2 ULB ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು. BSB BSB: The LORD is my strength and my song, and He has become my salvation. He is my God, and I will praise Him, my father’s God, and I will exalt Him.
3 ULB ಯೆಹೋವನು ಯುದ್ಧವೀರನು; ಯೆಹೋವ ಎಂಬುದು ಆತನ ನಾಮವಾಗಿದೆ. BSB BSB: The LORD is a warrior, the LORD is His name.
4 ULB ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು. BSB BSB: Pharaoh’s chariots and army He has cast into the sea; the finest of his officers are drowned in the Red Sea.
5 ULB ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು. BSB BSB: The depths have covered them; they sank there like a stone.
6 ULB ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ. BSB BSB: Your right hand, O LORD, is majestic in power; Your right hand, O LORD, has shattered the enemy.
7 ULB ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ. BSB BSB: You overthrew Your adversaries by Your great majesty. You unleashed Your burning wrath; it consumed them like stubble.
8 ULB ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು. BSB BSB: At the blast of Your nostrils the waters piled up; like a wall the currents stood firm; the depths congealed in the heart of the sea.
9 ULB ಶತ್ರುವು, <ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು> ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು. BSB BSB: The enemy declared, ‘I will pursue, I will overtake. I will divide the spoils; I will gorge myself on them. I will draw my sword; my hand will destroy them.’
10 ULB ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು. BSB BSB: But You blew with Your breath, and the sea covered them. They sank like lead in the mighty waters.
11 ULB ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ? BSB BSB: Who among the gods is like You, O LORD? Who is like You—majestic in holiness, revered with praises, performing wonders?
12 ULB ನೀನು ನಿನ್ನ ಬಲಗೈಯನ್ನು ಚಾಚಿದಾಗ, ಭೂಮಿಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ. BSB BSB: You stretched out Your right hand, and the earth swallowed them up.
13 ULB ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ. BSB BSB: With loving devotion You will lead the people You have redeemed; with Your strength You will guide them to Your holy dwelling.
14 ULB ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು. BSB BSB: The nations will hear and tremble; anguish will grip the dwellers of Philistia.
15 ULB ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು. BSB BSB: Then the chiefs of Edom will be dismayed; trembling will seize the leaders of Moab; those who dwell in Canaan will melt away,
16 ULB ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು. BSB BSB: and terror and dread will fall on them. By the power of Your arm they will be as still as a stone until Your people pass by, O LORD, until the people You have bought pass by.
17 ULB ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ. BSB BSB: You will bring them in and plant them on the mountain of Your inheritance—the place, O LORD, You have prepared for Your dwelling, the sanctuary, O Lord, Your hands have established.
18 ULB ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.>> BSB BSB: The LORD will reign forever and ever!”
19 ULB ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು. BSB BSB: For when Pharaoh’s horses, chariots, and horsemen went into the sea, the LORD brought the waters of the sea back over them. But the Israelites walked through the sea on dry ground.
20 ULB ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು. BSB BSB: Then Miriam the prophetess, Aaron’s sister, took a tambourine in her hand, and all the women followed her with tambourines and dancing.
21 ULB ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: <<ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.>> BSB BSB: And Miriam sang back to them: “Sing to the LORD, for He is highly exalted; the horse and rider He has thrown into the sea.”
22 ULB ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು. BSB BSB: Then Moses led Israel from the Red Sea, and they went out into the Desert of Shur. For three days they walked in the desert without finding water.
23 ULB ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು. BSB BSB: And when they came to Marah, they could not drink the water there because it was bitter. (That is why it was named Marah.)
24 ULB ಜನರು ಮೋಶೆಗೆ, <<ನಾವೇನು ಕುಡಿಯಬೇಕು?>> ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು. BSB BSB: So the people grumbled against Moses, saying, “What are we to drink?”
25 ULB ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು. BSB BSB: And Moses cried out to the LORD, and the LORD showed him a log. And when he cast it into the waters, they were sweetened. There the LORD made for them a statute and an ordinance, and there He tested them,
26 ULB ಯೆಹೋವನು ಅವರಿಗೆ, <<ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ>> ಎಂದನು. BSB BSB: saying, “If you will listen carefully to the voice of the LORD your God, and do what is right in His eyes, and pay attention to His commands, and keep all His statutes, then I will not bring on you any of the diseases I inflicted on the Egyptians. For I am the LORD who heals you.”
27 ULB ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು. BSB BSB: Then they came to Elim, where there were twelve springs of water and seventy palm trees, and they camped there by the waters.