1 ULB ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, BSB BSB: Then the LORD said to Moses,
2 ULB <<ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು. BSB BSB: “Tell the Israelites to bring Me an offering. You are to receive My offering from every man whose heart compels him.
3 ULB ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು, BSB BSB: This is the offering you are to accept from them: gold, silver, and bronze;
4 ULB ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ, BSB BSB: blue, purple, and scarlet yarn; fine linen and goat hair;
5 ULB ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ, BSB BSB: ram skins dyed red and fine leather; acacia wood;
6 ULB ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ, BSB BSB: olive oil for the light; spices for the anointing oil and for the fragrant incense;
7 ULB ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ. BSB BSB: and onyx stones and gemstones to be mounted on the ephod and breastpiece.
8 ULB <<ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು. BSB BSB: And they are to make a sanctuary for Me, so that I may dwell among them.
9 ULB ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು. BSB BSB: You must make the tabernacle and design all its furnishings according to the pattern I show you.
10 ULB <<ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು. BSB BSB: And they are to construct an ark of acacia wood, two and a half cubits long, a cubit and a half wide, and a cubit and a half high.
11 ULB ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು. BSB BSB: Overlay it with pure gold both inside and out, and make a gold molding around it.
13 ULB ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ, BSB BSB: And make poles of acacia wood and overlay them with gold.
14 ULB ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. BSB BSB: Insert the poles into the rings on the sides of the ark, in order to carry it.
15 ULB ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು. BSB BSB: The poles are to remain in the rings of the ark; they must not be removed.
16 ULB ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು. BSB BSB: And place inside the ark the Testimony, which I will give you.
17 ULB ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು. BSB BSB: And you are to construct a mercy seat of pure gold, two and a half cubits long and a cubit and a half wide.
18 ULB ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು. BSB BSB: Make two cherubim of hammered gold at the ends of the mercy seat,
19 ULB ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು. BSB BSB: one cherub on one end and one on the other, all made from one piece of gold.
20 ULB ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು. BSB BSB: And the cherubim are to have wings that spread upward, overshadowing the mercy seat. The cherubim are to face each other, looking toward the mercy seat.
21 ULB ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು BSB BSB: Set the mercy seat atop the ark and put the Testimony that I will give you into the ark.
22 ULB ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು. BSB BSB: And I will meet with you there above the mercy seat, between the two cherubim that are over the ark of the Testimony; I will speak with you about all that I command you regarding the Israelites.
23 ULB <<ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು. BSB BSB: You are also to make a table of acacia wood two cubits long, a cubit wide, and a cubit and a half high.
24 ULB ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು. BSB BSB: Overlay it with pure gold and make a gold molding around it.
25 ULB ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು. BSB BSB: And make a rim around it a handbreadth wide and put a gold molding on the rim.
26 ULB ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು. BSB BSB: Make four gold rings for the table and fasten them to the four corners at its four legs.
27 ULB ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು. BSB BSB: The rings are to be close to the rim, to serve as holders for the poles used to carry the table.
28 ULB ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು. BSB BSB: Make the poles of acacia wood and overlay them with gold, so that the table may be carried with them.
29 ULB ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು. BSB BSB: You are also to make the plates and dishes, as well as the pitchers and bowls for pouring drink offerings. Make them out of pure gold.
30 ULB ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು. BSB BSB: And place the Bread of the Presence on the table before Me at all times.
31 ULB <<ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು. BSB BSB: Then you are to make a lampstand of pure, hammered gold. It shall be made of one piece, including its base and shaft, its cups, and its buds and petals.
32 ULB ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು. BSB BSB: Six branches are to extend from the sides of the lampstand—three on one side and three on the other.
33 ULB ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು. BSB BSB: There are to be three cups shaped like almond blossoms on the first branch, each with buds and petals, three on the next branch, and the same for all six branches that extend from the lampstand.
34 ULB ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು. BSB BSB: And on the lampstand there shall be four cups shaped like almond blossoms with buds and petals.
35 ULB ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು. BSB BSB: For the six branches that extend from the lampstand, a bud must be under the first pair of branches, a bud under the second pair, and a bud under the third pair.
36 ULB ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು. BSB BSB: The buds and branches are to be all of one piece with the lampstand, hammered out of pure gold.
37 ULB ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು. BSB BSB: Make seven lamps and set them up on the lampstand so that they illuminate the area in front of it.
38 ULB ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು. BSB BSB: The wick trimmers and their trays must be of pure gold.
39 ULB ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು. BSB BSB: The lampstand and all these utensils shall be made from a talent of pure gold.
40 ULB ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.>> BSB BSB: See to it that you make everything according to the pattern shown you on the mountain.
Select verses for actions: Enter goes to them and Escape comes back.