1 ULB ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು. BSB BSB: These are the words of the covenant that the LORD commanded Moses to make with the Israelites in the land of Moab, in addition to the covenant He had made with them at Horeb.
2 ULB ಮೋಶೆ ಇಸ್ರಾಯೇಲರನ್ನು ಕರೆದು, <<ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು BSB BSB: Moses summoned all Israel and proclaimed to them, “You have seen with your own eyes everything the LORD did in Egypt to Pharaoh, to all his officials, and to all his land.
3 ULB ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ಪಾತ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ. BSB BSB: You saw with your own eyes the great trials, and those miraculous signs and wonders.
4 ULB ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ. BSB BSB: Yet to this day the LORD has not given you a mind to understand, eyes to see, or ears to hear.
5 ULB ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ; BSB BSB: For forty years I led you in the wilderness, yet your clothes and sandals did not wear out.
6 ULB ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು. BSB BSB: You ate no bread and drank no wine or strong drink, so that you might know that I am the LORD your God.
7 ULB ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು. BSB BSB: When you reached this place, Sihon king of Heshbon and Og king of Bashan came out against us in battle, but we defeated them.
8 ULB ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ. BSB BSB: We took their land and gave it as an inheritance to the Reubenites, the Gadites, and the half-tribe of Manasseh.
9 ULB ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ. BSB BSB: So keep and follow the words of this covenant, that you may prosper in all you do.
10 ULB ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು, BSB BSB: All of you are standing today before the LORD your God—you leaders of tribes, elders, officials, and all the men of Israel,
11 ULB ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು, BSB BSB: your children and wives, and the foreigners in your camps who cut your wood and draw your water—
12 ULB ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ, BSB BSB: so that you may enter into the covenant of the LORD your God, which He is making with you today, and into His oath,
13 ULB ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ. BSB BSB: and so that He may establish you today as His people, and He may be your God as He promised you and as He swore to your fathers, to Abraham, Isaac, and Jacob.
14 ULB <<ಆತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ. BSB BSB: I am making this covenant and this oath not only with you,
15 ULB ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ. BSB BSB: but also with those who are standing here with us today in the presence of the LORD our God, as well as with those who are not here today.
16 ULB ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ. BSB BSB: For you yourselves know how we lived in the land of Egypt and how we passed through the nations on the way here.
17 ULB ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ. BSB BSB: You saw the abominations and idols among them made of wood and stone, of silver and gold.
18 ULB <<ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು. BSB BSB: Make sure there is no man or woman, clan or tribe among you today whose heart turns away from the LORD our God to go and worship the gods of those nations. Make sure there is no root among you that bears such poisonous and bitter fruit,
19 ULB ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, <ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು> ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ. BSB BSB: because when such a person hears the words of this oath, he invokes a blessing on himself, saying, ‘I will have peace, even though I walk in the stubbornness of my own heart.’ This will bring disaster on the watered land as well as the dry.
20 ULB ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು. BSB BSB: The LORD will never be willing to forgive him. Instead, His anger and jealousy will burn against that man, and every curse written in this book will fall upon him. The LORD will blot out his name from under heaven
21 ULB ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು. BSB BSB: and single him out from all the tribes of Israel for disaster, according to all the curses of the covenant written in this Book of the Law.
22 ULB <<ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು. BSB BSB: Then the generation to come—your sons who follow you and the foreigner who comes from a distant land—will see the plagues of the land and the sicknesses the LORD has inflicted on it.
23 ULB ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು, BSB BSB: All its soil will be a burning waste of sulfur and salt, unsown and unproductive, with no plant growing on it, just like the destruction of Sodom and Gomorrah, Admah and Zeboiim, which the LORD overthrew in His fierce anger.
24 ULB <ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?> ಎಂಬುದಾಗಿ ವಿಚಾರಿಸುವರು. BSB BSB: So all the nations will ask, ‘Why has the LORD done such a thing to this land? Why this great outburst of anger?’
25 ULB ಅದಕ್ಕೆ ಜನರು, <ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು. BSB BSB: And the people will answer, ‘It is because they abandoned the covenant of the LORD, the God of their fathers, which He made with them when He brought them out of the land of Egypt.
26 ULB ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ, BSB BSB: They went and served other gods, and they worshiped gods they had not known—gods that the LORD had not given to them.
27 ULB ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು. BSB BSB: Therefore the anger of the LORD burned against this land, and He brought upon it every curse written in this book.
28 ULB ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು> ಎಂದು ಉತ್ತರ ಕೊಡುವರು. BSB BSB: The LORD uprooted them from their land in His anger, rage, and great wrath, and He cast them into another land, where they are today.’
Select verses for actions: Enter goes to them and Escape comes back.