1 ULB ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ, BSB BSB: When you enter the land that the LORD your God is giving you as an inheritance, and you take possession of it and settle in it,
2 ULB ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು. BSB BSB: you are to take some of the firstfruits of all your produce from the soil of the land that the LORD your God is giving you and put them in a basket. Then go to the place the LORD your God will choose as a dwelling for His Name,
3 ULB ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, <<ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ>> ಎಂದು ಹೇಳಬೇಕು. BSB BSB: to the priest who is serving at that time, and say to him, “I declare today to the LORD your God that I have entered the land that the LORD swore to our fathers to give us.”
4 ULB ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು. BSB BSB: Then the priest shall take the basket from your hands and place it before the altar of the LORD your God,
6 ULB ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು. BSB BSB: But the Egyptians mistreated us and afflicted us, putting us to hard labor.
7 ULB ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು. BSB BSB: So we called out to the LORD, the God of our fathers; and the LORD heard our voice and saw our affliction, toil, and oppression.
8 ULB ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು. BSB BSB: Then the LORD brought us out of Egypt with a mighty hand and an outstretched arm, with great terror, signs, and wonders.
9 ULB ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ. BSB BSB: And He brought us to this place and gave us this land, a land flowing with milk and honey.
10 ULB ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು>> ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು. BSB BSB: And now, behold, I have brought the firstfruits of the land that You, O LORD, have given me.” Then you are to place the basket before the LORD your God and bow down before Him.
11 ULB ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು. BSB BSB: So you shall rejoice—you, the Levite, and the foreigner dwelling among you—in all the good things the LORD your God has given to you and your household.
12 ULB ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ. BSB BSB: When you have finished laying aside a tenth of all your produce in the third year, the year of the tithe, you are to give it to the Levite, the foreigner, the fatherless, and the widow, that they may eat and be filled within your gates.
13 ULB ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, <<ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ. BSB BSB: Then you shall declare in the presence of the LORD your God, “I have removed from my house the sacred portion and have given it to the Levite, the foreigner, the fatherless, and the widow, according to all the commandments You have given me. I have not transgressed or forgotten Your commandments.
14 ULB ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ. BSB BSB: I have not eaten any of the sacred portion while in mourning, or removed any of it while unclean, or offered any of it for the dead. I have obeyed the LORD my God; I have done everything You commanded me.
15 ULB ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ>> ಎಂದು ಹೇಳಬೇಕು. BSB BSB: Look down from Your holy habitation, from heaven, and bless Your people Israel and the land You have given us as You swore to our fathers—a land flowing with milk and honey.”
16 ULB ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. BSB BSB: The LORD your God commands you this day to follow these statutes and ordinances. You must be careful to follow them with all your heart and with all your soul.
17 ULB ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ. BSB BSB: Today you have proclaimed that the LORD is your God and that you will walk in His ways, keep His statutes and commandments and ordinances, and listen to His voice.
18 ULB ಯೆಹೋವನೋ ನಿಮ್ಮ ವಿಷಯದಲ್ಲಿ, <<ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ BSB BSB: And today the LORD has proclaimed that you are His people and treasured possession as He promised, that you are to keep all His commandments,
19 ULB ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು>> ಎಂದು ಒಪ್ಪಿಕೊಂಡಿದ್ದಾನೆ. BSB BSB: that He will set you high in praise and name and honor above all the nations He has made, and that you will be a holy people to the LORD your God, as He has promised.
Select verses for actions: Enter goes to them and Escape comes back.