1 ULB ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು. BSB BSB: Hear now, O Israel, the statutes and ordinances I am teaching you to follow, so that you may live and may enter and take possession of the land that the LORD, the God of your fathers, is giving you.
2 ULB ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು. BSB BSB: You must not add to or subtract from what I command you, so that you may keep the commandments of the LORD your God that I am giving you.
3 ULB ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ. BSB BSB: Your eyes have seen what the LORD did at Baal-peor, for the LORD your God destroyed from among you all who followed Baal of Peor.
4 ULB ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ. BSB BSB: But you who held fast to the LORD your God are alive to this day, every one of you.
5 ULB ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ. BSB BSB: See, I have taught you statutes and ordinances just as the LORD my God has commanded me, so that you may follow them in the land that you are about to enter and possess.
6 ULB ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, <<ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ>> ಎಂದು ಹೇಳುವರು. BSB BSB: Observe them carefully, for this will show your wisdom and understanding in the sight of the peoples, who will hear of all these statutes and say, “Surely this great nation is a wise and understanding people.”
7 ULB ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು? BSB BSB: For what nation is great enough to have a god as near to them as the LORD our God is to us whenever we call on Him?
8 ULB ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು? BSB BSB: And what nation is great enough to have righteous statutes and ordinances like this entire law I set before you today?
9 ULB ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು. BSB BSB: Only be on your guard and diligently watch yourselves, so that you do not forget the things your eyes have seen, and so that they do not slip from your heart as long as you live. Teach them to your children and grandchildren.
10 ULB ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, <<ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ>> ಎಂದು ಹೇಳಿದನು. BSB BSB: The day you stood before the LORD your God at Horeb, the LORD said to me, “Gather the people before Me to hear My words, so that they may learn to fear Me all the days they live on the earth, and that they may teach them to their children.”
11 ULB ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು. BSB BSB: You came near and stood at the base of the mountain, a mountain blazing with fire to the heavens, with black clouds and deep darkness.
12 ULB ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ. BSB BSB: And the LORD spoke to you out of the fire. You heard the sound of the words but saw no form; there was only a voice.
13 ULB ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು. BSB BSB: He declared to you His covenant, which He commanded you to follow—the Ten Commandments that He wrote on two tablets of stone.
14 ULB ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು. BSB BSB: At that time the LORD commanded me to teach you the statutes and ordinances you are to follow in the land that you are crossing the Jordan to possess.
15 ULB ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. BSB BSB: So since you saw no form of any kind on the day the LORD spoke to you out of the fire at Horeb, be careful
16 ULB ನೀವು ಸ್ತ್ರೀಪುರುಷರ ರೂಪವನ್ನಾಗಲಿ, BSB BSB: that you do not act corruptly and make an idol for yourselves of any form or shape, whether in the likeness of a male or female,
17 ULB ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ, BSB BSB: of any beast that is on the earth or bird that flies in the air,
18 ULB ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು. BSB BSB: or of any creature that crawls on the ground or fish that is in the waters below.
19 ULB ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು. BSB BSB: When you look to the heavens and see the sun and moon and stars—all the host of heaven—do not be enticed to bow down and worship what the LORD your God has apportioned to all the nations under heaven.
20 ULB ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು. BSB BSB: Yet the LORD has taken you and brought you out of the iron furnace, out of Egypt, to be the people of His inheritance, as you are today.
21 ULB ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ, BSB BSB: The LORD, however, was angry with me on account of you, and He swore that I would not cross the Jordan to enter the good land that the LORD your God is giving you as an inheritance.
22 ULB ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. BSB BSB: For I will not be crossing the Jordan, because I must die in this land. But you shall cross over and take possession of that good land.
23 ULB ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು. BSB BSB: Be careful that you do not forget the covenant of the LORD your God that He made with you; do not make an idol for yourselves in the form of anything He has forbidden you.
24 ULB ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ. BSB BSB: For the LORD your God is a consuming fire, a jealous God.
