1 ULB ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಸೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ; BSB BSB: Meanwhile, Saul was still breathing out murderous threats against the disciples of the Lord. He approached the high priest
2 ULB ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು,ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು. BSB BSB: and requested letters to the synagogues in Damascus, so that if he found any men or women belonging to the Way, he could bring them as prisoners to Jerusalem.
3 ULB ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು. BSB BSB: As Saul drew near to Damascus on his journey, suddenly a light from heaven flashed around him.
4 ULB ಅವನು ನೆಲಕ್ಕೆ ಬಿದ್ದನು. ಆಗ, <<ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?>> ಎಂದು ಹೇಳುವ ವಾಣಿಯನ್ನು ಕೇಳಿದನು. BSB BSB: He fell to the ground and heard a voice say to him, “Saul, Saul, why do you persecute Me?”
5 ULB ಅದಕ್ಕೆ ಸೌಲನು;, <<ಕರ್ತನೇ, ನೀನಾರು?>> ಎಂದು ಕೇಳಿದ್ದಕ್ಕೆ, ಕರ್ತನು, <<ನೀನು ಹಿಂಸೆಪಡಿಸುವ ಯೇಸುವೇ ನಾನು; BSB BSB: “Who are You, Lord?” Saul asked. “I am Jesus, whom you are persecuting,” He replied.
6 ULB ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು>> ಎಂದು ಹೇಳಿದನು. BSB BSB: “Now get up and go into the city, and you will be told what you must do.”
7 ULB ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು. BSB BSB: The men traveling with Saul stood there speechless. They heard the voice but did not see anyone.
8 ULB ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು. BSB BSB: Saul got up from the ground, but when he opened his eyes he could not see a thing. So they led him by the hand into Damascus.
9 ULB ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು. BSB BSB: For three days he was without sight, and he did not eat or drink anything.
10 ULB ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; <<ಅನನೀಯನೇ,>> ಎಂದು ಅವನನ್ನು ಕರೆಯಲು, ಅವನು; <<ಕರ್ತನೇ, ಇಗೋ, ಇದ್ದೇನೆ>> ಅಂದನು. BSB BSB: In Damascus there was a disciple named Ananias. The Lord spoke to him in a vision, “Ananias!” “Here I am, Lord,” he answered.
11 ULB ಕರ್ತನು ಅವನಿಗೆ, <<ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ. BSB BSB: “Get up!” the Lord told him. “Go to the house of Judas on Straight Street and ask for a man from Tarsus named Saul, for he is praying.
12 ULB ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ>> ಎಂದು ಹೇಳಿದನು. BSB BSB: In a vision he has seen a man named Ananias come and place his hands on him to restore his sight.”
13 ULB ಅದಕ್ಕೆ ಅನನೀಯನು, <<ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ. BSB BSB: But Ananias answered, “Lord, many people have told me about this man and all the harm he has done to Your saints in Jerusalem.
14 ULB ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ>> ಅಂದನು. BSB BSB: And now he is here with authority from the chief priests to arrest all who call on Your name.”
15 ULB ಕರ್ತನು ಅವನಿಗೆ, <<ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ. BSB BSB: “Go!” said the Lord. “This man is My chosen instrument to carry My name before the Gentiles and their kings, and before the people of Israel.
16 ULB ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು>> ಎಂದು ಹೇಳಿದನು. BSB BSB: I will show him how much he must suffer for My name.”
17 ULB ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, <<ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ>> ಎಂದು ಹೇಳಿದನು. BSB BSB: So Ananias went to the house, and when he arrived, he placed his hands on Saul. “Brother Saul,” he said, “the Lord Jesus, who appeared to you on the road as you were coming here, has sent me so that you may see again and be filled with the Holy Spirit.”
18 ULB ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು. BSB BSB: At that instant, something like scales fell from Saul’s eyes, and his sight was restored. He got up and was baptized,
19 ULB ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು. BSB BSB: and after taking some food, he regained his strength. And he spent several days with the disciples in Damascus.
20 ULB ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು. BSB BSB: Saul promptly began to proclaim Jesus in the synagogues, declaring, “He is the Son of God.”
