1 ULB ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು. BSB BSB: If a man marries a woman, but she becomes displeasing to him because he finds some indecency in her, he may write her a certificate of divorce, hand it to her, and send her away from his house.
2 ULB ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು. BSB BSB: If, after leaving his house, she goes and becomes another man’s wife,
3 ULB ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ, BSB BSB: and the second man hates her, writes her a certificate of divorce, hands it to her, and sends her away from his house, or if he dies,
4 ULB ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು. BSB BSB: then the husband who divorced her first may not remarry her after she has been defiled, for that is an abomination to the LORD. You must not bring sin upon the land that the LORD your God is giving you as an inheritance.
5 ULB ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ. BSB BSB: If a man is newly married, he must not be sent to war or be pressed into any duty. For one year he is free to stay at home and bring joy to the wife he has married.
6 ULB ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು. BSB BSB: Do not take a pair of millstones or even an upper millstone as security for a debt, because that would be taking one’s livelihood as security.
7 ULB ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು. BSB BSB: If a man is caught kidnapping one of his Israelite brothers, whether he treats him as a slave or sells him, the kidnapper must die. So you must purge the evil from among you.
8 ULB ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು. BSB BSB: In cases of infectious skin diseases, be careful to diligently follow everything the Levitical priests instruct you. Be careful to do as I have commanded them.
9 ULB ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ. BSB BSB: Remember what the LORD your God did to Miriam on the journey after you came out of Egypt.
10 ULB ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು. BSB BSB: When you lend anything to your neighbor, do not enter his house to collect security.
11 ULB ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು. BSB BSB: You are to stand outside while the man to whom you are lending brings the security out to you.
13 ULB ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು. BSB BSB: be sure to return it to him by sunset, so that he may sleep in his own cloak and bless you, and this will be credited to you as righteousness before the LORD your God.
14 ULB ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ BSB BSB: Do not oppress a hired hand who is poor and needy, whether he is a brother or a foreigner residing in one of your towns.
15 ULB ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ. BSB BSB: You are to pay his wages each day before sunset, because he is poor and depends on them. Otherwise he may cry out to the LORD against you, and you will be guilty of sin.
16 ULB ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು. BSB BSB: Fathers shall not be put to death for their children, nor children for their fathers; each is to die for his own sin.
17 ULB ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು. BSB BSB: Do not deny justice to the foreigner or the fatherless, and do not take a widow’s cloak as security.
18 ULB ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ. BSB BSB: Remember that you were slaves in Egypt, and the LORD your God redeemed you from that place. Therefore I am commanding you to do this.
19 ULB ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು. BSB BSB: If you are harvesting in your field and forget a sheaf there, do not go back to get it. It is to be left for the foreigner, the fatherless, and the widow, so that the LORD your God may bless you in all the work of your hands.
20 ULB ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. BSB BSB: When you beat the olives from your trees, you must not go over the branches again. What remains will be for the foreigner, the fatherless, and the widow.
21 ULB ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. BSB BSB: When you gather the grapes of your vineyard, you must not go over the vines again. What remains will be for the foreigner, the fatherless, and the widow.
22 ULB ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ. BSB BSB: Remember that you were slaves in the land of Egypt. Therefore I am commanding you to do this.
Select verses for actions: Enter goes to them and Escape comes back.