1 ULB ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು. BSB BSB: These are the words of the Teacher, the son of David, king in Jerusalem:
2 ULB ಪ್ರಸಂಗಿಯು ಹೀಗೆ ಹೇಳುತ್ತಾನೆ. <<ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ. BSB BSB: “Futility of futilities,” says the Teacher, “futility of futilities! Everything is futile!”
3 ULB ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು? BSB BSB: What does a man gain from all his labor, at which he toils under the sun?
4 ULB ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು. BSB BSB: Generations come and generations go, but the earth remains forever.
6 ULB ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ. BSB BSB: The wind blows southward, then turns northward; round and round it swirls, ever returning on its course.
7 ULB ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ. BSB BSB: All the rivers flow into the sea, yet the sea is never full; to the place from which the streams come, there again they flow.
8 ULB ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು. BSB BSB: All things are wearisome, more than one can describe; the eye is not satisfied with seeing, nor the ear content with hearing.
9 ULB ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ. BSB BSB: What has been will be again, and what has been done will be done again; there is nothing new under the sun.
10 ULB <ನೋಡು, ಇದು ಹೊಸದು> ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ. BSB BSB: Is there a case where one can say, “Look, this is new”? It has already existed in the ages before us.
11 ULB ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.>> BSB BSB: There is no remembrance of those who came before, and those yet to come will not be remembered by those who follow after.
12 ULB ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು. BSB BSB: I, the Teacher, was king over Israel in Jerusalem.
13 ULB ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ. BSB BSB: And I set my mind to seek and explore by wisdom all that is done under heaven. What a miserable task God has laid upon the sons of men to occupy them!
14 ULB ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ. BSB BSB: I have seen all the things that are done under the sun, and have found them all to be futile, a pursuit of the wind.
15 ULB ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ! BSB BSB: What is crooked cannot be straightened, and what is lacking cannot be counted.
16 ULB ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, <<ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ>> ಎಂದುಕೊಂಡೆನು. BSB BSB: I said to myself, “Behold, I have grown and increased in wisdom beyond all those before me who were over Jerusalem, and my mind has observed a wealth of wisdom and knowledge.”
17 ULB ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು. BSB BSB: So I set my mind to know wisdom and madness and folly; I learned that this, too, is a pursuit of the wind.
18 ULB ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ. BSB BSB: For with much wisdom comes much sorrow, and as knowledge grows, grief increases.
Select verses for actions: Enter goes to them and Escape comes back.