1 ULB ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು. BSB BSB: You shall therefore love the LORD your God and always keep His charge, His statutes, His ordinances, and His commandments.
2 ULB ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ, BSB BSB: Know this day that it is not your children who have known and seen the discipline of the LORD your God: His greatness, His mighty hand, and His outstretched arm;
3 ULB ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ, BSB BSB: the signs and works He did in Egypt to Pharaoh king of Egypt and all his land;
4 ULB ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ, BSB BSB: what He did to the Egyptian army and horses and chariots when He made the waters of the Red Sea engulf them as they pursued you, and how He destroyed them completely, even to this day;
5 ULB ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ, BSB BSB: what He did for you in the wilderness until you reached this place;
6 ULB ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. BSB BSB: and what He did in the midst of all the Israelites to Dathan and Abiram, the sons of Eliab the Reubenite, when the earth opened its mouth and swallowed them, their households, their tents, and every living thing that belonged to them.
7 ULB ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ. BSB BSB: For it is your own eyes that have seen every great work that the LORD has done.
8 ULB ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ BSB BSB: You shall therefore keep every commandment I am giving you today, so that you may have the strength to go in and possess the land that you are crossing the Jordan to possess,
9 ULB ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ. BSB BSB: and so that you may live long in the land that the LORD swore to your fathers to give them and their descendants, a land flowing with milk and honey.
10 ULB ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ. BSB BSB: For the land that you are entering to possess is not like the land of Egypt, from which you have come, where you sowed your seed and irrigated on foot, like a vegetable garden.
11 ULB ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು. BSB BSB: But the land that you are crossing the Jordan to possess is a land of mountains and valleys that drinks in the rain from heaven.
12 ULB ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು. BSB BSB: It is a land for which the LORD your God cares; the eyes of the LORD your God are always on it, from the beginning to the end of the year.
13 ULB ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ, BSB BSB: So if you carefully obey the commandments I am giving you today, to love the LORD your God and to serve Him with all your heart and with all your soul,
14 ULB ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು. BSB BSB: then I will provide rain for your land in season, the autumn and spring rains, that you may gather your grain, new wine, and oil.
15 ULB ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ. BSB BSB: And I will provide grass in the fields for your livestock, and you will eat and be satisfied.
16 ULB ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ, BSB BSB: But be careful that you are not enticed to turn aside to worship and bow down to other gods,
17 ULB ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ. BSB BSB: or the anger of the LORD will be kindled against you. He will shut the heavens so that there will be no rain, nor will the land yield its produce, and you will soon perish from the good land that the LORD is giving you.
18 ULB ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. BSB BSB: Fix these words of mine in your hearts and minds; tie them as reminders on your hands and bind them on your foreheads.
19 ULB ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು. BSB BSB: Teach them to your children, speaking about them when you sit at home and when you walk along the road, when you lie down and when you get up.
20 ULB ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು. BSB BSB: Write them on the doorposts of your houses and on your gates,
21 ULB ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ. BSB BSB: so that as long as the heavens are above the earth, your days and those of your children may be multiplied in the land that the LORD swore to give your fathers.
22 ULB ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು. BSB BSB: For if you carefully keep all these commandments I am giving you to follow—to love the LORD your God, to walk in all His ways, and to hold fast to Him—
23 ULB ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ. BSB BSB: then the LORD will drive out all these nations before you, and you will dispossess nations greater and stronger than you.
24 ULB ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು. BSB BSB: Every place where the sole of your foot treads will be yours. Your territory will extend from the wilderness to Lebanon, and from the Euphrates River to the Western Sea.
25 ULB ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು. BSB BSB: No man will be able to stand against you; the LORD your God will put the fear and dread of you upon all the land, wherever you set foot, as He has promised you.
26 ULB ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ. BSB BSB: See, today I am setting before you a blessing and a curse—
27 ULB ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ, BSB BSB: a blessing if you obey the commandments of the LORD your God that I am giving you today,
28 ULB ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು. BSB BSB: but a curse if you disobey the commandments of the LORD your God and turn aside from the path I command you today by following other gods, which you have not known.
30 ULB ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ. BSB BSB: Are not these mountains across the Jordan, west of the road toward the sunset, in the land of the Canaanites who live in the Arabah opposite Gilgal near the Oak of Moreh?
31 ULB ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ BSB BSB: For you are about to cross the Jordan to enter and possess the land that the LORD your God is giving you. When you take possession of it and settle in it,
32 ULB ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು. BSB BSB: be careful to follow all the statutes and ordinances that I am setting before you today.
Select verses for actions: Enter goes to them and Escape comes back.