1 ULB ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು, BSB BSB: Paul, an apostle of Christ Jesus by the will of God, and Timothy our brother,
2 ULB ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ. BSB BSB: To the saints and faithful brothers in Christ at Colossae: Grace and peace to you from God our Father.
3 ULB ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. BSB BSB: We always thank God, the Father of our Lord Jesus Christ, when we pray for you,
4 ULB ನೀವು ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ. BSB BSB: because we have heard about your faith in Christ Jesus and your love for all the saints—
5 ULB ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ. BSB BSB: the faith and love proceeding from the hope stored up for you in heaven, of which you have already heard in the word of truth, the gospel
6 ULB ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ. BSB BSB: that has come to you. All over the world this gospel is bearing fruit and growing, just as it has been doing among you since the day you heard it and truly understood the grace of God.
7 ULB ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ. BSB BSB: You learned it from Epaphras, our beloved fellow servant, who is a faithful minister of Christ on our behalf,
8 ULB ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ. BSB BSB: and who also informed us of your love in the Spirit.
9 ULB ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮಿಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳುವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ, BSB BSB: For this reason, since the day we heard about you, we have not stopped praying for you and asking God to fill you with the knowledge of His will in all spiritual wisdom and understanding,
10 ULB ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ, BSB BSB: so that you may walk in a manner worthy of the Lord and may please Him in every way: bearing fruit in every good work, growing in the knowledge of God,
11 ULB ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ, BSB BSB: being strengthened with all power according to His glorious might so that you may have full endurance and patience, and joyfully
12 ULB ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ. BSB BSB: giving thanks to the Father, who has qualified you to share in the inheritance of the saints in the light.
13 ULB ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. BSB BSB: He has rescued us from the dominion of darkness and brought us into the kingdom of His beloved Son,
14 ULB ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು. BSB BSB: in whom we have redemption, the forgiveness of sins.
18 ULB ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. BSB BSB: And He is the head of the body, the church; He is the beginning and firstborn from among the dead, so that in all things He may have preeminence.
19 ULB ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ, BSB BSB: For God was pleased to have all His fullness dwell in Him,
21 ULB ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. BSB BSB: Once you were alienated from God and were hostile in your minds, engaging in evil deeds.
23 ULB ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ನೆಲೆಗೊಳ್ಳುವುದಾದರೆ, ನೀವು ಅಡಿಪಾಯವುಳ್ಳವರೂ ಮತ್ತು ಸ್ಥಿರತೆಯುಳ್ಳವರೂ ಆಗುವಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ. BSB BSB: if indeed you continue in your faith, established and firm, not moved from the hope of the gospel you heard, which has been proclaimed to every creature under heaven, and of which I, Paul, have become a servant.
24 ULB ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ. BSB BSB: Now I rejoice in my sufferings for you, and I fill up in my flesh what is lacking in regard to Christ’s afflictions for the sake of His body, which is the church.
25 ULB ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು. BSB BSB: I became its servant by the commission God gave me to fully proclaim to you the word of God,
26 ULB ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. BSB BSB: the mystery that was hidden for ages and generations but is now revealed to His saints.
27 ULB ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ. BSB BSB: To them God has chosen to make known among the Gentiles the glorious riches of this mystery, which is Christ in you, the hope of glory.
28 ULB ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. BSB BSB: We proclaim Him, admonishing and teaching everyone with all wisdom, so that we may present everyone perfect in Christ.
29 ULB ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ. BSB BSB: To this end I also labor, striving with all His energy working powerfully within me.
Select verses for actions: Enter goes to them and Escape comes back.