1 ULB ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; <<ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ>> ಅಂದನು. BSB BSB: Paul looked directly at the Sanhedrin and said, “Brothers, I have conducted myself before God in all good conscience to this day.”
2 ULB ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ; BSB BSB: At this, the high priest Ananias ordered those standing near Paul to strike him on the mouth.
3 ULB <<ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?>> ಅಂದನು. BSB BSB: Then Paul said to him, “God will strike you, you whitewashed wall! You sit here to judge me according to the law, yet you yourself violate the law by commanding that I be struck.”
4 ULB ಹತ್ತಿರ ನಿಂತಿದ್ದವರು; <<ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?>> ಅನ್ನಲು, BSB BSB: But those standing nearby said, “How dare you insult the high priest of God!”
5 ULB ಪೌಲನು; <<ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ>> ಅಂದನು. BSB BSB: “Brothers,” Paul replied, “I was not aware that he was the high priest, for it is written: ‘Do not speak evil about the ruler of your people.’”
6 ULB ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; <<ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ>> ಎಂದು ಕೂಗಿದನು. BSB BSB: Then Paul, knowing that some of them were Sadducees and the others Pharisees, called out in the Sanhedrin, “Brothers, I am a Pharisee, the son of a Pharisee. It is because of my hope in the resurrection of the dead that I am on trial.”
7 ULB ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು. BSB BSB: As soon as he had said this, a dispute broke out between the Pharisees and Sadducees, and the assembly was divided.
8 ULB ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು. BSB BSB: For the Sadducees say that there is neither a resurrection nor angels nor spirits, but the Pharisees acknowledge them all.
9 ULB ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; <<ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು>> ಎಂದು ವಾದಿಸಿದರು. BSB BSB: A great clamor arose, and some scribes from the party of the Pharisees got up and contended sharply, “We find nothing wrong with this man. What if a spirit or an angel has spoken to him?”
10 ULB ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು. BSB BSB: The dispute grew so violent that the commander was afraid they would tear Paul to pieces. He ordered the soldiers to go down and remove him by force and bring him into the barracks.
11 ULB ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; <<ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು>> ಅಂದನು. BSB BSB: The following night the Lord stood near Paul and said, “Take courage! As you have testified about Me in Jerusalem, so also you must testify in Rome.”
12 ULB ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು. BSB BSB: When daylight came, the Jews formed a conspiracy and bound themselves with an oath not to eat or drink until they had killed Paul.
13 ULB ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು. BSB BSB: More than forty of them were involved in this plot.
14 ULB ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; <<ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ. BSB BSB: They went to the chief priests and elders and said, “We have bound ourselves with a solemn oath not to eat anything until we have killed Paul.
15 ULB ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ>> ಅಂದರು. BSB BSB: Now then, you and the Sanhedrin petition the commander to bring him down to you on the pretext of examining his case more carefully. We are ready to kill him on the way.”
16 ULB ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು. BSB BSB: But when the son of Paul’s sister heard about the plot, he went into the barracks and told Paul.
17 ULB ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; <<ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ>> ಎಂದು ಹೇಳಿದನು. BSB BSB: Then Paul called one of the centurions and said, “Take this young man to the commander; he has something to tell him.”
18 ULB ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; <<ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ>> ಎಂದು ಹೇಳಲು, BSB BSB: So the centurion took him to the commander and said, “Paul the prisoner sent and asked me to bring this young man to you. He has something to tell you.”
19 ULB ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; <<ನೀನು ನನಗೆ ಹೇಳಬೇಕಾದದ್ದು ಏನು?>> ಎಂದು ಕೇಳಿದನು. BSB BSB: The commander took the young man by the hand, drew him aside, and asked, “What do you need to tell me?”
20 ULB ಅವನು; <<ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ. BSB BSB: He answered, “The Jews have agreed to ask you to bring Paul to the Sanhedrin tomorrow on the pretext of acquiring more information about him.
21 ULB ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ>> ಅಂದನು. BSB BSB: Do not let them persuade you, because more than forty men are waiting to ambush him. They have bound themselves with an oath not to eat or drink until they have killed him; they are ready now, awaiting your consent.”
22 ULB ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; <<ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ>> ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು. BSB BSB: So the commander dismissed the young man and instructed him, “Do not tell anyone that you have reported this to me.”
23 ULB ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; <<ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.>> BSB BSB: Then he called two of his centurions and said, “Prepare two hundred soldiers, seventy horsemen, and two hundred spearmen to go to Caesarea in the third hour of the night.
24 ULB ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು. BSB BSB: Provide mounts for Paul to take him safely to Governor Felix.”
25 ULB ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನಂದರೆ; BSB BSB: And he wrote the following letter:
26 ULB <<ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ. BSB BSB: Claudius Lysias, To His Excellency, Governor Felix: Greetings.
27 ULB ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು. BSB BSB: This man was seized by the Jews, and they were about to kill him when I came with my troops to rescue him. For I had learned that he is a Roman citizen,
28 ULB ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು. BSB BSB: and since I wanted to understand their charges against him, I brought him down to their Sanhedrin.
29 ULB ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು. BSB BSB: I found that the accusation involved questions about their own law, but there was no charge worthy of death or imprisonment.
30 ULB ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು>> ಎಂಬುದೇ. BSB BSB: When I was informed that there was a plot against the man, I sent him to you at once. I also instructed his accusers to present their case against him before you.
31 ULB ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು. BSB BSB: So the soldiers followed their orders and brought Paul by night to Antipatris.
32 ULB ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು. BSB BSB: The next day they returned to the barracks and let the horsemen go on with him.
34 ULB ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು; BSB BSB: The governor read the letter and asked what province Paul was from. Learning that he was from Cilicia,
35 ULB <<ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ>> ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು. BSB BSB: he said, “I will hear your case when your accusers arrive.” Then he ordered that Paul be kept under guard in Herod’s Praetorium.
Select verses for actions: Enter goes to them and Escape comes back.