1 ULB ಆಗ ಅಗ್ರಿಪ್ಪನು, ಪೌಲನಿಗೆ; <<ನೀನು ನಿನ್ನ ಪರವಾಗಿ ಮಾತನಾಡಬಹುದು>> ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ; BSB BSB: Agrippa said to Paul, “You have permission to speak for yourself.” Then Paul stretched out his hand and began his defense:
2 ULB <<ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ. BSB BSB: “King Agrippa, I consider myself fortunate to stand before you today to defend myself against all the accusations of the Jews,
3 ULB ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. BSB BSB: especially since you are acquainted with all the Jewish customs and controversies. I beg you, therefore, to listen to me patiently.
4 ULB <<ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ. BSB BSB: Surely all the Jews know how I have lived from my earliest childhood among my own people, and also in Jerusalem.
5 ULB ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು. BSB BSB: They have known me for a long time and can testify, if they are willing, that I lived as a Pharisee, adhering to the strictest sect of our religion.
6 ULB ಈಗಲೂ ದೇವರು ನಮ್ಮ ಪಿತೃಗಳಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ. BSB BSB: And now I stand on trial because of my hope in the promise that God made to our fathers,
7 ULB ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ. BSB BSB: the promise our twelve tribes are hoping to see fulfilled as they earnestly serve God day and night. It is because of this hope, O king, that I am accused by the Jews.
8 ULB ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ? BSB BSB: Why would any of you consider it incredible that God raises the dead?
9 ULB ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು. BSB BSB: So then, I too was convinced that I ought to do all I could to oppose the name of Jesus of Nazareth.
10 ULB ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು. BSB BSB: And that is what I did in Jerusalem. With authority from the chief priests I put many of the saints in prison, and when they were condemned to death, I cast my vote against them.
11 ULB ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು. BSB BSB: I frequently had them punished in the synagogues, and I tried to make them blaspheme. In my raging fury against them, I even went to foreign cities to persecute them.
12 ULB ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ, BSB BSB: In this pursuit I was on my way to Damascus with the authority and commission of the chief priests.
13 ULB ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು. BSB BSB: About noon, O king, as I was on the road, I saw a light from heaven, brighter than the sun, shining around me and my companions.
14 ULB ನಾವೆಲ್ಲರು ನೆಲಕ್ಕೆ ಬೀಳಲು; <ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು> ಕೇಳಿದೆನು. BSB BSB: We all fell to the ground, and I heard a voice say to me in Hebrew, ‘Saul, Saul, why do you persecute Me? It is hard for you to kick against the goads.’
15 ULB ಆಗ ನಾನು; <ಕರ್ತನೇ, ನೀನಾರು?> ಅನ್ನಲು ಕರ್ತನು; <ನೀನು ಹಿಂಸೆಪಡಿಸುವ ಯೇಸುವೇ ನಾನು. BSB BSB: ‘Who are You, Lord?’ I asked. ‘I am Jesus, whom you are persecuting,’ the Lord replied.
16 ULB ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಿಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು. BSB BSB: ‘But get up and stand on your feet. For I have appeared to you to appoint you as a servant and as a witness of what you have seen from Me and what I will show you.
17 ULB ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು. BSB BSB: I will rescue you from your own people and from the Gentiles. I am sending you to them
18 ULB ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ> ಅಂದನು. BSB BSB: to open their eyes, so that they may turn from darkness to light and from the power of Satan to God, that they may receive forgiveness of sins and an inheritance among those sanctified by faith in Me.’
19 ULB ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ, BSB BSB: So then, King Agrippa, I was not disobedient to the heavenly vision.
20 ULB ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು. BSB BSB: First to those in Damascus and Jerusalem, then to everyone in the region of Judea, and then to the Gentiles, I declared that they should repent and turn to God, performing deeds worthy of their repentance.
21 ULB ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು. BSB BSB: For this reason the Jews seized me in the temple courts and tried to kill me.
22 ULB ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ. BSB BSB: But I have had God’s help to this day, and I stand here to testify to small and great alike. I am saying nothing beyond what the prophets and Moses said would happen:
23 ULB ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು>> ಎಂಬುದೇ. BSB BSB: that the Christ would suffer, and as the first to rise from the dead, would proclaim light to our people and to the Gentiles.”
26 ULB ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಅದ್ದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ. BSB BSB: For the king knows about these matters, and I can speak freely to him. I am confident that none of this has escaped his notice, because it was not done in a corner.
27 ULB ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?>> ಉಂಟೆಂದು ನಾನು ಬಲ್ಲೆನು ಅಂದನು. BSB BSB: King Agrippa, do you believe the prophets? I know you do.”
28 ULB ಅದಕ್ಕೆ ಅಗ್ರಿಪ್ಪನು; <<ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?>> ಎಂದು ಹೇಳಲು BSB BSB: Then Agrippa said to Paul, “Can you persuade me in such a short time to become a Christian?”
29 ULB ಪೌಲನು; <<ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ>> ಅಂದನು. BSB BSB: “Short time or long,” Paul replied, “I wish to God that not only you but all who hear me this day may become what I am, except for these chains.”
30 ULB ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ; BSB BSB: Then the king and the governor rose, along with Bernice and those seated with them.
31 ULB <<ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ>> ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. BSB BSB: On their way out, they said to one another, “This man has done nothing worthy of death or imprisonment.”
32 ULB ಅಗ್ರಿಪ್ಪನು ಫೆಸ್ತನಿಗೆ; <<ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು>> ಎಂದು ಹೇಳಿದನು. BSB BSB: And Agrippa said to Festus, “This man could have been released if he had not appealed to Caesar.”
Select verses for actions: Enter goes to them and Escape comes back.