BSB: And having vanquished seven nations in Canaan, He gave their land to His people as an inheritance.
20 ULB ಇಷ್ಟರೊಳಗೆ ಸುಮಾರು ನಾನೂರೈವತ್ತು ವರುಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು. BSB BSB: All this took about 450 years. After this, God gave them judges until the time of Samuel the prophet.
21 ULB ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರುಷ ಆಳಿದನು. BSB BSB: Then the people asked for a king, and God gave them Saul son of Kish, from the tribe of Benjamin, who ruled forty years.
22 ULB ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; <ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು> ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು. BSB BSB: After removing Saul, He raised up David as their king and testified about him: ‘I have found David son of Jesse a man after My own heart; he will carry out My will in its entirety.’
23 ULB <<ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. BSB BSB: From the descendants of this man, God has brought to Israel the Savior Jesus, as He promised.
24 ULB ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು. BSB BSB: Before the arrival of Jesus, John preached a baptism of repentance to all the people of Israel.
25 ULB ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; <ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ> ಎಂದು ಹೇಳಿದನು. BSB BSB: As John was completing his course, he said, ‘Who do you suppose I am? I am not that One. But there is One coming after me whose sandals I am not worthy to untie.’
27 ULB ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು. BSB BSB: The people of Jerusalem and their rulers did not recognize Jesus, yet in condemning Him they fulfilled the words of the prophets that are read every Sabbath.
28 ULB ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. BSB BSB: And though they found no ground for a death sentence, they asked Pilate to have Him executed.
29 ULB ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು. BSB BSB: When they had carried out all that was written about Him, they took Him down from the tree and laid Him in a tomb.
30 ULB <<ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. BSB BSB: But God raised Him from the dead,
31 ULB ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. BSB BSB: and for many days He was seen by those who had accompanied Him from Galilee to Jerusalem. They are now His witnesses to our people.
32 ULB <<ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ; BSB BSB: And now we proclaim to you the good news: What God promised our fathers
33 ULB <ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ> ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು. BSB BSB: He has fulfilled for us, their children, by raising up Jesus. As it is written in the second Psalm: ‘You are My Son; today I have become Your Father.’
34 ULB <<ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; <ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ> ಎಂಬುದೆ. BSB BSB: In fact, God raised Him from the dead, never to see decay. As He has said: ‘I will give you the holy and sure blessings promised to David.’
35 ULB ಅದಕ್ಕೆ ಅನುಸಾರವಾಗಿ ಆತನು; <ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು> ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ. BSB BSB: So also, He says in another Psalm: ‘You will not let Your Holy One see decay.’
36 ULB <<ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು. BSB BSB: For when David had served God’s purpose in his own generation, he fell asleep. His body was buried with his fathers and saw decay.
37 ULB ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ. BSB BSB: But the One whom God raised from the dead did not see decay.
38 ULB <<ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ. BSB BSB: Therefore let it be known to you, brothers, that through Jesus the forgiveness of sins is proclaimed to you.
39 ULB ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ. BSB BSB: Through Him everyone who believes is justified from everything from which you could not be justified by the law of Moses.
40 ULB ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ; BSB BSB: Watch out, then, that what was spoken by the prophets does not happen to you:
41 ULB << <ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ>>> ಎಂಬುದೇ ಎಂದು ಹೇಳಿದನು. BSB BSB: ‘Look, you scoffers, wonder and perish! For I am doing a work in your days that you would never believe, even if someone told you.’”
42 ULB ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು. BSB BSB: As Paul and Barnabas were leaving the synagogue, the people urged them to continue this message on the next Sabbath.
43 ULB ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು. BSB BSB: After the synagogue was dismissed, many of the Jews and devout converts to Judaism followed Paul and Barnabas, who spoke to them and urged them to continue in the grace of God.
44 ULB ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು. BSB BSB: On the following Sabbath, nearly the whole city gathered to hear the word of the Lord.
45 ULB ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು. BSB BSB: But when the Jews saw the crowds, they were filled with jealousy, and they blasphemously contradicted what Paul was saying.
46 ULB ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. BSB BSB: Then Paul and Barnabas answered them boldly: “It was necessary to speak the word of God to you first. But since you reject it and do not consider yourselves worthy of eternal life, we now turn to the Gentiles.
47 ULB ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು. BSB BSB: For this is what the Lord has commanded us: ‘I have made you a light for the Gentiles, to bring salvation to the ends of the earth.’”
48 ULB ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. BSB BSB: When the Gentiles heard this, they rejoiced and glorified the word of the Lord, and all who were appointed for eternal life believed.
49 ULB ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು. BSB BSB: And the word of the Lord spread throughout that region.
50 ULB ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು. BSB BSB: The Jews, however, incited the religious women of prominence and the leading men of the city. They stirred up persecution against Paul and Barnabas and drove them out of their district.
51 ULB ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು. BSB BSB: So they shook the dust off their feet in protest against them and went to Iconium.
52 ULB ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು. BSB BSB: And the disciples were filled with joy and with the Holy Spirit.
Select verses for actions: Enter goes to them and Escape comes back.