2 ULB ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. BSB BSB: Suddenly a sound like a mighty rushing wind came from heaven and filled the whole house where they were sitting.
3 ULB ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು. BSB BSB: They saw tongues like flames of fire that separated and came to rest on each of them.
4 ULB ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು. BSB BSB: And they were all filled with the Holy Spirit and began to speak in other tongues as the Spirit enabled them.
5 ULB ಅಂದು ಜಗತ್ತಿನ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು. BSB BSB: Now there were dwelling in Jerusalem God-fearing Jews from every nation under heaven.
7 ULB ಎಲ್ಲರೂ ವಿಸ್ಮಯದಿಂದ ಬೆರಗಾಗಿ, <<ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ. BSB BSB: Astounded and amazed, they asked, “Are not all these who are speaking Galileans?
8 ULB ಆದರೆ ನಾವು ಪ್ರತಿಯೊಬ್ಬರು ನಮ್ಮನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ? BSB BSB: How is it then that each of us hears them in his own native language?
9 ULB ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತೋಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, BSB BSB: Parthians, Medes, and Elamites; residents of Mesopotamia, Judea and Cappadocia, Pontus and Asia,
10 ULB ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ BSB BSB: Phrygia and Pamphylia, Egypt and the parts of Libya near Cyrene; visitors from Rome,
12 ULB ಎಲ್ಲರೂ ಬೆರಗಾಗಿ ಕಳವಳಗೊಂಡು, <<ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?>> BSB BSB: Astounded and perplexed, they asked one another, “What does this mean?”
13 ULB ಆದರೆ ಬೇರೆ ಕೆಲವರು, <<ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ>> ಮಾಡಿದರು. BSB BSB: But others mocked them and said, “They are drunk on new wine!”
14 ULB ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; <<ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ. BSB BSB: Then Peter stood up with the Eleven, lifted up his voice, and addressed the crowd: “Men of Judea and all who dwell in Jerusalem, let this be known to you, and listen carefully to my words.
15 ULB ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ. BSB BSB: These men are not drunk, as you suppose. It is only the third hour of the day!
17 ULB <<ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು; BSB BSB: ‘In the last days, God says, I will pour out My Spirit on all people. Your sons and daughters will prophesy, your young men will see visions, your old men will dream dreams.
18 ULB ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು. BSB BSB: Even on My menservants and maidservants I will pour out My Spirit in those days, and they will prophesy.
19 ULB ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. BSB BSB: I will show wonders in the heavens above and signs on the earth below, blood and fire and billows of smoke.
21 ULB ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ>> ಎಂಬುದೇ. BSB BSB: And everyone who calls on the name of the Lord will be saved.’
24 ULB ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು. BSB BSB: But God raised Him from the dead, releasing Him from the agony of death, because it was impossible for death to keep Him in its grip.
25 ULB ಆತನ ವಿಷಯದಲ್ಲಿ ದಾವೀದನು;,<< <ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. BSB BSB: David says about Him: ‘I saw the Lord always before me; because He is at my right hand, I will not be shaken.
26 ULB ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು; BSB BSB: Therefore my heart is glad and my tongue rejoices; my body also will dwell in hope,
27 ULB ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. BSB BSB: because You will not abandon my soul to Hades, nor will You let Your Holy One see decay.
28 ULB ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ> ಎಂದು ಹೇಳಿದ್ದಾನೆ. BSB BSB: You have made known to me the paths of life; You will fill me with joy in Your presence.’
29 ULB <<ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ. BSB BSB: Brothers, I can tell you with confidence that the patriarch David died and was buried, and his tomb is with us to this day.
30 ULB ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು. BSB BSB: But he was a prophet and knew that God had promised him on oath that He would place one of his descendants on his throne.
31 ULB ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. BSB BSB: Foreseeing this, David spoke about the resurrection of the Christ, that He was not abandoned to Hades, nor did His body see decay.
32 ULB ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ. BSB BSB: God has raised this Jesus to life, to which we are all witnesses.
33 ULB ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ. BSB BSB: Exalted, then, to the right hand of God, He has received from the Father the promised Holy Spirit and has poured out what you now see and hear.
34 ULB ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ,<< <ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು> ಎಂಬುದೇ. BSB BSB: For David did not ascend into heaven, but he himself says: ‘The Lord said to my Lord, “Sit at My right hand
36 ULB <<ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ>> ಎಂದು ಹೇಳಿದನು. BSB BSB: Therefore let all Israel know with certainty that God has made this Jesus, whom you crucified, both Lord and Christ!”
37 ULB ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, <<ಸಹೋದರರೇ, ನಾವೇನು ಮಾಡಬೇಕು>> ಎಂದು ಕೇಳಲು; BSB BSB: When the people heard this, they were cut to the heart and asked Peter and the other apostles, “Brothers, what shall we do?”
38 ULB ಪೇತ್ರನು ಅವರಿಗೆ, <<ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ. BSB BSB: Peter replied, “Repent and be baptized, every one of you, in the name of Jesus Christ for the forgiveness of your sins, and you will receive the gift of the Holy Spirit.
39 ULB ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ>> ಎಂದು ಹೇಳಿದನು. BSB BSB: This promise belongs to you and your children and to all who are far off—to all whom the Lord our God will call to Himself.”
40 ULB ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, <<ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ>> ಎಂದು ಅವರನ್ನು ಎಚ್ಚರಿಸಿದನು. BSB BSB: With many other words he testified, and he urged them, “Be saved from this corrupt generation.”
41 ULB ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು. BSB BSB: Those who embraced his message were baptized, and about three thousand were added to the believers that day.
43 ULB ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು. BSB BSB: A sense of awe came over everyone, and the apostles performed many wonders and signs.
44 ULB ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು. BSB BSB: All the believers were together and had everything in common.
45 ULB ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು. BSB BSB: Selling their possessions and goods, they shared with anyone who was in need.
46 ULB ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು. BSB BSB: With one accord they continued to meet daily in the temple courts and to break bread from house to house, sharing their meals with gladness and sincerity of heart,
47 ULB ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು. BSB BSB: praising God and enjoying the favor of all the people. And the Lord added to their number daily those who were being saved.
Select verses for actions: Enter goes to them and Escape comes back.