1 ULB ಯೆಹೋವನು ಮೋಶೆಗೆ ಹೀಗೆಂದನು, BSB BSB: Then the LORD said to Moses,
2 ULB <<ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ. BSB BSB: “See, I have called by name Bezalel son of Uri, the son of Hur, of the tribe of Judah.
3 ULB ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ, BSB BSB: And I have filled him with the Spirit of God, with skill, ability, and knowledge in all kinds of craftsmanship,
4 ULB ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ, BSB BSB: to design artistic works in gold, silver, and bronze,
5 ULB ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ. BSB BSB: to cut gemstones for settings, and to carve wood, so that he may be a master of every craft.
6 ULB ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ. BSB BSB: Moreover, I have selected Oholiab son of Ahisamach, of the tribe of Dan, as his assistant. I have also given skill to all the craftsmen, that they may fashion all that I have commanded you:
7 ULB ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು, BSB BSB: the Tent of Meeting, the ark of the Testimony and the mercy seat upon it, and all the other furnishings of the tent—
8 ULB ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು, BSB BSB: the table with its utensils, the pure gold lampstand with all its utensils, the altar of incense,
9 ULB ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ, BSB BSB: the altar of burnt offering with all its utensils, and the basin with its stand—
10 ULB ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು, BSB BSB: as well as the woven garments, both the holy garments for Aaron the priest and the garments for his sons to serve as priests,
11 ULB ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.>> BSB BSB: in addition to the anointing oil and fragrant incense for the Holy Place. They are to make them according to all that I have commanded you.”
12 ULB ಯೆಹೋವನು ಮತ್ತೆ ಮೋಶೆಗೆ ಹೀಗೆಂದನು, BSB BSB: And the LORD said to Moses,
13 ULB <<ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು. BSB BSB: “Tell the Israelites, ‘Surely you must keep My Sabbaths, for this will be a sign between Me and you for the generations to come, so that you may know that I am the LORD who sanctifies you.
14 ULB ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು. BSB BSB: Keep the Sabbath, for it is holy to you. Anyone who profanes it must surely be put to death. Whoever does any work on that day must be cut off from among his people.
15 ULB ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು. BSB BSB: For six days work may be done, but the seventh day is a Sabbath of complete rest, holy to the LORD. Whoever does any work on the Sabbath day must surely be put to death.
16 ULB ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ. BSB BSB: The Israelites must keep the Sabbath, celebrating it as a permanent covenant for the generations to come.
17 ULB ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?>> BSB BSB: It is a sign between Me and the Israelites forever; for in six days the LORD made the heavens and the earth, but on the seventh day He rested and was refreshed.’”
18 ULB ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ. BSB BSB: When the LORD had finished speaking with Moses on Mount Sinai, He gave him the two tablets of the Testimony, tablets of stone inscribed by the finger of God.
Select verses for actions: Enter goes to them and Escape comes back.