1 ULB ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು. BSB BSB: Observe the month of Abib and celebrate the Passover to the LORD your God, because in the month of Abib the LORD your God brought you out of Egypt by night.
2 ULB ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು. BSB BSB: You are to offer to the LORD your God the Passover sacrifice from the herd or flock in the place the LORD will choose as a dwelling for His Name.
3 ULB ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು. BSB BSB: You must not eat leavened bread with it; for seven days you are to eat with it unleavened bread, the bread of affliction, because you left the land of Egypt in haste—so that you may remember for the rest of your life the day you left the land of Egypt.
4 ULB ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು. BSB BSB: No leaven is to be found in all your land for seven days, and none of the meat you sacrifice in the evening of the first day shall remain until morning.
5 ULB ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ, BSB BSB: You are not to sacrifice the Passover animal in any of the towns that the LORD your God is giving you.
6 ULB ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು. BSB BSB: You must only offer the Passover sacrifice at the place the LORD your God will choose as a dwelling for His Name. Do this in the evening as the sun sets, at the same time you departed from Egypt.
7 ULB ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು. BSB BSB: And you shall roast it and eat it in the place the LORD your God will choose, and in the morning you shall return to your tents.
8 ULB ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು. BSB BSB: For six days you must eat unleavened bread, and on the seventh day you shall hold a solemn assembly to the LORD your God, and you must not do any work.
9 ULB ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ, BSB BSB: You are to count off seven weeks from the time you first put the sickle to the standing grain.
10 ULB ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು. BSB BSB: And you shall celebrate the Feast of Weeks to the LORD your God with a freewill offering that you give in proportion to how the LORD your God has blessed you,
11 ULB ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು. BSB BSB: and you shall rejoice before the LORD your God in the place He will choose as a dwelling for His Name—you, your sons and daughters, your menservants and maidservants, and the Levite within your gates, as well as the foreigner, the fatherless, and the widows among you.
12 ULB ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು. BSB BSB: Remember that you were slaves in Egypt, and carefully follow these statutes.
13 ULB ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು. BSB BSB: You are to celebrate the Feast of Tabernacles for seven days after you have gathered the produce of your threshing floor and your winepress.
14 ULB ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು. BSB BSB: And you shall rejoice in your feast—you, your sons and daughters, your menservants and maidservants, and the Levite, as well as the foreigner, the fatherless, and the widows among you.
15 ULB ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು. BSB BSB: For seven days you shall celebrate a feast to the LORD your God in the place He will choose, because the LORD your God will bless you in all your produce and in all the work of your hands, so that your joy will be complete.
16 ULB ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು. BSB BSB: Three times a year all your men are to appear before the LORD your God in the place He will choose: at the Feast of Unleavened Bread, the Feast of Weeks, and the Feast of Tabernacles. No one should appear before the LORD empty-handed.
17 ULB ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು. BSB BSB: Everyone must appear with a gift as he is able, according to the blessing the LORD your God has given you.
18 ULB ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು. BSB BSB: You are to appoint judges and officials for your tribes in every town that the LORD your God is giving you. They are to judge the people with righteous judgment.
19 ULB ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ. BSB BSB: Do not deny justice or show partiality. Do not accept a bribe, for a bribe blinds the eyes of the wise and twists the words of the righteous.
20 ULB ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. BSB BSB: Pursue justice, and justice alone, so that you may live, and you may possess the land that the LORD your God is giving you.
22 ULB ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು. BSB BSB: and do not set up for yourselves a sacred pillar, which the LORD your God hates.
Select verses for actions: Enter goes to them and Escape comes back.