1 ULB ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು! BSB BSB: This is what the Lord GOD showed me: I saw a basket of summer fruit.
2 ULB ಆತನು ನನಗೆ, <<ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?>> ಎಂದು ಕೇಳಲು, ನಾನು ಅದಕ್ಕೆ, <<ಮಾಗಿದ ಹಣ್ಣಿನ ಪುಟ್ಟಿ>> ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, <<ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ. BSB BSB: “Amos, what do you see?” He asked. “A basket of summer fruit,” I replied. So the LORD said to me, “The end has come for My people Israel; I will no longer spare them.”
3 ULB ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು>> ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, <<ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!>> BSB BSB: “In that day,” declares the Lord GOD, “the songs of the temple will turn to wailing. Many will be the corpses, strewn in silence everywhere!”
4 ULB <<ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ. BSB BSB: Hear this, you who trample the needy, who do away with the poor of the land,
5 ULB ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ>> ಎಂದು ಹೇಳುತ್ತೀರಿ ಅಲ್ಲವೇ? BSB BSB: asking, “When will the New Moon be over, that we may sell grain? When will the Sabbath end, that we may market wheat? Let us reduce the ephah and increase the shekel; let us cheat with dishonest scales.
6 ULB ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ! BSB BSB: Let us buy the poor with silver and the needy for a pair of sandals, selling even the chaff with the wheat!”
7 ULB ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, <<ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ>> BSB BSB: The LORD has sworn by the Pride of Jacob: “I will never forget any of their deeds.
8 ULB ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು. BSB BSB: Will not the land quake for this, and all its dwellers mourn? All of it will swell like the Nile; it will surge and then subside like the Nile in Egypt.
9 ULB ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು. BSB BSB: And in that day, declares the Lord GOD, I will make the sun go down at noon, and I will darken the earth in the daytime.
10 ULB ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು. BSB BSB: I will turn your feasts into mourning and all your songs into lamentation. I will cause everyone to wear sackcloth and every head to be shaved. I will make it like a time of mourning for an only son, and its outcome like a bitter day.
11 ULB ಇಗೋ, ಆ ದಿನಗಳು ಬರುವವು.>> ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ. BSB BSB: Behold, the days are coming, declares the Lord GOD, when I will send a famine on the land—not a famine of bread or a thirst for water, but a famine of hearing the words of the LORD.
12 ULB ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ. BSB BSB: People will stagger from sea to sea and roam from north to east, seeking the word of the LORD, but they will not find it.
13 ULB ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು. BSB BSB: In that day the lovely young women—the young men as well—will faint from thirst.
14 ULB <ದಾನೇ, ನಿನ್ನ ದೇವರ ಜೀವದಾಣೆ> ಎಂದೂ <ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ>>> ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು. BSB BSB: Those who swear by the guilt of Samaria and say, ‘As surely as your god lives, O Dan,’ or, ‘As surely as the way of Beersheba lives’—they will fall, never to rise again.”