21 ULB ಕೇಳಿದವರೆಲ್ಲರು ಬೆರಗಾಗಿ; <<ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ>> ಎಂದು ಮಾತನಾಡಿಕೊಂಡರು. BSB BSB: All who heard him were astounded and asked, “Isn’t this the man who wreaked havoc in Jerusalem on those who call on this name? And hasn’t he come here to take them as prisoners to the chief priests?”
22 ULB ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು. BSB BSB: But Saul was empowered all the more, and he confounded the Jews living in Damascus by proving that Jesus is the Christ.
23 ULB ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. BSB BSB: After many days had passed, the Jews conspired to kill him,
24 ULB ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು. BSB BSB: but Saul learned of their plot. Day and night they watched the city gates in order to kill him.
25 ULB ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು. BSB BSB: One night, however, his disciples took him and lowered him in a basket through a window in the wall.
26 ULB ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು. BSB BSB: When Saul arrived in Jerusalem, he tried to join the disciples, but they were all afraid of him, not believing that he was a disciple.
27 ULB ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು. BSB BSB: Then Barnabas brought him to the apostles and described how Saul had seen the Lord, who had spoken to him on the road to Damascus, and how Saul had spoken boldly in that city in the name of Jesus.
28 ULB ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು. BSB BSB: So Saul stayed with them, moving about freely in Jerusalem and speaking boldly in the name of the Lord.
29 ULB ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು. BSB BSB: He talked and debated with the Grecian Jews, but they tried to kill him.
30 ULB ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರದುಕೊಂಡುಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. BSB BSB: When the brothers learned of this, they took him down to Caesarea and sent him off to Tarsus.
31 ULB ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು. BSB BSB: Then the church throughout Judea, Galilee, and Samaria experienced a time of peace. It grew in strength and numbers, living in the fear of the Lord and the encouragement of the Holy Spirit.
32 ULB ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು. BSB BSB: As Peter traveled throughout the area, he went to visit the saints in Lydda.
33 ULB ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. BSB BSB: There he found a man named Aeneas who had been paralyzed and bedridden for eight years.
34 ULB ಪೇತ್ರನು ಅವನಿಗೆ, <<ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ>> ಎಂದು ಹೇಳಿದನು. ಕೂಡಲೆ ಅವನು ಎದ್ದನು. BSB BSB: “Aeneas,” Peter said to him, “Jesus Christ heals you! Get up and put away your mat.” Immediately Aeneas got up,
35 ULB ಮತ್ತು ಲುದ್ದದಲ್ಲಿಯೂ, ಶಾರೋನನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು. BSB BSB: and all who lived in Lydda and Sharon saw him and turned to the Lord.
36 ULB ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ <<ದೊರ್ಕ>> ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು. BSB BSB: In Joppa there was a disciple named Tabitha (which is translated as Dorcas), who was always occupied with works of kindness and charity.
37 ULB ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು. BSB BSB: At that time, however, she became sick and died, and her body was washed and placed in an upper room.
38 ULB ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, <<ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು>> ಬೇಡಿಕೊಂಡರು. BSB BSB: Since Lydda was near Joppa, the disciples, hearing that Peter was there, sent two men to urge him, “Come to us without delay.”
39 ULB ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು. BSB BSB: So Peter got up and went with them. On his arrival, they took him to the upper room. All the widows stood around him, weeping and showing him the tunics and other clothing that Dorcas had made while she was still with them.
40 ULB ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; <<ತಬಿಥಾ, ಎದ್ದೇಳು>> ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು. BSB BSB: Then Peter sent them all out of the room. He knelt down and prayed, and turning toward her body, he said, “Tabitha, get up!” She opened her eyes, and seeing Peter, she sat up.
41 ULB ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು. BSB BSB: Peter took her by the hand and helped her up. Then he called the saints and widows and presented her to them alive.
42 ULB ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು. BSB BSB: This became known all over Joppa, and many people believed in the Lord.
43 ULB ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು. BSB BSB: And Peter stayed for several days in Joppa with a tanner named Simon.
Select verses for actions: Enter goes to them and Escape comes back.