1 ULB ನಾನು ಮನಸ್ಸಿನಲ್ಲಿ, <<ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು>> ಅಂದುಕೊಂಡೆನು. ಆಹಾ! ಇದು ವ್ಯರ್ಥವೇ. BSB BSB: I said to myself, “Come now, I will test you with pleasure; enjoy what is good!” But it proved to be futile.
2 ULB <<ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?>> ಅಂದುಕೊಂಡೆನು. BSB BSB: I said of laughter, “It is folly,” and of pleasure, “What does it accomplish?”
3 ULB ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು. BSB BSB: I sought to cheer my body with wine and to embrace folly—my mind still guiding me with wisdom—until I could see what was worthwhile for men to do under heaven during the few days of their lives.
4 ULB ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು. BSB BSB: I expanded my pursuits. I built houses and planted vineyards for myself.
5 ULB ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು. BSB BSB: I made gardens and parks for myself, where I planted all kinds of fruit trees.
6 ULB ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು. BSB BSB: I built reservoirs to water my groves of flourishing trees.
7 ULB ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು. BSB BSB: I acquired menservants and maidservants, and servants were born in my house. I also owned more herds and flocks than anyone in Jerusalem before me,
8 ULB ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು. BSB BSB: and I accumulated for myself silver and gold and the treasure of kings and provinces. I gathered to myself male and female singers, and the delights of the sons of men—many concubines.
9 ULB ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು. BSB BSB: So I became great and surpassed all in Jerusalem who had preceded me; and my wisdom remained with me.
10 ULB ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ. BSB BSB: Anything my eyes desired, I did not deny myself. I refused my heart no pleasure. For my heart took delight in all my work, and this was the reward for all my labor.
11 ULB ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ. BSB BSB: Yet when I considered all the works that my hands had accomplished and what I had toiled to achieve, I found everything to be futile, a pursuit of the wind; there was nothing to be gained under the sun.
12 ULB ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. BSB BSB: Then I turned to consider wisdom and madness and folly; for what more can the king’s successor do than what has already been accomplished?
13 ULB ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು. BSB BSB: And I saw that wisdom exceeds folly, just as light exceeds darkness:
14 ULB ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು. BSB BSB: The wise man has eyes in his head, but the fool walks in darkness. Yet I also came to realize that one fate overcomes them both.
15 ULB ಆಗ ನಾನು ನನ್ನ ಹೃದಯದಲ್ಲಿ, <<ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?>> ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು. BSB BSB: So I said to myself, “The fate of the fool will also befall me. What then have I gained by being wise?” And I said to myself that this too is futile.
16 ULB ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು. BSB BSB: For there is no lasting remembrance of the wise, just as with the fool, seeing that both will be forgotten in the days to come. Alas, the wise man will die just like the fool!
17 ULB ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ. BSB BSB: So I hated life, because the work that is done under the sun was grievous to me. For everything is futile and a pursuit of the wind.
18 ULB ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು. BSB BSB: I hated all for which I had toiled under the sun, because I must leave it to the man who comes after me.
19 ULB ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ. BSB BSB: And who knows whether that man will be wise or foolish? Yet he will take over all the labor at which I have worked skillfully under the sun. This too is futile.
20 ULB ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು. BSB BSB: So my heart began to despair over all the labor that I had done under the sun.
21 ULB ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ. BSB BSB: When there is a man who has labored with wisdom, knowledge, and skill, and he must give his portion to a man who has not worked for it, this too is futile and a great evil.
22 ULB ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು? BSB BSB: For what does a man get for all the toil and striving with which he labors under the sun?
23 ULB ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ. BSB BSB: Indeed, all his days are filled with grief, and his task is sorrowful; even at night, his mind does not rest. This too is futile.
24 ULB ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು. BSB BSB: Nothing is better for a man than to eat and drink and enjoy his work. I have also seen that this is from the hand of God.
25 ULB ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು? BSB BSB: For apart from Him, who can eat and who can find enjoyment?
26 ULB ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ. BSB BSB: To the man who is pleasing in His sight, He gives wisdom and knowledge and joy, but to the sinner He assigns the task of gathering and accumulating that which he will hand over to one who pleases God. This too is futile and a pursuit of the wind.
Select verses for actions: Enter goes to them and Escape comes back.