1 ULB ಯೆಹೋವನು ಮೋಶೆಗೆ, <<ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು. BSB BSB: Then the LORD said to Moses, “I will bring upon Pharaoh and Egypt one more plague. After that, he will allow you to leave this place. And when he lets you go, he will drive you out completely.
2 ULB ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು>> ಎಂದನು. BSB BSB: Now announce to the people that men and women alike should ask their neighbors for articles of silver and gold.”
3 ULB ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು. BSB BSB: And the LORD gave the people favor in the sight of the Egyptians. Moreover, Moses himself was highly regarded in Egypt by Pharaoh’s officials and by the people.
4 ULB ಆಗ ಮೋಶೆ ಫರೋಹನಿಗೆ, <<ಯೆಹೋವನು ಅಪ್ಪಣೆಮಾಡುವುದೇನೆಂದರೆ, <ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು. BSB BSB: So Moses declared, “This is what the LORD says: ‘About midnight I will go throughout Egypt,
5 ULB ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು. BSB BSB: and every firstborn son in the land of Egypt will die, from the firstborn of Pharaoh who sits on his throne, to the firstborn of the servant girl behind the hand mill, as well as the firstborn of all the cattle.
6 ULB ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ. BSB BSB: Then a great cry will go out over all the land of Egypt. Such an outcry has never been heard before and will never be heard again.
7 ULB ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ> BSB BSB: But among all the Israelites, not even a dog will snarl at man or beast.’ Then you will know that the LORD makes a distinction between Egypt and Israel.
8 ULB ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, <ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು> ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು>> ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. BSB BSB: And all these officials of yours will come and bow before me, saying, ‘Go, you and all the people who follow you!’ After that, I will depart.” And hot with anger, Moses left Pharaoh’s presence.
9 ULB ಯೆಹೋವನು ಮೋಶೆಗೆ, <<ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ>> ಎಂದು ಹೇಳಿದನು. BSB BSB: The LORD said to Moses, “Pharaoh will not listen to you, so that My wonders may be multiplied in the land of Egypt.”
10 ULB ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು. BSB BSB: Moses and Aaron did all these wonders before Pharaoh, but the LORD hardened Pharaoh’s heart so that he would not let the Israelites go out of his land.