1 ULB ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು. BSB BSB: On the fifteenth day of the second month after they had left the land of Egypt, the whole congregation of Israel set out from Elim and came to the Desert of Sin, which is between Elim and Sinai.
2 ULB ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು. BSB BSB: And there in the desert the whole congregation of Israel grumbled against Moses and Aaron.
3 ULB ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, <<ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು>> ಎಂದರು. BSB BSB: “If only we had died by the LORD’s hand in the land of Egypt!” they said. “There we sat by pots of meat and ate our fill of bread, but you have brought us into this desert to starve this whole assembly to death!”
4 ULB ಆಗ ಯೆಹೋವನು ಮೋಶೆಗೆ, <<ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ. BSB BSB: Then the LORD said to Moses, “Behold, I will rain down bread from heaven for you. Each day the people are to go out and gather enough for that day. In this way I will test whether or not they will follow My instructions.
5 ULB ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು>> ಎಂದು ಹೇಳಿದನು. BSB BSB: Then on the sixth day, when they prepare what they bring in, it will be twice as much as they gather on the other days.”
6 ULB ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, <<ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು. BSB BSB: So Moses and Aaron said to all the Israelites, “This evening you will know that it was the LORD who brought you out of the land of Egypt,
7 ULB ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?>> ಎಂದು ಹೇಳಿದರು. BSB BSB: and in the morning you will see the LORD’s glory, because He has heard your grumbling against Him. For who are we, that you should grumble against us?”
8 ULB ಆಗ ಮೋಶೆ, <<ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ>> ಎಂದನು. BSB BSB: And Moses added, “The LORD will give you meat to eat this evening and bread to fill you in the morning, for He has heard your grumbling against Him. Who are we? Your grumblings are not against us but against the LORD.”
9 ULB ಮೋಶೆಯು ಆರೋನನಿಗೆ, <<ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, <ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು>>> ಎಂದು ಹೇಳಿದನು. BSB BSB: Then Moses said to Aaron, “Tell the whole congregation of Israel, ‘Come before the LORD, for He has heard your grumbling.’”
10 ULB ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. BSB BSB: And as Aaron was speaking to the whole congregation of Israel, they looked toward the desert, and there in a cloud the glory of the LORD appeared.
11 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: Then the LORD said to Moses,
12 ULB <<ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, <ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು>>> ಎಂಬುದೇ. BSB BSB: “I have heard the grumbling of the Israelites. Tell them, ‘At twilight you will eat meat, and in the morning you will be filled with bread. Then you will know that I am the LORD your God.’”
13 ULB ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. BSB BSB: That evening quail came and covered the camp, and in the morning there was a layer of dew around the camp.
14 ULB ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು. BSB BSB: When the layer of dew had evaporated, there were thin flakes on the desert floor, as fine as frost on the ground.
15 ULB ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, <<ಇದೇನಿರಬಹುದು?>> ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, <<ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ. BSB BSB: When the Israelites saw it, they asked one another, “What is it?” For they did not know what it was. So Moses told them, “It is the bread that the LORD has given you to eat.
16 ULB ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ>> ಎಂದು ಹೇಳಿದನು. BSB BSB: This is what the LORD has commanded: ‘Each one is to gather as much as he needs. You may take an omer for each person in your tent.’”
17 ULB ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು. BSB BSB: So the Israelites did this. Some gathered more, and some less.
18 ULB ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು. BSB BSB: When they measured it by the omer, he who gathered much had no excess, and he who gathered little had no shortfall. Each one gathered as much as he needed to eat.
19 ULB ಅದಲ್ಲದೆ ಮೋಶೆ ಅವರಿಗೆ, <<ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು>> ಎಂದು ಹೇಳಿದನು. BSB BSB: Then Moses said to them, “No one may keep any of it until morning.”
20 ULB ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು. BSB BSB: But they did not listen to Moses; some people left part of it until morning, and it became infested with maggots and began to smell. So Moses was angry with them.
21 ULB ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು. BSB BSB: Every morning each one gathered as much as was needed, and when the sun grew hot, it melted away.
22 ULB ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು. BSB BSB: On the sixth day, they gathered twice as much food—two omers per person—and all the leaders of the congregation came and reported this to Moses.
23 ULB ಅದಕ್ಕೆ ಅವನು, <<ಇದು ಯೆಹೋವನು ಹೇಳಿದ ಮಾತು, <ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ>>> ಎಂದನು. BSB BSB: He told them, “This is what the LORD has said: ‘Tomorrow is to be a day of complete rest, a holy Sabbath to the LORD. So bake what you want to bake, and boil what you want to boil. Then set aside whatever remains and keep it until morning.’”
24 ULB ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ. BSB BSB: So they set it aside until morning as Moses had commanded, and it did not smell or contain any maggots.
25 ULB ಆಗ ಮೋಶೆ ಅವರಿಗೆ, <<ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ. BSB BSB: “Eat it today,” Moses said, “because today is a Sabbath to the LORD. Today you will not find anything in the field.
26 ULB ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ>> ಎಂದು ಹೇಳಿದನು. BSB BSB: For six days you may gather, but on the seventh day, the Sabbath, it will not be there.”
27 ULB ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ. BSB BSB: Yet on the seventh day some of the people went out to gather, but they did not find anything.
28 ULB ಆಗ ಯೆಹೋವನು ಮೋಶೆಗೆ, <<ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ? BSB BSB: Then the LORD said to Moses, “How long will you refuse to keep My commandments and instructions?
29 ULB ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು>> ಎಂದು ಹೇಳಿದನು. BSB BSB: Understand that the LORD has given you the Sabbath; that is why on the sixth day He will give you bread for two days. On the seventh day, everyone must stay where he is; no one may leave his place.”
30 ULB ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು. BSB BSB: So the people rested on the seventh day.
31 ULB ಇಸ್ರಾಯೇಲರು ಆ ಆಹಾರಕ್ಕೆ <<ಮನ್ನ>> ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು. BSB BSB: Now the house of Israel called the bread manna. It was white like coriander seed and tasted like wafers made with honey.
32 ULB ಮೋಶೆಯು ಜನರಿಗೆ, <<ಯೆಹೋವನು ಆಜ್ಞಾಪಿಸಿದ್ದು ಇದೇ, <ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು>>> ಎಂದು ಹೇಳಿದನು. BSB BSB: Moses said, “This is what the LORD has commanded: ‘Keep an omer of manna for the generations to come, so that they may see the bread I fed you in the wilderness when I brought you out of the land of Egypt.’”
33 ULB ಆದಕಾರಣ ಮೋಶೆಯು ಆರೋನನಿಗೆ, <<ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು>> ಎಂದು ಹೇಳಿದನು. BSB BSB: So Moses told Aaron, “Take a jar and fill it with an omer of manna. Then place it before the LORD to be preserved for the generations to come.”
34 ULB ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು. BSB BSB: And Aaron placed it in front of the Testimony, to be preserved just as the LORD had commanded Moses.
35 ULB ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು. BSB BSB: The Israelites ate manna forty years, until they came to a land where they could settle; they ate manna until they reached the border of Canaan.
36 ULB ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ. BSB BSB: (Now an omer is a tenth of an ephah.)