1 ULB ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನೀಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು. BSB BSB: When they had passed through Amphipolis and Apollonia, they came to Thessalonica, where there was a Jewish synagogue.
2 ULB ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ, BSB BSB: As was his custom, Paul went into the synagogue, and on three Sabbaths he reasoned with them from the Scriptures,
3 ULB ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ <<ನಾನು ನಿಮಗೆ ಪ್ರಸಿದ್ದಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ>> ಸ್ಥಿರಪಡಿಸಿದನು. BSB BSB: explaining and proving that the Christ had to suffer and rise from the dead. “This Jesus I am proclaiming to you is the Christ,” he declared.
4 ULB ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು. BSB BSB: Some of the Jews were persuaded and joined Paul and Silas, along with a large number of God-fearing Greeks and quite a few leading women.
5 ULB ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು. BSB BSB: The Jews, however, became jealous. So they brought in some troublemakers from the marketplace, formed a mob, and sent the city into an uproar. They raided Jason’s house in search of Paul and Silas, hoping to bring them out to the people.
7 ULB ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ>> ಎಂದು ಕೂಗಿದರು. BSB BSB: and Jason has welcomed them into his home. They are all defying Caesar’s decrees, saying that there is another king, named Jesus!”
8 ULB ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು BSB BSB: On hearing this, the crowd and city officials were greatly disturbed.
9 ULB ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು. BSB BSB: And they collected bond from Jason and the others and then released them.
12 ULB ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು. BSB BSB: As a result, many of them believed, along with quite a few prominent Greek women and men.
13 ULB ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೊನೀಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು. BSB BSB: But when the Jews from Thessalonica learned that Paul was also proclaiming the word of God in Berea, they went there themselves to incite and agitate the crowds.
14 ULB ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು. BSB BSB: The brothers immediately sent Paul to the coast, but Silas and Timothy remained in Berea.
15 ULB ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು. BSB BSB: Those who escorted Paul brought him to Athens and then returned with instructions for Silas and Timothy to join him as soon as possible.
17 ULB ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು. BSB BSB: So he reasoned in the synagogue with the Jews and God-fearing Gentiles, and in the marketplace with those he met each day.
18 ULB ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; <<ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?>> ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; <<ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು>> ಬೇರೆ ಕೆಲವರು ಹೇಳಿದರು. BSB BSB: Some Epicurean and Stoic philosophers also began to debate with him. Some of them asked, “What is this babbler trying to say?” Others said, “He seems to be advocating foreign gods.” They said this because Paul was proclaiming the good news of Jesus and the resurrection.
19 ULB ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; <<ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ? BSB BSB: So they took Paul and brought him to the Areopagus, where they asked him, “May we know what this new teaching is that you are presenting?
20 ULB ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ>> ಅಂದರು. BSB BSB: For you are bringing some strange notions to our ears, and we want to know what they mean.”
21 ULB ಅಥೇನರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ. BSB BSB: Now all the Athenians and foreigners who lived there spent their time doing nothing more than hearing and articulating new ideas.
23 ULB ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು. BSB BSB: For as I walked around and examined your objects of worship, I even found an altar with this inscription: TO AN UNKNOWN GOD. Therefore what you worship as something unknown, I now proclaim to you.
25 ULB ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ. BSB BSB: Nor is He served by human hands, as if He needed anything, because He Himself gives everyone life and breath and everything else.
29 ULB <<ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು. BSB BSB: Therefore, being offspring of God, we should not think that the Divine Being is like gold or silver or stone, an image formed by man’s skill and imagination.
30 ULB ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. BSB BSB: Although God overlooked the ignorance of earlier times, He now commands all people everywhere to repent.
31 ULB ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ>> ಅಂದನು. BSB BSB: For He has set a day when He will judge the world with justice by the Man He has appointed. He has given proof of this to everyone by raising Him from the dead.”
32 ULB ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; <<ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ>> ಅಂದರು. BSB BSB: When they heard about the resurrection of the dead, some began to mock him, but others said, “We want to hear you again on this topic.”
33 ULB ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು. BSB BSB: At that, Paul left the Areopagus.
34 ULB ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು. BSB BSB: But some joined him and believed, including Dionysius the Areopagite, a woman named Damaris, and others who were with them.
Select verses for actions: Enter goes to them and Escape comes back.