1 ULB <<ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು>> ಅಂದನು. BSB BSB: “So Bezalel, Oholiab, and every skilled person are to carry out everything commanded by the LORD, who has given them skill and ability to know how to perform all the work of constructing the sanctuary.”
2 ULB ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು. BSB BSB: Then Moses summoned Bezalel, Oholiab, and every skilled person whom the LORD had gifted—everyone whose heart stirred him to come and do the work.
3 ULB ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು. BSB BSB: They received from Moses all the contributions that the Israelites had brought to carry out the service of constructing the sanctuary. Meanwhile, the people continued to bring freewill offerings morning after morning,
4 ULB ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು, BSB BSB: so that all the skilled craftsmen who were doing all the work on the sanctuary left their work
5 ULB ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, <<ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು>> ಹೇಳಿದರು. BSB BSB: and said to Moses, “The people are bringing more than enough for doing the work the LORD has commanded us to do.”
6 ULB ಆಗ ಮೋಶೆಯು ಇದನ್ನು ಗಮನಿಸಿ, <<ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು>> ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು. BSB BSB: After Moses had given an order, they sent a proclamation throughout the camp: “No man or woman should make anything else as an offering for the sanctuary.” So the people were restrained from bringing more,
7 ULB ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು. BSB BSB: since what they already had was more than enough to perform all the work.
8 ULB ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು. BSB BSB: All the skilled craftsmen among the workmen made the ten curtains for the tabernacle. They were made of finely spun linen, as well as blue, purple, and scarlet yarn, with cherubim skillfully worked into them.
9 ULB ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು. BSB BSB: Each curtain was twenty-eight cubits long and four cubits wide; all the curtains were the same size.
10 ULB ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು. BSB BSB: And he joined five of the curtains together, and the other five he joined as well.
11 ULB ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ BSB BSB: He made loops of blue material on the edge of the end curtain in the first set, and also on the end curtain in the second set.
12 ULB ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು. BSB BSB: He made fifty loops on one curtain and fifty loops on the end curtain of the second set, so that the loops lined up opposite one another.
13 ULB ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು. BSB BSB: He also made fifty gold clasps to join the curtains together, so that the tabernacle was a unit.
14 ULB ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು. BSB BSB: He then made curtains of goat hair for the tent over the tabernacle—eleven curtains in all.
15 ULB ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು. BSB BSB: Each of the eleven curtains was the same size—thirty cubits long and four cubits wide.
16 ULB ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು. BSB BSB: He joined five of the curtains into one set and the other six into another.
17 ULB ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು. BSB BSB: He made fifty loops along the edge of the end curtain in the first set, and fifty loops along the edge of the corresponding curtain in the second set.
18 ULB ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು. BSB BSB: He also made fifty bronze clasps to join the tent together as a unit.
19 ULB ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು. BSB BSB: Additionally, he made for the tent a covering of ram skins dyed red, and over that a covering of fine leather.
20 ULB ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು. BSB BSB: Next, he constructed upright frames of acacia wood for the tabernacle.
21 ULB ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು; BSB BSB: Each frame was ten cubits long and a cubit and a half wide.
22 ULB ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು. BSB BSB: Two tenons were connected to each other for each frame. He made all the frames of the tabernacle in this way.
23 ULB ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು; BSB BSB: He constructed twenty frames for the south side of the tabernacle,
24 ULB ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು. BSB BSB: with forty silver bases to put under the twenty frames—two bases for each frame, one under each tenon.
25 ULB ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು BSB BSB: For the second side of the tabernacle, the north side, he made twenty frames
26 ULB ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು. BSB BSB: and forty silver bases—two bases under each frame.
27 ULB ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು. BSB BSB: He made six frames for the rear of the tabernacle, the west side,
28 ULB ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು. BSB BSB: and two frames for the two back corners of the tabernacle,
29 ULB ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು. BSB BSB: coupled together from bottom to top and fitted into a single ring. He made both corners in this way.
30 ULB ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು. BSB BSB: So there were eight frames and sixteen silver bases—two under each frame.
31 ULB ಜಾಲೀಮರದಿಂದ ಅಗುಳಿಗಳನ್ನು ಮಾಡಿದರು. BSB BSB: He also made five crossbars of acacia wood for the frames on one side of the tabernacle,
32 ULB ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು. BSB BSB: five for those on the other side, and five for those on the rear side of the tabernacle, to the west.
33 ULB ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು. BSB BSB: He made the central crossbar to run through the center of the frames, from one end to the other.
34 ULB ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು. BSB BSB: And he overlaid the frames with gold and made gold rings to hold the crossbars. He also overlaid the crossbars with gold.
35 ULB ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು. BSB BSB: Next, he made the veil of blue, purple, and scarlet yarn, and finely spun linen, with cherubim skillfully worked into it.
36 ULB ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು. BSB BSB: He also made four posts of acacia wood for it and overlaid them with gold, along with gold hooks; and he cast four silver bases for the posts.
37 ULB ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು. BSB BSB: For the entrance to the tent, he made a curtain embroidered with blue, purple, and scarlet yarn, and finely spun linen,
38 ULB ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು. BSB BSB: together with five posts and their hooks. He overlaid the tops of the posts and their bands with gold, and their five bases were bronze.
Select verses for actions: Enter goes to them and Escape comes back.