2 ULB ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. BSB BSB: Under the influence of the wine, Belshazzar gave orders to bring in the gold and silver vessels that Nebuchadnezzar his father had taken from the temple in Jerusalem, so that the king could drink from them, along with his nobles, his wives, and his concubines.
3 ULB ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. BSB BSB: Thus they brought in the gold vessels that had been taken from the temple, the house of God in Jerusalem, and the king drank from them, along with his nobles, his wives, and his concubines.
4 ULB ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು. BSB BSB: As they drank the wine, they praised their gods of gold and silver, bronze and iron, wood and stone.
5 ULB ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು. BSB BSB: At that moment the fingers of a human hand appeared and wrote on the plaster of the wall, near the lampstand in the royal palace. As the king watched the hand that was writing,
6 ULB ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. BSB BSB: his face grew pale and his thoughts so alarmed him that his hips gave way and his knees knocked together.
7 ULB ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, <<ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು>> ಎಂದು ಹೇಳಿದನು. BSB BSB: The king called out for the enchanters, astrologers, and diviners to be brought in, and he said to these wise men of Babylon, “Whoever reads this inscription and tells me its interpretation will be clothed in purple and have a gold chain placed around his neck, and he will be made the third highest ruler in the kingdom.”
8 ULB ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ. BSB BSB: So all the king’s wise men came in, but they could not read the inscription or interpret it for him.
9 ULB ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು. BSB BSB: Then King Belshazzar became even more terrified, his face grew even more pale, and his nobles were bewildered.
10 ULB ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, <<ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ! BSB BSB: Hearing the outcry of the king and his nobles, the queen entered the banquet hall. “O king, may you live forever!” she said. “Do not let your thoughts terrify you, or your face grow pale.
11 ULB <<ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು. BSB BSB: There is a man in your kingdom who has the spirit of the holy gods in him. In the days of your father he was found to have insight, intelligence, and wisdom like that of the gods. Your father, King Nebuchadnezzar, appointed him chief of the magicians, enchanters, astrologers, and diviners. Your own father, the king,
12 ULB ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು>> ಎಂದಳು. BSB BSB: did this because Daniel, the one he named Belteshazzar, was found to have an extraordinary spirit, as well as knowledge, understanding, and the ability to interpret dreams, explain riddles, and solve difficult problems. Summon Daniel, therefore, and he will give you the interpretation.”
13 ULB ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, <<ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ? BSB BSB: So Daniel was brought before the king, who asked him, “Are you Daniel, one of the exiles my father the king brought from Judah?
14 ULB ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ. BSB BSB: I have heard that the spirit of the gods is in you, and that you have insight, intelligence, and extraordinary wisdom.
15 ULB <<ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು. BSB BSB: Now the wise men and enchanters were brought before me to read this inscription and interpret it for me, but they could not give its interpretation.
16 ULB ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು>> ಎಂದು ಹೇಳಿದನು. BSB BSB: But I have heard about you, that you are able to give interpretations and solve difficult problems. Therefore, if you can read this inscription and give me its interpretation, you will be clothed in purple and have a gold chain placed around your neck, and you will be made the third highest ruler in the kingdom.”
17 ULB ಆಗ ದಾನಿಯೇಲನು ರಾಜನ ಬಳಿ, <<ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು. BSB BSB: In response, Daniel said to the king, “You may keep your gifts for yourself and give your rewards to someone else. Nevertheless, I will read the inscription for the king and interpret it for him.
18 ULB ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು. BSB BSB: As for you, O king, the Most High God gave your father Nebuchadnezzar sovereignty and greatness, glory and honor.
19 ULB ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು. BSB BSB: Because of the greatness that He bestowed on him, the people of every nation and language trembled in fear before him. He killed whom he wished and kept alive whom he wished; he exalted whom he wished and humbled whom he wished.
20 ULB <<ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು. BSB BSB: But when his heart became arrogant and his spirit was hardened with pride, he was deposed from his royal throne, and his glory was taken from him.
21 ULB ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು. BSB BSB: He was driven away from mankind, and his mind was like that of a beast. He lived with the wild donkeys and ate grass like an ox, and his body was drenched with the dew of heaven until he acknowledged that the Most High God rules over the kingdom of mankind, setting over it whom He wishes.
22 ULB <<ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ. BSB BSB: But you his son, O Belshazzar, have not humbled your heart, even though you knew all this.
23 ULB ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ. BSB BSB: Instead, you have exalted yourself against the Lord of heaven. The vessels from His house were brought to you, and as you drank wine from them with your nobles, wives, and concubines, you praised your gods of silver and gold, bronze and iron, wood and stone, which cannot see or hear or understand. But you have failed to glorify the God who holds in His hand your very breath and all your ways.
24 ULB ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು. BSB BSB: Therefore He sent the hand that wrote the inscription.
25 ULB <<ಬರೆದ ಬರಹವು ಇದೇ, <ಮೆನೇ, ಮೆನೇ, ತೆಕೇಲ್, ಉಫರ್ಸಿನ್.> BSB BSB: Now this is the inscription that was written: MENE, MENE, TEKEL, PARSIN.
26 ULB ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. BSB BSB: And this is the interpretation of the message: MENE means that God has numbered the days of your reign and brought it to an end.
27 ULB ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ. BSB BSB: TEKEL means that you have been weighed on the scales and found deficient.
28 ULB ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ>> ಎಂದು ಅರಿಕೆಮಾಡಿದನು. BSB BSB: PERES means that your kingdom has been divided and given over to the Medes and Persians.”
31 ULB ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು. BSB BSB: and Darius the Mede received the kingdom at the age of sixty-two.
Select verses for actions: Enter goes to them and Escape comes back.