1 ULB ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು. BSB BSB: In the second year of his reign, Nebuchadnezzar had dreams that troubled his spirit, and sleep escaped him.
2 ULB ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು. BSB BSB: So the king gave orders to summon the magicians, enchanters, sorcerers, and astrologers to explain his dreams. When they came and stood before the king,
3 ULB ರಾಜನು ಅವರಿಗೆ, <<ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ>> ಎಂಬುದಾಗಿ ಹೇಳಿದನು. BSB BSB: he said to them, “I have had a dream, and my spirit is anxious to understand it.”
5 ULB ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, <<ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು. BSB BSB: The king replied to the astrologers, “My word is final: If you do not tell me the dream and its interpretation, you will be cut into pieces and your houses will be reduced to rubble.
6 ULB ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ>> ಎಂದು ಹೇಳಿದನು. BSB BSB: But if you tell me the dream and its interpretation, you will receive from me gifts and rewards and great honor. So tell me the dream and its interpretation.”
7 ULB ಪಂಡಿತರು ಉತ್ತರವಾಗಿ, <<ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು>> ಎಂಬ ಉತ್ತರವನ್ನೇ ಪುನಃ ಕೊಟ್ಟರು. BSB BSB: They answered a second time, “Let the king tell the dream to his servants, and we will give the interpretation.”
8 ULB ಅದಕ್ಕೆ ರಾಜನು, <<ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು. BSB BSB: The king replied, “I know for sure that you are stalling for time because you see that my word is final.
9 ULB ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು>> ಎಂದು ಹೇಳಿದನು. BSB BSB: If you do not tell me the dream, there is only one decree for you. You have conspired to speak before me false and fraudulent words, hoping the situation will change. Therefore tell me the dream, and I will know that you can give me its interpretation.”
10 ULB ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, <<ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ. BSB BSB: The astrologers answered the king, “No one on earth can do what the king requests! No king, however great and powerful, has ever asked anything like this of any magician, enchanter, or astrologer.
11 ULB ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು>> ಎಂದು ಉತ್ತರಕೊಟ್ಟರು. BSB BSB: What the king requests is so difficult that no one can tell it to him except the gods, whose dwelling is not with mortals.”
12 ULB ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. BSB BSB: This response made the king so angry and furious that he gave orders to destroy all the wise men of Babylon.
13 ULB ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು. BSB BSB: So the decree went out that the wise men were to be executed, and men went to look for Daniel and his friends to execute them.
14 ULB ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ, BSB BSB: When Arioch, the commander of the king’s guard, went out to execute the wise men of Babylon, Daniel responded with discretion and tact.
15 ULB <<ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?>> ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು. BSB BSB: “Why is the decree from the king so harsh?” he asked. Then Arioch explained the situation to Daniel.
16 ULB ಆ ಮೇಲೆ ದಾನಿಯೇಲನು ಅರಮನೆಗೆ ಬಂದು, <<ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು>> ಎಂದು ಅರಿಕೆ ಮಾಡಿದನು. BSB BSB: So Daniel went in and asked the king to give him some time, so that he could give him the interpretation.
17 ULB ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ, BSB BSB: Then Daniel returned to his house and explained the matter to his friends Hananiah, Mishael, and Azariah,
18 ULB <<ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ>> ಎಂದನು. BSB BSB: urging them to plead for mercy from the God of heaven concerning this mystery, so that Daniel and his friends would not be killed with the rest of the wise men of Babylon.
19 ULB ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು, BSB BSB: During the night, the mystery was revealed to Daniel in a vision, and he blessed the God of heaven
20 ULB <<ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ. BSB BSB: and declared: “Blessed be the name of God forever and ever, for wisdom and power belong to Him.
21 ULB ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ. BSB BSB: He changes the times and seasons; He removes kings and establishes them. He gives wisdom to the wise and knowledge to the discerning.
22 ULB ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ. BSB BSB: He reveals the deep and hidden things; He knows what lies in darkness, and light dwells with Him.
23 ULB ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ>> ಎಂದನು. BSB BSB: To You, O God of my fathers, I give thanks and praise, because You have given me wisdom and power. And now You have made known to me what we have requested, for You have made known to us the dream of the king.”
24 ULB ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, <<ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು>> ಎಂದು ಹೇಳಿದನು. BSB BSB: Therefore Daniel went to Arioch, whom the king had appointed to destroy the wise men of Babylon, and said to him, “Do not execute the wise men of Babylon! Bring me before the king, and I will give him the interpretation.”
