1 ULB ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು. BSB BSB: Once we were safely ashore, we learned that the island was called Malta.
2 ULB ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು. BSB BSB: The islanders showed us extraordinary kindness. They kindled a fire and welcomed all of us because it was raining and cold.
3 ULB ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು. BSB BSB: Paul gathered a bundle of sticks, and as he laid them on the fire, a viper, driven out by the heat, fastened itself to his hand.
4 ULB ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; <<ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು>> ತಮ್ಮತಮ್ಮೊಳಗೆ ಮಾತನಾಡಿಕೊಂಡರು. BSB BSB: When the islanders saw the creature hanging from his hand, they said to one another, “Surely this man is a murderer. Although he was saved from the sea, Justice has not allowed him to live.”
5 ULB ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಒದರಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ. BSB BSB: But Paul shook the creature off into the fire and suffered no ill effects.
6 ULB ಅವರು; <<ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ>> ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು <<ಇವನೊಬ್ಬ ದೇವನೇ>> ಇರಬೇಕು ಎಂದುಕೊಂಡರು. BSB BSB: The islanders were expecting him to swell up or suddenly drop dead. But after waiting a long time and seeing nothing unusual happen to him, they changed their minds and said he was a god.
7 ULB ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು. BSB BSB: Nearby stood an estate belonging to Publius, the chief official of the island. He welcomed us and entertained us hospitably for three days.
8 ULB ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು. BSB BSB: The father of Publius was sick in bed, suffering from fever and dysentery. Paul went in to see him, and after praying and placing his hands on him, he healed the man.
9 ULB ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು. BSB BSB: After this had happened, the rest of the sick on the island came and were cured as well.
10 ULB ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು. BSB BSB: The islanders honored us in many ways and supplied our needs when we were ready to sail.
11 ULB ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು. BSB BSB: After three months we set sail in an Alexandrian ship that had wintered in the island. It had the Twin Brothers as a figurehead.
12 ULB ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು. BSB BSB: Putting in at Syracuse, we stayed there three days.
13 ULB ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು. BSB BSB: From there we weighed anchor and came to Rhegium. After one day, a south wind came up, and on the second day we arrived at Puteoli.
14 ULB ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು. BSB BSB: There we found some brothers who invited us to spend the week with them. And so we came to Rome.
15 ULB ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು. BSB BSB: The brothers there had heard about us and traveled as far as the Forum of Appius and the Three Taverns to meet us. When Paul saw them, he was encouraged and gave thanks to God.
17 ULB ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; <<ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು. BSB BSB: After three days, he called together the leaders of the Jews. When they had gathered, he said to them, “Brothers, although I have done nothing against our people or the customs of our fathers, I was taken prisoner in Jerusalem and handed over to the Romans.
18 ULB ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು. BSB BSB: They examined me and wanted to release me, because there was no basis for a death sentence against me.
19 ULB ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ. BSB BSB: But when the Jews objected, I was compelled to appeal to Caesar, even though I have no charge to bring against my nation.
20 ULB ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ>> ಎಂದು ಹೇಳಿದನು. BSB BSB: So for this reason I have called to see you and speak with you. It is because of the hope of Israel that I am bound with this chain.”
21 ULB ಅದಕ್ಕೆ ಅವರು ಅವನಿಗೆ; <<ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ. BSB BSB: The leaders replied, “We have not received any letters about you from Judea, nor have any of the brothers from there reported or even mentioned anything bad about you.
22 ULB ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ>> ಅಂದರು. BSB BSB: But we consider your views worth hearing, because we know that people everywhere are speaking against this sect.”
23 ULB ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು. BSB BSB: So they set a day to meet with Paul, and many people came to the place he was staying. He expounded to them from morning to evening, testifying about the kingdom of God and persuading them about Jesus from the Law of Moses and the Prophets.
24 ULB ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು. BSB BSB: Some of them were convinced by what he said, but others refused to believe.
25 ULB ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; <<ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ BSB BSB: They disagreed among themselves and began to leave after Paul had made this final statement: “The Holy Spirit was right when He spoke to your fathers through Isaiah the prophet:
26 ULB ನಿಮ್ಮ ಪಿತೃಗಳಿಗೆ ವಿವರವಾಗಿ ಹೇಳಿದ್ದೇನೆಂದರೆ;<< <ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು. BSB BSB: ‘Go to this people and say, “You will be ever hearing but never understanding; you will be ever seeing but never perceiving.”
27 ULB ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ> ಎಂಬುದೇ. BSB BSB: For this people’s heart has grown callous; they hardly hear with their ears, and they have closed their eyes. Otherwise they might see with their eyes, hear with their ears, understand with their hearts, and turn, and I would heal them.’
28 ULB <<ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು>> ಎಂದು ಹೇಳಿದನು. BSB BSB: Be advised, therefore, that God’s salvation has been sent to the Gentiles, and they will listen!”
29 ULB ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು. BSB BSB: Not in the BSB
31 ULB ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು. BSB BSB: Boldly and freely he proclaimed the kingdom of God and taught about the Lord Jesus Christ.
Select verses for actions: Enter goes to them and Escape comes back.