1 ULB ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು. BSB BSB: A good name is better than fine perfume, and one’s day of death is better than his day of birth.
2 ULB ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು. BSB BSB: It is better to enter a house of mourning than a house of feasting, since death is the end of every man, and the living should take this to heart.
3 ULB ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು. BSB BSB: Sorrow is better than laughter, for a sad countenance is good for the heart.
4 ULB ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ. BSB BSB: The heart of the wise is in the house of mourning, but the heart of fools is in the house of pleasure.
5 ULB ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು. BSB BSB: It is better to heed a wise man’s rebuke than to listen to the song of fools.
6 ULB ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ. BSB BSB: For like the crackling of thorns under the pot, so is the laughter of the fool. This too is futile.
7 ULB ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ. BSB BSB: Surely extortion turns a wise man into a fool, and a bribe corrupts the heart.
8 ULB ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ. BSB BSB: The end of a matter is better than the beginning, and a patient spirit is better than a proud one.
9 ULB ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು. BSB BSB: Do not be quickly provoked in your spirit, for anger settles in the lap of a fool.
10 ULB ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ. BSB BSB: Do not say, “Why were the old days better than these?” For it is unwise of you to ask about this.
11 ULB ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ. BSB BSB: Wisdom, like an inheritance, is good, and it benefits those who see the sun.
12 ULB ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ. BSB BSB: For wisdom, like money, is a shelter, and the advantage of knowledge is that wisdom preserves the life of its owner.
13 ULB ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು? BSB BSB: Consider the work of God: Who can straighten what He has bent?
14 ULB ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ. BSB BSB: In the day of prosperity, be joyful, but in the day of adversity, consider this: God has made one of these along with the other, so that a man cannot discover anything that will come after him.
15 ULB ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ. BSB BSB: In my futile life I have seen both of these: A righteous man perishing in his righteousness, and a wicked man living long in his wickedness.
16 ULB ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ? BSB BSB: Do not be overly righteous, and do not make yourself too wise. Why should you destroy yourself?
17 ULB ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ? BSB BSB: Do not be excessively wicked, and do not be a fool. Why should you die before your time?
18 ULB ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು. BSB BSB: It is good to grasp the one and not let the other slip from your hand. For he who fears God will follow both warnings.
19 ULB ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು. BSB BSB: Wisdom makes the wise man stronger than ten rulers in a city.
20 ULB ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ. BSB BSB: Surely there is no righteous man on earth who does good and never sins.
21 ULB ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು. BSB BSB: Do not pay attention to every word that is spoken, or you may hear your servant cursing you.
22 ULB ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ. BSB BSB: For you know in your heart that many times you yourself have cursed others.
23 ULB ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. <<ನಾನು ಜ್ಞಾನಿಯಾಗುವೆನು>> ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು. BSB BSB: All this I tested by wisdom, saying, “I resolve to be wise.” But it was beyond me.
24 ULB ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು? BSB BSB: What exists is out of reach and very deep. Who can fathom it?
25 ULB ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು. BSB BSB: I directed my mind to understand, to explore, to search out wisdom and explanations, and to understand the stupidity of wickedness and the folly of madness.
26 ULB ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು. BSB BSB: And I find more bitter than death the woman who is a snare, whose heart is a net, and whose hands are chains. The man who pleases God escapes her, but the sinner is ensnared.
27 ULB ಪ್ರಸಂಗಿಯು ಹೀಗೆ ಹೇಳುತ್ತಾನೆ, <<ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ>> ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ. BSB BSB: “Behold,” says the Teacher, “I have discovered this by adding one thing to another to find an explanation.
28 ULB ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ. BSB BSB: While my soul was still searching but not finding, among a thousand I have found one upright man, but among all these I have not found one such woman.
29 ULB ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ. BSB BSB: Only this have I found: I have discovered that God made mankind upright, but they have sought out many schemes.”
Select verses for actions: Enter goes to them and Escape comes back.