1 ULB ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು. BSB BSB: When Mordecai learned of all that had happened, he tore his clothes, put on sackcloth and ashes, and went out into the middle of the city, wailing loudly and bitterly.
2 ULB ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು. BSB BSB: But he went only as far as the king’s gate, because the law prohibited anyone wearing sackcloth from entering that gate.
3 ULB ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು. BSB BSB: In every province to which the king’s command and edict came, there was great mourning among the Jews. They fasted, wept, and lamented, and many lay in sackcloth and ashes.
4 ULB ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, <<ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ>> ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ. BSB BSB: When Esther’s maidens and eunuchs came and told her about Mordecai, the queen was overcome with distress. She sent clothes for Mordecai to wear instead of his sackcloth, but he would not accept them.
5 ULB ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, <<ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ>> ಎಂದು ಹೇಳಿಕಳುಹಿಸಿದಳು. BSB BSB: Then Esther summoned Hathach, one of the king’s eunuchs appointed to her, and she dispatched him to Mordecai to learn what was troubling him and why.
6 ULB ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು. BSB BSB: So Hathach went out to Mordecai in the city square in front of the king’s gate,
7 ULB ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು. BSB BSB: and Mordecai told him all that had happened to him, including the exact amount of money that Haman had promised to pay into the royal treasury in order to destroy the Jews.
8 ULB ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, <<ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ>> ಎಂದು ಹೇಳಿಕಳುಹಿಸಿದನು. BSB BSB: Mordecai also gave Hathach a copy of the written decree issued in Susa for the destruction of the Jews, to show and explain to Esther, urging her to approach the king, implore his favor, and plead before him for her people.
9 ULB ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು. BSB BSB: So Hathach went back and relayed Mordecai’s response to Esther.
10 ULB ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ, BSB BSB: Then Esther spoke to Hathach and instructed him to tell Mordecai,
11 ULB <<ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ>> ಎಂದು ಹೇಳಿಸಿದಳು. BSB BSB: “All the royal officials and the people of the king’s provinces know that one law applies to every man or woman who approaches the king in the inner court without being summoned—that he be put to death. Only if the king extends the gold scepter may that person live. But I have not been summoned to appear before the king for the past thirty days.”
12 ULB ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು. BSB BSB: When Esther’s words were relayed to Mordecai,
13 ULB ಅವನು ಎಸ್ತೇರಳಿಗೆ, <<ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ. BSB BSB: he sent back to her this reply: “Do not imagine that because you are in the king’s palace you alone will escape the fate of all the Jews.
14 ULB ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು>> ಎಂದು ಹೇಳಿಕಳುಹಿಸಿದನು. BSB BSB: For if you remain silent at this time, relief and deliverance for the Jews will arise from another place, but you and your father’s house will perish. And who knows if perhaps you have come to the kingdom for such a time as this?”
15 ULB ಆಗ ಎಸ್ತೇರಳು ಮೊರ್ದೆಕೈಗೆ, <<ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು; BSB BSB: Then Esther sent this reply to Mordecai:
16 ULB ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ>> ಎಂದು ಹೇಳಿಸಿದಳು. BSB BSB: “Go and assemble all the Jews who can be found in Susa, and fast for me. Do not eat or drink for three days, night or day, and I and my maidens will fast as you do. After that, I will go to the king, even though it is against the law. And if I perish, I perish!”
17 ULB ಮೊರ್ದೆಕೈ ಹಿಂದಿರುಗಿ ಹೋಗಿ ಎಸ್ತೇರಳು ಹೇಳಿದಂತೆಯೇ ಮಾಡಿದನು. BSB BSB: So Mordecai went and did all that Esther had instructed him.
Select verses for actions: Enter goes to them and Escape comes back.