1 ULB ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. BSB BSB: You must carefully follow every commandment I am giving you today, so that you may live and multiply, and enter and possess the land that the LORD swore to give your fathers.
2 ULB ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ. BSB BSB: Remember that these forty years the LORD your God led you all the way in the wilderness, so that He might humble you and test you in order to know what was in your heart, whether or not you would keep His commandments.
3 ULB ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು. BSB BSB: He humbled you, and in your hunger He gave you manna to eat, which neither you nor your fathers had known, so that you might understand that man does not live on bread alone, but on every word that comes from the mouth of the LORD.
4 ULB ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ. BSB BSB: Your clothing did not wear out and your feet did not swell during these forty years.
5 ULB ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ. BSB BSB: So know in your heart that just as a man disciplines his son, so the LORD your God disciplines you.
6 ULB ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. BSB BSB: Therefore you shall keep the commandments of the LORD your God, walking in His ways and fearing Him.
7 ULB ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ. BSB BSB: For the LORD your God is bringing you into a good land, a land of brooks and fountains and springs that flow through the valleys and hills;
8 ULB ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ. BSB BSB: a land of wheat, barley, vines, fig trees, and pomegranates; a land of olive oil and honey;
9 ULB ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು. BSB BSB: a land where you will eat food without scarcity, where you will lack nothing; a land whose rocks are iron and whose hills are ready to be mined for copper.
10 ULB ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು. BSB BSB: When you eat and are satisfied, you are to bless the LORD your God for the good land that He has given you.
11 ULB ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ. BSB BSB: Be careful not to forget the LORD your God by failing to keep His commandments and ordinances and statutes, which I am giving you this day.
12 ULB ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು, BSB BSB: Otherwise, when you eat and are satisfied, when you build fine houses in which to dwell,
13 ULB ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ, BSB BSB: and when your herds and flocks grow large and your silver and gold increase and all that you have is multiplied,
14 ULB ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ. BSB BSB: then your heart will become proud, and you will forget the LORD your God who brought you out of the land of Egypt, out of the house of slavery.
15 ULB ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ. BSB BSB: He led you through the vast and terrifying wilderness with its venomous snakes and scorpions, a thirsty and waterless land. He brought you water from the rock of flint.
16 ULB ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು BSB BSB: He fed you in the wilderness with manna that your fathers had not known, in order to humble you and test you, so that in the end He might cause you to prosper.
17 ULB ನಿಮ್ಮ ಮನಸ್ಸಿನೊಳಗೆ, <<ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು>> ಎಂದು ಅಂದುಕೊಂಡೀರಿ. BSB BSB: You might say in your heart, “The power and strength of my hands have made this wealth for me.”
18 ULB ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ. BSB BSB: But remember that it is the LORD your God who gives you the power to gain wealth, in order to confirm His covenant that He swore to your fathers even to this day.
19 ULB ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. BSB BSB: If you ever forget the LORD your God and go after other gods to worship and bow down to them, I testify against you today that you will surely perish.
20 ULB ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ. BSB BSB: Like the nations that the LORD has destroyed before you, so you will perish if you do not obey the LORD your God.
Select verses for actions: Enter goes to them and Escape comes back.