2 ULB ಆಮೋಸನು ಹೀಗೆ ಪ್ರಕಟಿಸಿದನು, <<ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.>> BSB BSB: He said: “The LORD roars from Zion and raises His voice from Jerusalem; the pastures of the shepherds mourn, and the summit of Carmel withers.”
3 ULB ಯೆಹೋವನು ಇಂತೆನ್ನುತ್ತಾನೆ, <<ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ. BSB BSB: This is what the LORD says: “For three transgressions of Damascus, even four, I will not revoke My judgment, because they threshed Gilead with sledges of iron.
4 ULB ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು. BSB BSB: So I will send fire upon the house of Hazael to consume the citadels of Ben-hadad.
5 ULB ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.>> ಇದು ಯೆಹೋವನ ನುಡಿ. BSB BSB: I will break down the gates of Damascus; I will cut off the ruler from the Valley of Aven and the one who wields the scepter in Beth-eden. The people of Aram will be exiled to Kir,” says the LORD.
6 ULB ಯೆಹೋವನು ಇಂತೆನ್ನುತ್ತಾನೆ, <<ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು. BSB BSB: This is what the LORD says: “For three transgressions of Gaza, even four, I will not revoke My judgment, because they exiled a whole population, delivering them up to Edom.
7 ULB ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು. BSB BSB: So I will send fire upon the walls of Gaza, to consume its citadels.
8 ULB ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.>> ಇದು ಕರ್ತನಾದ ಯೆಹೋವನ ನುಡಿ. BSB BSB: I will cut off the ruler of Ashdod and the one who wields the scepter in Ashkelon. I will turn My hand against Ekron, and the remnant of the Philistines will perish,” says the Lord GOD.
9 ULB ಯೆಹೋವನು ಇಂತೆನ್ನುತ್ತಾನೆ: <<ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು. BSB BSB: This is what the LORD says: “For three transgressions of Tyre, even four, I will not revoke My judgment, because they delivered up a whole congregation of exiles to Edom and broke a covenant of brotherhood.
10 ULB ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.>> BSB BSB: So I will send fire upon the walls of Tyre to consume its citadels.”
11 ULB ಯೆಹೋವನು ಇಂತೆನ್ನುತ್ತಾನೆ: <<ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು. BSB BSB: This is what the LORD says: “For three transgressions of Edom, even four, I will not revoke My judgment, because he pursued his brother with the sword and stifled all compassion; his anger raged continually, and his fury flamed incessantly.
12 ULB ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.>> BSB BSB: So I will send fire upon Teman to consume the citadels of Bozrah.”
13 ULB ಯೆಹೋವನು ಇಂತೆನ್ನುತ್ತಾನೆ, <<ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು. BSB BSB: This is what the LORD says: “For three transgressions of the Ammonites, even four, I will not revoke My judgment, because they ripped open the pregnant women of Gilead in order to enlarge their territory.
14 ULB ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು. BSB BSB: So I will kindle a fire in the walls of Rabbah to consume its citadels amid war cries on the day of battle and a violent wind on the day of tempest.
15 ULB ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.>> ಇದು ಯೆಹೋವನ ನುಡಿ. BSB BSB: Their king will go into exile—he and his princes together,” says the LORD.