25 ULB ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, <<ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ>> ಎಂದು ಅರಿಕೆಮಾಡಿದನು. BSB BSB: Arioch hastily brought Daniel before the king and said to him, “I have found a man among the exiles from Judah who will tell the king the interpretation.”
26 ULB ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, <<ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?>> ಎಂದು ಕೇಳಿದನು. BSB BSB: The king responded to Daniel, whose name was Belteshazzar, “Are you able to tell me what I saw in the dream, as well as its interpretation?”
27 ULB ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, <<ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು. BSB BSB: Daniel answered the king, “No wise man, enchanter, medium, or magician can explain to the king the mystery of which he inquires.
28 ULB ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ. BSB BSB: But there is a God in heaven who reveals mysteries, and He has made known to King Nebuchadnezzar what will happen in the latter days. Your dream and the visions that came into your mind as you lay on your bed were these:
29 ULB <<ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ. BSB BSB: As you lay on your bed, O king, your thoughts turned to the future, and the Revealer of Mysteries made known to you what will happen.
30 ULB ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ. BSB BSB: And to me this mystery has been revealed, not because I have more wisdom than any man alive, but in order that the interpretation might be made known to the king, and that you may understand the thoughts of your mind.
31 ULB <<ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು. BSB BSB: As you, O king, were watching, a great statue appeared. A great and dazzling statue stood before you, and its form was awesome.
32 ULB ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ, BSB BSB: The head of the statue was pure gold, its chest and arms were silver, its belly and thighs were bronze,
33 ULB ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು. BSB BSB: its legs were iron, and its feet were part iron and part clay.
34 ULB <<ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು. BSB BSB: As you watched, a stone was cut out, but not by human hands. It struck the statue on its feet of iron and clay, and crushed them.
35 ULB ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು. BSB BSB: Then the iron, clay, bronze, silver, and gold were shattered and became like chaff on the threshing floor in summer. The wind carried them away, and not a trace of them could be found. But the stone that had struck the statue became a great mountain and filled the whole earth.
36 ULB <<ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ. BSB BSB: This was the dream; now we will tell the king its interpretation.
37 ULB ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ. BSB BSB: You, O king, are the king of kings, to whom the God of heaven has given sovereignty, power, strength, and glory.
38 ULB ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ. BSB BSB: Wherever the sons of men or beasts of the field or birds of the air dwell, He has given them into your hand and has made you ruler over them all. You are that head of gold.
39 ULB <<ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು. BSB BSB: But after you, there will arise another kingdom, inferior to yours. Next, a third kingdom, one of bronze, will rule the whole earth.
40 ULB <<ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು. BSB BSB: Finally, there will be a fourth kingdom as strong as iron; for iron shatters and crushes all things, and like iron that crushes all things, it will shatter and crush all the others.
41 ULB <<ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು. BSB BSB: And just as you saw that the feet and toes were made partly of fired clay and partly of iron, so this will be a divided kingdom, yet some of the strength of iron will be in it—just as you saw the iron mixed with clay.
42 ULB ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು. BSB BSB: And as the toes of the feet were partly iron and partly clay, so this kingdom will be partly strong and partly brittle.
43 ULB ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ. BSB BSB: As you saw the iron mixed with clay, so the peoples will mix with one another but will not hold together any more than iron mixes with clay.
45 ULB ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು>> ಎಂದು ಹೇಳಿದನು. BSB BSB: And just as you saw a stone being cut out of the mountain without human hands, and it shattered the iron, bronze, clay, silver, and gold, so the great God has told the king what will happen in the future. The dream is true, and its interpretation is trustworthy.”
46 ULB ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, <<ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು>> ಎಂದು ಆಜ್ಞಾಪಿಸಿದನು. BSB BSB: At this, King Nebuchadnezzar fell on his face, paid homage to Daniel, and ordered that an offering and incense be presented to him.
47 ULB ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, <<ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ>> ಎಂದು ಹೇಳಿದನು. BSB BSB: The king said to Daniel, “Your God is truly the God of gods and Lord of kings, the Revealer of Mysteries, since you were able to reveal this mystery.”
48 ULB ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು. BSB BSB: Then the king promoted Daniel and gave him many generous gifts. He made him ruler over the entire province of Babylon and chief administrator over all the wise men of Babylon.
49 ULB ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು. BSB BSB: And at Daniel’s request, the king appointed Shadrach, Meshach, and Abednego to manage the province of Babylon, while Daniel remained in the king’s court.
Select verses for actions: Enter goes to them and Escape comes back.