25 ULB ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ, BSB BSB: After you have children and grandchildren and you have been in the land a long time, if you then act corruptly and make an idol of any form—doing evil in the sight of the LORD your God and provoking Him to anger—
26 ULB ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ. BSB BSB: I call heaven and earth as witnesses against you this day that you will quickly perish from the land that you are crossing the Jordan to possess. You will not live long upon it, but will be utterly destroyed.
27 ULB ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ. BSB BSB: Then the LORD will scatter you among the peoples, and only a few of you will survive among the nations to which the LORD will drive you.
28 ULB ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ. BSB BSB: And there you will serve man-made gods of wood and stone, which cannot see or hear or eat or smell.
29 ULB ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. BSB BSB: But if from there you will seek the LORD your God, you will find Him if you seek Him with all your heart and with all your soul.
30 ULB ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ. BSB BSB: When you are in distress and all these things have happened to you, then in later days you will return to the LORD your God and listen to His voice.
31 ULB ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. BSB BSB: For the LORD your God is a merciful God; He will not abandon you or destroy you or forget the covenant with your fathers, which He swore to them by oath.
32 ULB ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ. BSB BSB: Indeed, ask now from one end of the heavens to the other about the days that long preceded you, from the day that God created man on earth: Has anything as great as this ever happened or been reported?
33 ULB ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ? BSB BSB: Has a people ever heard the voice of God speaking out of the fire, as you have, and lived?
34 ULB ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ. BSB BSB: Or has any god tried to take as his own a nation out of another nation—by trials, signs, wonders, and war, by a strong hand and an outstretched arm, and by great terrors—as the LORD your God did for you in Egypt, before your eyes?
35 ULB ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ. BSB BSB: You were shown these things so that you would know that the LORD is God; there is no other besides Him.
36 ULB ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು. BSB BSB: He let you hear His voice from heaven to discipline you, and on earth He showed you His great fire, and you heard His words out of the fire.
37 ULB ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು, BSB BSB: Because He loved your fathers, He chose their descendants after them and brought you out of Egypt by His presence and great power,
38 ULB ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ. BSB BSB: to drive out before you nations greater and mightier than you, and to bring you into their land and give it to you for your inheritance, as it is this day.
39 ULB ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು. BSB BSB: Know therefore this day and take to heart that the LORD is God in heaven above and on the earth below; there is no other.
40 ULB ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. BSB BSB: Keep His statutes and commandments, which I am giving you today, so that you and your children after you may prosper, and that you may live long in the land that the LORD your God is giving you for all time.
41 ULB ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು. BSB BSB: Then Moses set aside three cities across the Jordan to the east
42 ULB ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು. BSB BSB: to which a manslayer could flee after killing his neighbor unintentionally without prior malice. To save one’s own life, he could flee to one of these cities:
43 ULB ಅವು ಯಾವುವೆಂದರೆ- ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು. BSB BSB: Bezer in the wilderness on the plateau belonging to the Reubenites, Ramoth in Gilead belonging to the Gadites, or Golan in Bashan belonging to the Manassites.
44 ULB ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ. BSB BSB: This is the law that Moses set before the Israelites.
45 ULB ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ. BSB BSB: These are the testimonies, statutes, and ordinances that Moses proclaimed to them after they had come out of Egypt,
46 ULB ಅವರು ಯೊರ್ದನ್ ನದಿಯ ಆಚೆ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು. BSB BSB: while they were in the valley across the Jordan facing Beth-peor in the land of Sihon king of the Amorites, who lived in Heshbon and was defeated by Moses and the Israelites after they had come out of Egypt.
47 ULB ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು. BSB BSB: They took possession of the land belonging to Sihon and to Og king of Bashan—the two Amorite kings across the Jordan to the east—
48 ULB ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು BSB BSB: extending from Aroer on the rim of the Arnon Valley as far as Mount Siyon (that is, Hermon),
49 ULB ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು. BSB BSB: including all the Arabah on the east side of the Jordan and as far as the Sea of the Arabah, below the slopes of Pisgah.
Select verses for actions: Enter goes to them and Escape comes back.