1 ULB ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು. BSB BSB: Cast your bread upon the waters, for after many days you will find it again.
2 ULB ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ. BSB BSB: Divide your portion among seven, or even eight, for you do not know what disaster may befall the land.
3 ULB ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. BSB BSB: If the clouds are full, they will pour out rain upon the earth; whether a tree falls to the south or to the north, in the place where it falls, there it will lie.
4 ULB ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ. BSB BSB: He who watches the wind will fail to sow, and he who observes the clouds will fail to reap.
5 ULB ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. BSB BSB: As you do not know the path of the wind, or how the bones are formed in a mother’s womb, so you cannot understand the work of God, the Maker of all things.
6 ULB ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು. BSB BSB: Sow your seed in the morning, and do not rest your hands in the evening, for you do not know which will succeed, whether this or that, or if both will equally prosper.
7 ULB ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. BSB BSB: Light is sweet, and it pleases the eyes to see the sun.
8 ULB ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ. BSB BSB: So if a man lives many years, let him rejoice in them all. But let him remember the days of darkness, for they will be many. Everything to come is futile.
9 ULB ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. BSB BSB: Rejoice, O young man, while you are young, and let your heart be glad in the days of your youth. Walk in the ways of your heart and in the sight of your eyes, but know that for all these things God will bring you to judgment.
10 ULB ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ. BSB BSB: So banish sorrow from your heart, and cast off pain from your body, for youth and vigor are fleeting.
Select verses for actions: Enter goes to them and Escape comes back.