1 ULB ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು. BSB BSB: No man with crushed or severed genitals may enter the assembly of the LORD.
2 ULB ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು. BSB BSB: No one of illegitimate birth may enter the assembly of the LORD, nor may any of his descendants, even to the tenth generation.
3 ULB ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು. BSB BSB: No Ammonite or Moabite or any of their descendants may enter the assembly of the LORD, even to the tenth generation.
4 ULB ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು. BSB BSB: For they did not meet you with food and water on your way out of Egypt, and they hired Balaam son of Beor from Pethor in Aram-naharaim to curse you.
5 ULB ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು. BSB BSB: Yet the LORD your God would not listen to Balaam, and the LORD your God turned the curse into a blessing for you, because the LORD your God loves you.
6 ULB ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು. BSB BSB: You are not to seek peace or prosperity from them as long as you live.
7 ULB ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ. BSB BSB: Do not despise an Edomite, for he is your brother. Do not despise an Egyptian, because you lived as a foreigner in his land.
8 ULB ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು. BSB BSB: The third generation of children born to them may enter the assembly of the LORD.
9 ULB ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು. BSB BSB: When you are encamped against your enemies, then you shall keep yourself from every wicked thing.
10 ULB ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು. BSB BSB: If any man among you becomes unclean because of a nocturnal emission, he must leave the camp and stay outside.
11 ULB ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು. BSB BSB: When evening approaches, he must wash with water, and when the sun sets he may return to the camp.
12 ULB ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು. BSB BSB: You must have a place outside the camp to go and relieve yourself.
13 ULB ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು. BSB BSB: And you must have a digging tool in your equipment so that when you relieve yourself you can dig a hole and cover up your excrement.
14 ULB ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು. BSB BSB: For the LORD your God walks throughout your camp to protect you and deliver your enemies to you. Your camp must be holy, lest He see anything unclean among you and turn away from you.
16 ULB ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು. BSB BSB: Let him live among you wherever he chooses, in the town of his pleasing. Do not oppress him.
17 ULB ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು. BSB BSB: No daughter or son of Israel is to be a shrine prostitute.
18 ULB ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ. BSB BSB: You must not bring the wages of a prostitute, whether female or male, into the house of the LORD your God to fulfill any vow, because both are detestable to the LORD your God.
19 ULB ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. BSB BSB: Do not charge your brother interest on money, food, or any other type of loan.
20 ULB ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. BSB BSB: You may charge a foreigner interest, but not your brother, so that the LORD your God may bless you in everything to which you put your hand in the land that you are entering to possess.
21 ULB ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ. BSB BSB: If you make a vow to the LORD your God, do not be slow to keep it, because He will surely require it of you, and you will be guilty of sin.
22 ULB ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ; BSB BSB: But if you refrain from making a vow, you will not be guilty of sin.
23 ULB ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು. BSB BSB: Be careful to follow through on what comes from your lips, because you have freely vowed to the LORD your God with your own mouth.
24 ULB ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು. BSB BSB: When you enter your neighbor’s vineyard, you may eat your fill of grapes, but you must not put any in your basket.
25 ULB ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು. BSB BSB: When you enter your neighbor’s grainfield, you may pluck the heads of grain with your hand, but you must not put a sickle to your neighbor’s grain.
Select verses for actions: Enter goes to them and Escape comes back.