1 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ BSB BSB: Then the LORD said to Moses,
2 ULB <<ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು. BSB BSB: “Tell the Israelites to turn back and encamp before Pi-hahiroth, between Migdol and the sea. You are to encamp by the sea, directly opposite Baal-zephon.
3 ULB ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, <ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ> ಎಂದು ಅಂದುಕೊಳ್ಳುವನು. BSB BSB: For Pharaoh will say of the Israelites, ‘They are wandering the land in confusion; the wilderness has boxed them in.’
4 ULB ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. <ನಾನೇ ಯೆಹೋವನು> ಎಂದು ಐಗುಪ್ತ್ಯರಿಗೆ ತಿಳಿದು ಬರುವುದು>> ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು. BSB BSB: And I will harden Pharaoh’s heart so that he will pursue them. But I will gain honor by means of Pharaoh and all his army, and the Egyptians will know that I am the LORD.” So this is what the Israelites did.
5 ULB ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, <<ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ>> ಎಂದುಕೊಂಡರು. BSB BSB: When the king of Egypt was told that the people had fled, Pharaoh and his officials changed their minds about them and said, “What have we done? We have released Israel from serving us.”
6 ULB ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು. BSB BSB: So Pharaoh prepared his chariot and took his army with him.
7 ULB ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು. BSB BSB: He took 600 of the best chariots, and all the other chariots of Egypt, with officers over all of them.
8 ULB ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು. BSB BSB: And the LORD hardened the heart of Pharaoh king of Egypt so that he pursued the Israelites, who were marching out defiantly.
9 ULB ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು. BSB BSB: The Egyptians—all Pharaoh’s horses and chariots, horsemen and troops—pursued the Israelites and overtook them as they camped by the sea near Pi-hahiroth, opposite Baal-zephon.
10 ULB ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು. BSB BSB: As Pharaoh approached, the Israelites looked up and saw the Egyptians marching after them, and they were terrified and cried out to the LORD.
11 ULB ಅವರು ಮೋಶೆಗೆ, <<ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ? BSB BSB: They said to Moses, “Was it because there were no graves in Egypt that you brought us into the wilderness to die? What have you done to us by bringing us out of Egypt?
12 ULB ನಾವು ಐಗುಪ್ತ ದೇಶದಲ್ಲಿರುವಾಗಲೇ, <ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು> ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ>> ಎಂದು ಹೇಳಿದರು. BSB BSB: Did we not say to you in Egypt, ‘Leave us alone so that we may serve the Egyptians’? For it would have been better for us to serve the Egyptians than to die in the wilderness.”
13 ULB ಆದರೆ ಮೋಶೆ ಆ ಜನರಿಗೆ, <<ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ. BSB BSB: But Moses told the people, “Do not be afraid. Stand firm and you will see the LORD’s salvation, which He will accomplish for you today; for the Egyptians you see today, you will never see again.
14 ULB ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ>> ಎಂದು ಹೇಳಿದನು. BSB BSB: The LORD will fight for you; you need only to be still.”
15 ULB ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು. BSB BSB: Then the LORD said to Moses, “Why are you crying out to Me? Tell the Israelites to go forward.
16 ULB ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು. BSB BSB: And as for you, lift up your staff and stretch out your hand over the sea and divide it, so that the Israelites can go through the sea on dry ground.
17 ULB ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು. BSB BSB: And I will harden the hearts of the Egyptians so that they will go in after them. Then I will gain honor by means of Pharaoh and all his army and chariots and horsemen.
18 ULB ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು>> ಎಂದನು. BSB BSB: The Egyptians will know that I am the LORD when I am honored through Pharaoh, his chariots, and his horsemen.”
19 ULB ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. BSB BSB: And the angel of God, who had gone before the camp of Israel, withdrew and went behind them. The pillar of cloud also moved from before them and stood behind them,
20 ULB ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ. BSB BSB: so that it came between the camps of Egypt and Israel. The cloud was there in the darkness, but it lit up the night. So all night long neither camp went near the other.
21 ULB ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು. BSB BSB: Then Moses stretched out his hand over the sea, and all that night the LORD drove back the sea with a strong east wind that turned it into dry land. So the waters were divided,
22 ULB ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು. BSB BSB: and the Israelites went through the sea on dry ground, with walls of water on their right and on their left.
23 ULB ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು. BSB BSB: And the Egyptians chased after them—all Pharaoh’s horses, chariots, and horsemen—and followed them into the sea.
24 ULB ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು. BSB BSB: At morning watch, however, the LORD looked down on the army of the Egyptians from the pillar of fire and cloud, and He threw their camp into confusion.
25 ULB ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, <<ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ>> ಎಂದು ಹೇಳಿಕೊಂಡರು. BSB BSB: He caused their chariot wheels to wobble, so that they had difficulty driving. “Let us flee from the Israelites,” said the Egyptians, “for the LORD is fighting for them against Egypt!”
26 ULB ಅಷ್ಟರಲ್ಲಿ ಯೆಹೋವನು ಮೋಶೆಗೆ, <<ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು>> ಎಂದು ಹೇಳಿದನು. BSB BSB: Then the LORD said to Moses, “Stretch out your hand over the sea, so that the waters may flow back over the Egyptians and their chariots and horsemen.”
27 ULB ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು. BSB BSB: So Moses stretched out his hand over the sea, and at daybreak the sea returned to its normal state. As the Egyptians were retreating, the LORD swept them into the sea.
28 ULB ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ. BSB BSB: The waters flowed back and covered the chariots and horsemen—the entire army of Pharaoh that had chased the Israelites into the sea. Not one of them survived.
29 ULB ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು. BSB BSB: But the Israelites had walked through the sea on dry ground, with walls of water on their right and on their left.
30 ULB ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು. BSB BSB: That day the LORD saved Israel from the hand of the Egyptians, and Israel saw the Egyptians dead on the shore.
31 ULB ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು. BSB BSB: When Israel saw the great power that the LORD had exercised over the Egyptians, the people feared the LORD and believed in Him and in His servant Moses.