1 ULB ಯೆಹೋವನು ಮೋಶೆಗೆ, <<ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು. BSB BSB: Then the LORD said to Moses, “Chisel out two stone tablets like the originals, and I will write on them the words that were on the first tablets, which you broke.
2 ULB ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು. BSB BSB: Be ready in the morning, and come up on Mount Sinai to present yourself before Me on the mountaintop.
3 ULB ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು>> ಎಂದು ಹೇಳಿದನು. BSB BSB: No one may go up with you; in fact, no one may be seen anywhere on the mountain—not even the flocks or herds may graze in front of the mountain.”
4 ULB ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು. BSB BSB: So Moses chiseled out two stone tablets like the originals. He rose early in the morning, and taking the two stone tablets in his hands, he went up Mount Sinai as the LORD had commanded him.
5 ULB ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು. BSB BSB: And the LORD descended in a cloud, stood with him there, and proclaimed His name, the LORD.
6 ULB ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; <<ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ; BSB BSB: Then the LORD passed in front of Moses and called out: “The LORD, the LORD God, is compassionate and gracious, slow to anger, abounding in loving devotion and faithfulness,
7 ULB ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ>> ಎಂಬುದೇ. BSB BSB: maintaining loving devotion to a thousand generations, forgiving iniquity, transgression, and sin. Yet He will by no means leave the guilty unpunished; He will visit the iniquity of the fathers on their children and grandchildren to the third and fourth generations.”
8 ULB ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ, BSB BSB: Moses immediately bowed down to the ground and worshiped.
9 ULB <<ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು>> ಎಂದನು. BSB BSB: “O Lord,” he said, “if I have indeed found favor in Your sight, my Lord, please go with us. Although this is a stiff-necked people, forgive our iniquity and sin, and take us as Your inheritance.”
10 ULB ಯೆಹೋವನು ಹೇಳಿದ್ದೇನೆಂದರೆ, <<ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ. BSB BSB: And the LORD said, “Behold, I am making a covenant. Before all your people I will perform wonders that have never been done in any nation in all the world. All the people among whom you live will see the LORD’s work, for it is an awesome thing that I am doing with you.
11 ULB ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು. BSB BSB: Observe what I command you this day. I will drive out before you the Amorites, Canaanites, Hittites, Perizzites, Hivites, and Jebusites.
12 ULB ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು. BSB BSB: Be careful not to make a treaty with the inhabitants of the land you are entering, lest they become a snare in your midst.
13 ULB ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. BSB BSB: Rather, you must tear down their altars, smash their sacred stones, and chop down their Asherah poles.
14 ULB ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು. BSB BSB: For you must not worship any other god, for the LORD, whose name is Jealous, is a jealous God.
15 ULB ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು, BSB BSB: Do not make a covenant with the inhabitants of the land, for when they prostitute themselves to their gods and sacrifice to them, they will invite you, and you will eat their sacrifices.
16 ULB ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ. BSB BSB: And when you take some of their daughters as brides for your sons, their daughters will prostitute themselves to their gods and cause your sons to do the same.
17 ULB ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು. BSB BSB: You shall make no molten gods for yourselves.
18 ULB <<ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ? BSB BSB: You are to keep the Feast of Unleavened Bread. For seven days at the appointed time in the month of Abib, you are to eat unleavened bread as I commanded you. For in the month of Abib you came out of Egypt.
19 ULB <<ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ. BSB BSB: The first offspring of every womb belongs to Me, including all the firstborn males among your livestock, whether cattle or sheep.
20 ULB ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು. BSB BSB: You must redeem the firstborn of a donkey with a lamb; but if you do not redeem it, you are to break its neck. You must redeem all the firstborn of your sons. No one shall appear before Me empty-handed.
21 ULB <<ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು. BSB BSB: Six days you shall labor, but on the seventh day you shall rest; even in the seasons of plowing and harvesting, you must rest.
22 ULB <<ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು. BSB BSB: And you are to celebrate the Feast of Weeks with the firstfruits of the wheat harvest, and the Feast of Ingathering at the turn of the year.
23 ULB ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು. BSB BSB: Three times a year all your males are to appear before the Lord GOD, the God of Israel.
24 ULB ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ. BSB BSB: For I will drive out the nations before you and enlarge your borders, and no one will covet your land when you go up three times a year to appear before the LORD your God.
25 ULB <<ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು. BSB BSB: Do not offer the blood of a sacrifice to Me along with anything leavened, and do not let any of the sacrifice from the Passover Feast remain until morning.
26 ULB ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.>> BSB BSB: Bring the best of the firstfruits of your soil to the house of the LORD your God. You must not cook a young goat in its mother’s milk.”
27 ULB ಯೆಹೋವನು ಮೋಶೆಗೆ, <<ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ>> ಎಂದು ಅಜ್ಞಾಪಿಸಿದನು. BSB BSB: The LORD also said to Moses, “Write down these words, for in accordance with these words I have made a covenant with you and with Israel.”
28 ULB ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು. BSB BSB: So Moses was there with the LORD forty days and forty nights without eating bread or drinking water. He wrote on the tablets the words of the covenant—the Ten Commandments.
29 ULB ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ. BSB BSB: And when Moses came down from Mount Sinai with the two tablets of the Testimony in his hands, he was unaware that his face had become radiant from speaking with the LORD.
30 ULB ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು. BSB BSB: Aaron and all the Israelites looked at Moses, and behold, his face was radiant. And they were afraid to approach him.
31 ULB ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು. BSB BSB: But Moses called out to them; so Aaron and all the leaders of the congregation returned to him, and Moses spoke to them.
32 ULB ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು. BSB BSB: And after this all the Israelites came near, and Moses commanded them to do everything that the LORD had told him on Mount Sinai.
33 ULB ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು. BSB BSB: When Moses had finished speaking with them, he put a veil over his face.
34 ULB ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು. BSB BSB: But whenever Moses went in before the LORD to speak with Him, he would remove the veil until he came out. And when he came out, he would tell the Israelites what he had been commanded,
35 ULB ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು. BSB BSB: and the Israelites would see that the face of Moses was radiant. So Moses would put the veil back over his face until he went in to speak with the LORD.
Select verses for actions: Enter goes to them and Escape comes back.