1 ULB ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು. BSB BSB: In the third year of Cyrus king of Persia, a message was revealed to Daniel, who was called Belteshazzar. The message was true, and it concerned a great conflict. And the understanding of the message was given to him in a vision.
2 ULB ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು. BSB BSB: In those days I, Daniel, was mourning for three full weeks.
3 ULB ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ. BSB BSB: I ate no rich food, no meat or wine entered my mouth, and I did not anoint myself with oil until the three weeks were completed.
4 ULB ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ BSB BSB: On the twenty-fourth day of the first month, as I was standing on the bank of the great river, the Tigris,
5 ULB ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದು ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು; BSB BSB: I lifted up my eyes, and behold, there was a certain man dressed in linen, with a belt of fine gold from Uphaz around his waist.
6 ULB ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು. BSB BSB: His body was like beryl, his face like the brilliance of lightning, his eyes like flaming torches, his arms and legs like the gleam of polished bronze, and his voice like the sound of a multitude.
7 ULB ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು. BSB BSB: Only I, Daniel, saw the vision; the men with me did not see it, but a great terror fell upon them, and they ran and hid themselves.
8 ULB ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು. BSB BSB: So I was left alone, gazing at this great vision. No strength remained in me; my face grew deathly pale, and I was powerless.
9 ULB ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು. BSB BSB: I heard the sound of his words, and as I listened, I fell into a deep sleep, with my face to the ground.
10 ULB ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು. BSB BSB: Suddenly, a hand touched me and set me trembling on my hands and knees.
11 ULB ಆಗ ಅವರು ನನಗೆ, <<ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ>> ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು. BSB BSB: He said to me, “Daniel, you are a man who is highly precious. Consider carefully the words that I am about to say to you. Stand up, for I have now been sent to you.” And when he had said this to me, I stood up trembling.
12 ULB ಆ ಮೇಲೆ ಅವನು ನನಗೆ, <<ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು. BSB BSB: “Do not be afraid, Daniel,” he said, “for from the first day that you purposed to understand and to humble yourself before your God, your words were heard, and I have come in response to them.
13 ULB ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ, BSB BSB: However, the prince of the kingdom of Persia opposed me for twenty-one days. Then Michael, one of the chief princes, came to help me, for I had been left there with the kings of Persia.
14 ULB ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು>> ಎಂದು ಹೇಳಿದನು. BSB BSB: Now I have come to explain to you what will happen to your people in the latter days, for the vision concerns those days.”
15 ULB ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು. BSB BSB: While he was speaking these words to me, I set my face toward the ground and became speechless.
16 ULB ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, <<ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ. BSB BSB: And suddenly one with the likeness of a man touched my lips, and I opened my mouth and said to the one standing before me, “My lord, because of the vision, I am overcome with anguish, and I have no strength.
17 ULB ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ>> ಎಂದು ಹೇಳಿದೆನು. BSB BSB: How can I, your servant, speak with you, my lord? Now I have no strength, nor is any breath left in me.”
18 ULB ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು. BSB BSB: Again the one with the likeness of a man touched me and strengthened me.
19 ULB ಆ ಮೇಲೆ ಆ ಪುರುಷನು ನನಗೆ, <<ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು>> ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, <<ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ>> BSB BSB: “Do not be afraid, you who are highly precious,” he said. “Peace be with you! Be strong now; be very strong!” As he spoke with me, I was strengthened and said, “Speak, my lord, for you have strengthened me.”
20 ULB ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, <<ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು. BSB BSB: “Do you know why I have come to you?” he said. “I must return at once to fight against the prince of Persia, and when I have gone forth, behold, the prince of Greece will come.
21 ULB ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.>> BSB BSB: But first I will tell you what is inscribed in the Book of Truth. Yet no one has the courage to support me against these, except Michael your prince.
Select verses for actions: Enter goes to them and Escape comes back.