1 ULB ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು. BSB BSB: “Now this is what you are to do to consecrate Aaron and his sons to serve Me as priests: Take a young bull and two rams without blemish,
2 ULB ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ, BSB BSB: along with unleavened bread, unleavened cakes mixed with oil, and unleavened wafers anointed with oil. Make them out of fine wheat flour,
3 ULB ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು. BSB BSB: put them in a basket, and present them in the basket, along with the bull and the two rams.
4 ULB ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು. BSB BSB: Then present Aaron and his sons at the entrance to the Tent of Meeting and wash them with water.
5 ULB ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ, BSB BSB: Take the garments and clothe Aaron with the tunic, the robe of the ephod, the ephod itself, and the breastplate. Fasten the ephod on him with its woven waistband.
6 ULB ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ, BSB BSB: Put the turban on his head and attach the holy diadem to the turban.
7 ULB ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು. BSB BSB: Then take the anointing oil and anoint him by pouring it on his head.
8 ULB ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ BSB BSB: Present his sons as well and clothe them with tunics.
9 ULB ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು. BSB BSB: Wrap the sashes around Aaron and his sons and tie headbands on them. The priesthood shall be theirs by a permanent statute. In this way you are to ordain Aaron and his sons.
10 ULB ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. BSB BSB: You are to present the bull at the front of the Tent of Meeting, and Aaron and his sons are to lay their hands on its head.
11 ULB ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು. BSB BSB: And you shall slaughter the bull before the LORD at the entrance to the Tent of Meeting.
12 ULB ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು. BSB BSB: Take some of the blood of the bull and put it on the horns of the altar with your finger; then pour out the rest of the blood at the base of the altar.
13 ULB ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. BSB BSB: Take all the fat that covers the entrails and the lobe of the liver, and both kidneys with the fat on them, and burn them on the altar.
14 ULB ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ. BSB BSB: But burn the flesh of the bull and its hide and dung outside the camp; it is a sin offering.
15 ULB ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. BSB BSB: Take one of the rams, and Aaron and his sons shall lay their hands on its head.
16 ULB ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು. BSB BSB: You are to slaughter the ram, take its blood, and splatter it on all sides of the altar.
17 ULB ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು. BSB BSB: Cut the ram into pieces, wash the entrails and legs, and place them with its head and other pieces.
18 ULB ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ. BSB BSB: Then burn the entire ram on the altar; it is a burnt offering to the LORD, a pleasing aroma, a food offering to the LORD.
19 ULB ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. BSB BSB: Take the second ram, and Aaron and his sons are to lay their hands on its head.
20 ULB ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು. BSB BSB: Slaughter the ram, take some of its blood, and put it on the right earlobes of Aaron and his sons, on the thumbs of their right hands, and on the big toes of their right feet. Splatter the remaining blood on all sides of the altar.
21 ULB ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು. BSB BSB: And take some of the blood on the altar and some of the anointing oil and sprinkle it on Aaron and his garments, as well as on his sons and their garments. Then he and his garments will be consecrated, as well as his sons and their garments.
22 ULB ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು, BSB BSB: Take the fat from the ram, the fat tail, the fat covering the entrails, the lobe of the liver, both kidneys with the fat on them, and the right thigh (since this is a ram for ordination),
23 ULB ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು, BSB BSB: along with one loaf of bread, one cake of bread made with oil, and one wafer from the basket of unleavened bread that is before the LORD.
24 ULB ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು. BSB BSB: Put all these in the hands of Aaron and his sons and wave them before the LORD as a wave offering.
25 ULB ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ. BSB BSB: Then take them from their hands and burn them on the altar atop the burnt offering as a pleasing aroma before the LORD; it is a food offering to the LORD.
26 ULB ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ. BSB BSB: Take the breast of the ram of Aaron’s ordination and wave it before the LORD as a wave offering, and it will be your portion.
27 ULB ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು. BSB BSB: Consecrate for Aaron and his sons the breast of the wave offering that is waved and the thigh of the heave offering that is lifted up from the ram of ordination.
28 ULB ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು. BSB BSB: This will belong to Aaron and his sons as a regular portion from the Israelites, for it is the heave offering the Israelites will make to the LORD from their peace offerings.
29 ULB ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು. BSB BSB: The holy garments that belong to Aaron will belong to his sons after him, so they can be anointed and ordained in them.
30 ULB ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು. BSB BSB: The son who succeeds him as priest and enters the Tent of Meeting to minister in the Holy Place must wear them for seven days.
31 ULB ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು. BSB BSB: You are to take the ram of ordination and boil its flesh in a holy place.
32 ULB ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು. BSB BSB: At the entrance to the Tent of Meeting, Aaron and his sons are to eat the meat of the ram and the bread that is in the basket.
33 ULB ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು. BSB BSB: They must eat those things by which atonement was made for their ordination and consecration. But no outsider may eat them, because these things are sacred.
34 ULB ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು. BSB BSB: And if any of the meat of ordination or any bread is left until the morning, you are to burn up the remainder. It must not be eaten, because it is sacred.
35 ULB ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು. BSB BSB: This is what you are to do for Aaron and his sons based on all that I have commanded you, taking seven days to ordain them.
36 ULB ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು. BSB BSB: Sacrifice a bull as a sin offering each day for atonement. Purify the altar by making atonement for it, and anoint it to consecrate it.
37 ULB ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. BSB BSB: For seven days you shall make atonement for the altar and consecrate it. Then the altar will become most holy; whatever touches the altar will be holy.
38 ULB ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು. BSB BSB: This is what you are to offer regularly on the altar, each day: two lambs that are a year old.
39 ULB ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು. BSB BSB: Offer one lamb in the morning and the other at twilight.
40 ULB ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು. BSB BSB: With the first lamb offer a tenth of an ephah of fine flour, mixed with a quarter hin of oil from pressed olives, and a drink offering of a quarter hin of wine.
41 ULB ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು. BSB BSB: And offer the second lamb at twilight with the same grain offering and drink offering as in the morning, as a pleasing aroma, a food offering to the LORD.
42 ULB ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು. BSB BSB: For the generations to come, this burnt offering shall be made regularly at the entrance to the Tent of Meeting before the LORD, where I will meet you to speak with you.
43 ULB ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು. BSB BSB: I will also meet with the Israelites there, and that place will be consecrated by My glory.
44 ULB ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು. BSB BSB: So I will consecrate the Tent of Meeting and the altar, and I will consecrate Aaron and his sons to serve Me as priests.
45 ULB ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು. BSB BSB: Then I will dwell among the Israelites and be their God.
46 ULB ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ. BSB BSB: And they will know that I am the LORD their God, who brought them out of the land of Egypt so that I might dwell among them. I am the LORD their God.
Select verses for actions: Enter goes to them and Escape comes back.