1 ULB ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು. BSB BSB: In the third month, on the same day of the month that the Israelites had left the land of Egypt, they came to the Wilderness of Sinai.
2 ULB ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು. BSB BSB: After they had set out from Rephidim, they entered the Wilderness of Sinai, and Israel camped there in front of the mountain.
3 ULB ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, <<ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು. BSB BSB: Then Moses went up to God, and the LORD called to him from the mountain, “This is what you are to tell the house of Jacob and explain to the sons of Israel:
4 ULB <ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ. BSB BSB: ‘You have seen for yourselves what I did to Egypt, and how I carried you on eagles’ wings and brought you to Myself.
5 ULB ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ. BSB BSB: Now if you will indeed obey My voice and keep My covenant, you will be My treasured possession out of all the nations—for the whole earth is Mine.
6 ULB ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ> ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ>> ಅಂದನು. BSB BSB: And unto Me you shall be a kingdom of priests and a holy nation.’ These are the words that you are to speak to the Israelites.”
7 ULB ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. BSB BSB: So Moses went back and summoned the elders of the people and set before them all these words that the LORD had commanded him.
8 ULB ಜನರೆಲ್ಲರೂ ಒಗ್ಗಟ್ಟಾಗಿ, <<ಯೆಹೋವನು ಹೇಳಿದಂತೆಯೇ ಮಾಡುವೆವು>> ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು. BSB BSB: And all the people answered together, “We will do everything that the LORD has spoken.” So Moses brought their words back to the LORD.
9 ULB ಯೆಹೋವನು ಮೋಶೆಗೆ, <<ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ>> ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು. BSB BSB: The LORD said to Moses, “Behold, I will come to you in a dense cloud, so that the people will hear when I speak with you, and they will always put their trust in you.” And Moses relayed to the LORD what the people had said.
10 ULB ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು, BSB BSB: Then the LORD said to Moses, “Go to the people and consecrate them today and tomorrow. They must wash their clothes
11 ULB ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು. BSB BSB: and be prepared by the third day, for on the third day the LORD will come down on Mount Sinai in the sight of all the people.
12 ULB ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, <ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.> BSB BSB: And you are to set up a boundary for the people around the mountain and tell them, ‘Be careful not to go up on the mountain or touch its base. Whoever touches the mountain shall surely be put to death.
13 ULB ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು>> ಎಂದು ಹೇಳು ಎಂದನು. BSB BSB: No hand shall touch him, but he shall surely be stoned or shot with arrows—whether man or beast, he must not live.’ Only when the ram’s horn sounds a long blast may they approach the mountain.”
14 ULB ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು. BSB BSB: When Moses came down from the mountain to the people, he consecrated them, and they washed their clothes.
15 ULB ಆಗ ಮೋಶೆ ಜನರಿಗೆ, <<ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು>> ಎಂದು ಹೇಳಿದನು. BSB BSB: “Be prepared for the third day,” he said to the people. “Do not draw near to a woman.”
16 ULB ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು. BSB BSB: On the third day, when morning came, there was thunder and lightning. A thick cloud was upon the mountain, and a very loud blast of the ram’s horn went out, so that all the people in the camp trembled.
17 ULB ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು. BSB BSB: Then Moses brought the people out of the camp to meet with God, and they stood at the foot of the mountain.
18 ULB ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. BSB BSB: Mount Sinai was completely enveloped in smoke, because the LORD had descended on it in fire. And the smoke rose like the smoke of a furnace, and the whole mountain quaked violently.
19 ULB ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು. BSB BSB: And as the sound of the ram’s horn grew louder and louder, Moses spoke and God answered him in the thunder.
20 ULB ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು. BSB BSB: The LORD descended to the top of Mount Sinai and called Moses to the summit. So Moses went up,
21 ULB ಆಗ ಯೆಹೋವನು ಮೋಶೆಗೆ, <<ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು. BSB BSB: and the LORD said to him, “Go down and warn the people not to break through to see the LORD, lest many of them perish.
22 ULB ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು>> ಎಂದು ಹೇಳಿದನು. BSB BSB: Even the priests who approach the LORD must consecrate themselves, or the LORD will break out against them.”
23 ULB ಅದಕ್ಕೆ ಮೋಶೆ ಯೆಹೋವನಿಗೆ, <<ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ <ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು>>> ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು. BSB BSB: But Moses said to the LORD, “The people cannot come up Mount Sinai, for You solemnly warned us, ‘Put a boundary around the mountain and set it apart as holy.’”
24 ULB ಯೆಹೋವನು ಮೋಶೆಗೆ, <<ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು>> ಎಂದು ಹೇಳಿದನು. BSB BSB: And the LORD replied, “Go down and bring Aaron with you. But the priests and the people must not break through to come up to the LORD, or He will break out against them.”
25 ULB ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು. BSB BSB: So Moses went down to the people and spoke to them.