1 ULB ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು. BSB BSB: “You shall not spread a false report. Do not join the wicked by being a malicious witness.
2 ULB ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. BSB BSB: You shall not follow the crowd in wrongdoing. When you testify in a lawsuit, do not pervert justice by siding with the crowd.
3 ULB ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು. BSB BSB: And do not show favoritism to a poor man in his lawsuit.
4 ULB ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು. BSB BSB: If you encounter your enemy’s stray ox or donkey, you must return it to him.
5 ULB ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು. BSB BSB: If you see the donkey of one who hates you fallen under its load, do not leave it there; you must help him with it.
6 ULB ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು. BSB BSB: You shall not deny justice to the poor in their lawsuits.
7 ULB ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ. BSB BSB: Stay far away from a false accusation. Do not kill the innocent or the just, for I will not acquit the guilty.
8 ULB ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ. BSB BSB: Do not accept a bribe, for a bribe blinds those who see and twists the words of the righteous.
9 ULB ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ. BSB BSB: Do not oppress a foreign resident, since you yourselves know how it feels to be foreigners; for you were foreigners in the land of Egypt.
10 ULB ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ. BSB BSB: For six years you are to sow your land and gather its produce,
11 ULB ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು. BSB BSB: but in the seventh year you must let it rest and lie fallow, so that the poor among your people may eat from the field and the wild animals may consume what they leave. Do the same with your vineyard and olive grove.
12 ULB ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ. BSB BSB: For six days you are to do your work, but on the seventh day you must cease, so that your ox and your donkey may rest and the son of your maidservant may be refreshed, as well as the foreign resident.
13 ULB ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು. BSB BSB: Pay close attention to everything I have said to you. You must not invoke the names of other gods; they must not be heard on your lips.
14 ULB ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು. BSB BSB: Three times a year you are to celebrate a feast to Me.
15 ULB ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು. BSB BSB: You are to keep the Feast of Unleavened Bread as I commanded you: At the appointed time in the month of Abib you are to eat unleavened bread for seven days, because that was the month you came out of Egypt. No one may appear before Me empty-handed.
17 ULB ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು. BSB BSB: Three times a year all your males are to appear before the Lord GOD.
18 ULB ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು. BSB BSB: You must not offer the blood of My sacrifices with anything leavened, nor may the fat of My feast remain until morning.
19 ULB ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. BSB BSB: Bring the best of the firstfruits of your soil to the house of the LORD your God. You must not cook a young goat in its mother’s milk.
20 ULB ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ. BSB BSB: Behold, I am sending an angel before you to protect you along the way and to bring you to the place I have prepared.
21 ULB ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು. BSB BSB: Pay attention to him and listen to his voice; do not defy him, for he will not forgive rebellion, since My Name is in him.
22 ULB ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು. BSB BSB: But if you will listen carefully to his voice and do everything I say, I will be an enemy to your enemies and a foe to your foes.
23 ULB ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು. BSB BSB: For My angel will go before you and bring you into the land of the Amorites, Hittites, Perizzites, Canaanites, Hivites, and Jebusites, and I will annihilate them.
24 ULB ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು. BSB BSB: You must not bow down to their gods or serve them or follow their practices. Instead, you are to demolish them and smash their sacred stones to pieces.
25 ULB ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು. BSB BSB: So you shall serve the LORD your God, and He will bless your bread and your water. And I will take away sickness from among you.
26 ULB ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು. BSB BSB: No woman in your land will miscarry or be barren; I will fulfill the number of your days.
27 ULB ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು. BSB BSB: I will send My terror ahead of you and throw into confusion every nation you encounter. I will make all your enemies turn and run.
28 ULB ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು. BSB BSB: I will send the hornet before you to drive the Hivites and Canaanites and Hittites out of your way.
29 ULB ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು. BSB BSB: I will not drive them out before you in a single year; otherwise the land would become desolate and wild animals would multiply against you.
30 ULB ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು. BSB BSB: Little by little I will drive them out ahead of you, until you become fruitful and possess the land.
31 ULB ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ. BSB BSB: And I will establish your borders from the Red Sea to the Sea of the Philistines, and from the desert to the Euphrates. For I will deliver the inhabitants into your hand, and you will drive them out before you.
32 ULB ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು. BSB BSB: You shall make no covenant with them or with their gods.
33 ULB ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು. BSB BSB: They must not remain in your land, lest they cause you to sin against Me. For if you serve their gods, it will surely be a snare to you.”