1 ULB ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು. BSB BSB: “You are to build an altar of acacia wood. The altar must be square, five cubits long, five cubits wide, and three cubits high.
3 ULB ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು. BSB BSB: Make all its utensils of bronze—its pots for removing ashes, its shovels, its sprinkling bowls, its meat forks, and its firepans.
4 ULB ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು. BSB BSB: Construct for it a grate of bronze mesh, and make a bronze ring at each of the four corners of the mesh.
5 ULB ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು. BSB BSB: Set the grate beneath the ledge of the altar, so that the mesh comes halfway up the altar.
6 ULB ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು. BSB BSB: Additionally, make poles of acacia wood for the altar and overlay them with bronze.
7 ULB ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು. BSB BSB: The poles are to be inserted into the rings so that the poles are on two sides of the altar when it is carried.
8 ULB ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು. BSB BSB: Construct the altar with boards so that it is hollow. It is to be made just as you were shown on the mountain.
9 ULB ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು. BSB BSB: You are also to make a courtyard for the tabernacle. On the south side of the courtyard make curtains of finely spun linen, a hundred cubits long on one side,
10 ULB ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು. BSB BSB: with twenty posts and twenty bronze bases, and silver hooks and bands on the posts.
11 ULB ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು. BSB BSB: Likewise there are to be curtains on the north side, a hundred cubits long, with twenty posts and twenty bronze bases, and with silver hooks and bands on the posts.
12 ULB ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು. BSB BSB: The curtains on the west side of the courtyard shall be fifty cubits wide, with ten posts and ten bases.
13 ULB ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು. BSB BSB: The east side of the courtyard, toward the sunrise, is to be fifty cubits wide.
14 ULB ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು. BSB BSB: Make the curtains on one side fifteen cubits long, with three posts and three bases,
15 ULB ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು BSB BSB: and the curtains on the other side fifteen cubits long, with three posts and three bases.
16 ULB ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು. BSB BSB: The gate of the courtyard shall be twenty cubits long, with a curtain embroidered with blue, purple, and scarlet yarn, and finely spun linen. It shall have four posts and four bases.
17 ULB ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. BSB BSB: All the posts around the courtyard shall have silver bands, silver hooks, and bronze bases.
18 ULB ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು. BSB BSB: The entire courtyard shall be a hundred cubits long and fifty cubits wide, with curtains of finely spun linen five cubits high, and with bronze bases.
19 ULB ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು. BSB BSB: All the utensils of the tabernacle for every use, including all its tent pegs and the tent pegs of the courtyard, shall be made of bronze.
20 ULB ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು. BSB BSB: And you are to command the Israelites to bring you pure oil of pressed olives for the light, to keep the lamps burning continually.
21 ULB ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು. BSB BSB: In the Tent of Meeting, outside the veil that is in front of the Testimony, Aaron and his sons are to tend the lamps before the LORD from evening until morning. This is to be a permanent statute for the Israelites for the generations to come.
Select verses for actions: Enter goes to them and Escape comes back.