1 ULB ಯಜಮಾನರೇ, ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ. BSB BSB: Masters, supply your slaves with what is right and fair, since you know that you also have a Master in heaven.
2 ULB ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. BSB BSB: Devote yourselves to prayer, being watchful and thankful,
3 ULB ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ. BSB BSB: as you pray also for us, that God may open to us a door for the word, so that we may proclaim the mystery of Christ, for which I am in chains.
4 ULB ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ. BSB BSB: Pray that I may declare it clearly, as I should.
5 ULB ಸಮಯವನ್ನು ಸರಿಯಾಗಿ ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. BSB BSB: Act wisely toward outsiders, redeeming the time.
6 ULB ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ. BSB BSB: Let your speech always be gracious, seasoned with salt, so that you may know how to answer everyone.
7 ULB ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು. BSB BSB: Tychicus will tell you all the news about me. He is a beloved brother, a faithful minister, and a fellow servant in the Lord.
8 ULB ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ, BSB BSB: I have sent him to you for this very purpose, that you may know about us, and that he may encourage your hearts.
9 ULB ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. BSB BSB: With him I am sending Onesimus, our faithful and beloved brother, who is one of you. They will tell you about everything here.
10 ULB ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ. BSB BSB: My fellow prisoner Aristarchus sends you greetings, as does Mark the cousin of Barnabas. You have already received instructions about him: If he comes to you, welcome him.
11 ULB ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು. BSB BSB: Jesus, who is called Justus, also sends greetings. These are the only Jews among my fellow workers for the kingdom of God, and they have been a comfort to me.
12 ULB ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ. BSB BSB: Epaphras, who is one of you and a servant of Christ Jesus, sends you greetings. He is always wrestling in prayer for you, so that you may stand mature and fully assured in the full will of God.
13 ULB ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ. BSB BSB: For I testify about him that he goes to great pains for you and for those at Laodicea and Hierapolis.
14 ULB ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. BSB BSB: Luke, the beloved physician, and Demas send you greetings.
15 ULB ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ. BSB BSB: Greet the brothers in Laodicea, as well as Nympha and the church that meets at her house.
16 ULB ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. BSB BSB: After this letter has been read among you, make sure that it is also read in the church of the Laodiceans, and that you in turn read the letter from Laodicea.
17 ULB ಅರ್ಖಿಪ್ಪನಿಗೆ, <<ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು>> ಹೇಳಿರಿ. BSB BSB: Tell Archippus: “See to it that you complete the ministry you have received in the Lord.”
18 ULB ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. BSB BSB: This greeting is in my own hand—Paul. Remember my chains. Grace be with you.
Select verses for actions: Enter goes to them and Escape comes back.