1 ULB ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು. BSB BSB: That same day King Xerxes awarded Queen Esther the estate of Haman, the enemy of the Jews. And Mordecai entered the king’s presence because Esther had revealed his relation to her.
2 ULB ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು. BSB BSB: The king removed the signet ring he had recovered from Haman and presented it to Mordecai. And Esther appointed Mordecai over the estate of Haman.
3 ULB ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, <<ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು>> ಎಂದು ವಿಜ್ಞಾಪಿಸಿದಳು. BSB BSB: And once again, Esther addressed the king. She fell at his feet weeping and begged him to revoke the evil scheme of Haman the Agagite, which he had devised against the Jews.
4 ULB ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು. BSB BSB: The king extended the gold scepter toward Esther, and she arose and stood before the king.
5 ULB ಆಗ ಎಸ್ತೇರಳು ಅವನಿಗೆ, <<ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು. BSB BSB: “If it pleases the king,” she said, “and if I have found favor in his sight, and the matter seems proper to the king, and I am pleasing in his sight, may an order be written to revoke the letters that the scheming Haman son of Hammedatha, the Agagite, wrote to destroy the Jews in all the king’s provinces.
6 ULB ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?>> ಎಂದು ಬಿನ್ನವಿಸಿದಳು. BSB BSB: For how could I bear to see the disaster that would befall my people? How could I bear to see the destruction of my kindred?”
7 ULB ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, <<ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ. BSB BSB: So King Xerxes said to Esther the Queen and Mordecai the Jew, “Behold, I have given Haman’s estate to Esther, and he was hanged on the gallows because he attacked the Jews.
8 ULB ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ>> ಎಂದು ಹೇಳಿದನು. BSB BSB: Now you may write in the king’s name as you please regarding the Jews, and seal it with the royal signet ring. For a decree that is written in the name of the king and sealed with the royal signet ring cannot be revoked.”
9 ULB ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು. BSB BSB: At once the royal scribes were summoned, and on the twenty-third day of the third month (the month of Sivan), they recorded all of Mordecai’s orders to the Jews and to the satraps, governors, and princes of the 127 provinces from India to Cush—writing to each province in its own script, to every people in their own language, and to the Jews in their own script and language.
10 ULB ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು. BSB BSB: Mordecai wrote in the name of King Xerxes and sealed it with the royal signet ring. He sent the documents by mounted couriers riding on swift horses bred from the royal mares.
11 ULB ಆ ಪತ್ರಗಳಲ್ಲಿ ಅರಸನು, <<ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು. BSB BSB: By these letters the king permitted the Jews in each and every city the right to assemble and defend themselves, to destroy, kill, and annihilate all the forces of any people or province hostile to them, including women and children, and to plunder their possessions.
12 ULB ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು. BSB BSB: The single day appointed throughout all the provinces of King Xerxes was the thirteenth day of the twelfth month, the month of Adar.
13 ULB ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು>> ಎಂದು ಅಪ್ಪಣೆಮಾಡಿದ್ದನು. BSB BSB: A copy of the text of the edict was to be issued in every province and published to all the people, so that the Jews would be ready on that day to avenge themselves on their enemies.
14 ULB ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು. BSB BSB: The couriers rode out in haste on their royal horses, pressed on by the command of the king. And the edict was also issued in the citadel of Susa.
15 ULB ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು. BSB BSB: Mordecai went out from the presence of the king in royal garments of blue and white, with a large gold crown and a purple robe of fine linen. And the city of Susa shouted and rejoiced.
16 ULB ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು. BSB BSB: For the Jews it was a time of light and gladness, of joy and honor.
17 ULB ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು. BSB BSB: In every province and every city, wherever the king’s edict and decree reached, there was joy and gladness among the Jews, with feasting and celebrating. And many of the people of the land themselves became Jews, because the fear of the Jews had fallen upon them.
Select verses for actions: Enter goes to them and Escape comes back.