1 ULB ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, <<ಹೋರೇಬ್>> ಎಂಬ ದೇವರ ಬೆಟ್ಟಕ್ಕೆ ಬಂದನು. BSB BSB: Meanwhile, Moses was shepherding the flock of his father-in-law Jethro, the priest of Midian. He led the flock to the far side of the wilderness and came to Horeb, the mountain of God.
2 ULB ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ. BSB BSB: There the angel of the LORD appeared to him in a blazing fire from within a bush. Moses saw the bush ablaze with fire, but it was not consumed.
3 ULB ಆಗ ಮೋಶೆ, <<ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು>> ಅಂದುಕೊಂಡನು. BSB BSB: So Moses thought, “I must go over and see this marvelous sight. Why is the bush not burning up?”
4 ULB ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ <<ಮೋಶೆಯೇ, ಮೋಶೆಯೇ>> ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, <<ಇಗೋ ಇದ್ದೇನೆ>> ಅಂದನು. BSB BSB: When the LORD saw that he had gone over to look, God called out to him from within the bush, “Moses, Moses!” “Here I am,” he answered.
5 ULB ದೇವರು ಅವನಿಗೆ, <<ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ>> ಎಂದು ಹೇಳಿದನು. BSB BSB: “Do not come any closer,” God said. “Take off your sandals, for the place where you are standing is holy ground.”
6 ULB ಇದಲ್ಲದೆ ಆತನು ಅವನಿಗೆ, <<ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ>> ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು. BSB BSB: Then He said, “I am the God of your father, the God of Abraham, the God of Isaac, and the God of Jacob.” At this, Moses hid his face, for he was afraid to look at God.
7 ULB ಆಗ ಯೆಹೋವನು, <<ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು. BSB BSB: The LORD said, “I have indeed seen the affliction of My people in Egypt. I have heard them crying out because of their oppressors, and I am aware of their sufferings.
8 ULB ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ. BSB BSB: I have come down to rescue them from the hand of the Egyptians and to bring them up out of that land to a good and spacious land, a land flowing with milk and honey—the home of the Canaanites, Hittites, Amorites, Perizzites, Hivites, and Jebusites. 9 ULB ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ. BSB BSB: And now the cry of the Israelites has reached Me, and I have seen how severely the Egyptians are oppressing them.
10 ULB ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ>> ಅಂದನು. BSB BSB: Therefore, go! I am sending you to Pharaoh to bring My people the Israelites out of Egypt.”
11 ULB ಆಗ ಮೋಶೆಯು ದೇವರಿಗೆ, <<ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?>> ಎಂದು ಹೇಳಿದನು. BSB BSB: But Moses asked God, “Who am I, that I should go to Pharaoh and bring the Israelites out of Egypt?”
12 ULB ಅದಕ್ಕೆ ದೇವರು, <<ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು>> ಅಂದನು. BSB BSB: “I will surely be with you,” God said, “and this will be the sign to you that I have sent you: When you have brought the people out of Egypt, all of you will worship God on this mountain.”
13 ULB ಅದಕ್ಕೆ ಮೋಶೆಯು ದೇವರಿಗೆ, <<ನಾನು ಇಸ್ರಾಯೇಲರ ಬಳಿಗೆ ಹೋಗಿ, <ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ> ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು>> ಎಂದನು. BSB BSB: Then Moses asked God, “Suppose I go to the Israelites and say to them, ‘The God of your fathers has sent me to you,’ and they ask me, ‘What is His name?’ What should I tell them?”
15 ULB ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, <<ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ>> ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ. BSB BSB: God also told Moses, “Say to the Israelites, ‘The LORD, the God of your fathers—the God of Abraham, the God of Isaac, and the God of Jacob—has sent me to you.’ This is My name forever, and this is how I am to be remembered in every generation.
16 ULB ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, <<ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ. BSB BSB: Go, assemble the elders of Israel and say to them, ‘The LORD, the God of your fathers—the God of Abraham, Isaac, and Jacob—has appeared to me and said: I have surely attended to you and have seen what has been done to you in Egypt.
17 ULB ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ>> ಎಂಬುದಾಗಿ ಅವರಿಗೆ ಹೇಳು. BSB BSB: And I have promised to bring you up out of your affliction in Egypt, into the land of the Canaanites, Hittites, Amorites, Perizzites, Hivites, and Jebusites—a land flowing with milk and honey.’
18 ULB ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, <<ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು>> ಎಂದು ಕೇಳಿಕೊಳ್ಳಿರಿ. BSB BSB: The elders of Israel will listen to what you say, and you must go with them to the king of Egypt and tell him, ‘The LORD, the God of the Hebrews, has met with us. Now please let us take a three-day journey into the wilderness, so that we may sacrifice to the LORD our God.’
19 ULB ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ. BSB BSB: But I know that the king of Egypt will not allow you to go unless a mighty hand compels him.
20 ULB ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು. BSB BSB: So I will stretch out My hand and strike the Egyptians with all the wonders I will perform among them. And after that, he will release you.
21 ULB <<ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ. BSB BSB: And I will grant this people such favor in the sight of the Egyptians that when you leave, you will not go away empty-handed.
22 ULB ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ>> ಅಂದನು. BSB BSB: Every woman shall ask her neighbor and any woman staying in her house for silver and gold jewelry and clothing, and you will put them on your sons and daughters. So you will plunder the Egyptians.”