1 ULB ಆಗ ಯೆಹೋವನು ಮೋಶೆಗೆ, BSB BSB: Then the LORD said to Moses,
2 ULB <<ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು. BSB BSB: “On the first day of the first month you are to set up the tabernacle, the Tent of Meeting.
3 ULB ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು. BSB BSB: Put the ark of the Testimony in it and screen off the ark with the veil.
4 ULB ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು. BSB BSB: Then bring in the table and set out its arrangement; bring in the lampstand as well, and set up its lamps.
5 ULB ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು. BSB BSB: Place the gold altar of incense in front of the ark of the Testimony, and hang the curtain at the entrance to the tabernacle.
6 ULB ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು. BSB BSB: Place the altar of burnt offering in front of the entrance to the tabernacle, the Tent of Meeting.
7 ULB ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು. BSB BSB: And place the basin between the Tent of Meeting and the altar, and put water in it.
8 ULB ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು. BSB BSB: Set up the surrounding courtyard and hang the curtain for the entrance to the courtyard.
9 ULB <<ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು. BSB BSB: Take the anointing oil and anoint the tabernacle and everything in it; consecrate it along with all its furnishings, and it shall be holy.
10 ULB ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು. BSB BSB: Anoint the altar of burnt offering and all its utensils; consecrate the altar, and it shall be most holy.
11 ULB ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು. BSB BSB: Anoint the basin and its stand and consecrate them.
12 ULB <<ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ BSB BSB: Then bring Aaron and his sons to the entrance to the Tent of Meeting and wash them with water.
13 ULB ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು. BSB BSB: And you are to clothe Aaron with the holy garments, anoint him, and consecrate him, so that he may serve Me as a priest.
14 ULB ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ BSB BSB: Bring his sons forward and clothe them with tunics.
15 ULB ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು>> ಎಂದು ಹೇಳಿದನು. BSB BSB: Anoint them just as you anointed their father, so that they may also serve Me as priests. Their anointing will qualify them for a permanent priesthood throughout their generations.”
16 ULB ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು. BSB BSB: Moses did everything just as the LORD had commanded him.
17 ULB ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು. BSB BSB: So the tabernacle was set up on the first day of the first month of the second year.
18 ULB ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು. BSB BSB: When Moses set up the tabernacle, he laid its bases, positioned its frames, inserted its crossbars, and set up its posts.
19 ULB ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು. BSB BSB: Then he spread the tent over the tabernacle and put the covering over the tent, just as the LORD had commanded him.
20 ULB ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು. BSB BSB: Moses took the Testimony and placed it in the ark, attaching the poles to the ark; and he set the mercy seat atop the ark.
21 ULB ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. BSB BSB: Then he brought the ark into the tabernacle, put up the veil for the screen, and shielded off the ark of the Testimony, just as the LORD had commanded him.
22 ULB ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು. BSB BSB: Moses placed the table in the Tent of Meeting on the north side of the tabernacle, outside the veil.
23 ULB ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು. BSB BSB: He arranged the bread on it before the LORD, just as the LORD had commanded him.
24 ULB ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು. BSB BSB: He also placed the lampstand in the Tent of Meeting opposite the table on the south side of the tabernacle
25 ULB ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. BSB BSB: and set up the lamps before the LORD, just as the LORD had commanded him.
26 ULB ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು. BSB BSB: Moses placed the gold altar in the Tent of Meeting, in front of the veil,
27 ULB ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು. BSB BSB: and he burned fragrant incense on it, just as the LORD had commanded him.
28 ULB ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು. BSB BSB: Then he put up the curtain at the entrance to the tabernacle.
29 ULB ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು. BSB BSB: He placed the altar of burnt offering near the entrance to the tabernacle, the Tent of Meeting, and offered on it the burnt offering and the grain offering, just as the LORD had commanded him.
30 ULB ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು. BSB BSB: He placed the basin between the Tent of Meeting and the altar and put water in it for washing;
31 ULB ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು. BSB BSB: and from it Moses, Aaron, and his sons washed their hands and feet.
32 ULB ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು. BSB BSB: They washed whenever they entered the Tent of Meeting or approached the altar, just as the LORD had commanded Moses.
33 ULB ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. BSB BSB: And Moses set up the courtyard around the tabernacle and the altar, and he hung the curtain for the entrance to the courtyard. So Moses finished the work.
34 ULB ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು. BSB BSB: Then the cloud covered the Tent of Meeting, and the glory of the LORD filled the tabernacle.
35 ULB ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. BSB BSB: Moses was unable to enter the Tent of Meeting because the cloud had settled on it, and the glory of the LORD filled the tabernacle.
36 ULB ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು. BSB BSB: Whenever the cloud was lifted from above the tabernacle, the Israelites would set out through all the stages of their journey.
37 ULB ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು. BSB BSB: If the cloud was not lifted, they would not set out until the day it was taken up.
38 ULB ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು. BSB BSB: For the cloud of the LORD was over the tabernacle by day, and fire was in the cloud by night, in the sight of all the house of Israel through all their journeys.
Select verses for actions: Enter goes to them and Escape comes back.