1 ULB ಆನಂತರ ಯೆಹೋವನು ಮೋಶೆಗೆ, <<ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು>> ಅಂದನು. BSB BSB: But the LORD said to Moses, “Now you will see what I will do to Pharaoh, for because of My mighty hand he will let the people go; because of My strong hand he will drive them out of his land.”
2 ULB ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, <<ನಾನೇ ಯೆಹೋವನು, BSB BSB: God also told Moses, “I am the LORD.
3 ULB ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ. BSB BSB: I appeared to Abraham, to Isaac, and to Jacob as God Almighty, but by My name the LORD I did not make Myself known to them.
4 ULB ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು. BSB BSB: I also established My covenant with them to give them the land of Canaan, the land where they lived as foreigners.
5 ULB ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು. BSB BSB: Furthermore, I have heard the groaning of the Israelites, whom the Egyptians are enslaving, and I have remembered My covenant.
6 ULB ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, <ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು. BSB BSB: Therefore tell the Israelites: ‘I am the LORD, and I will bring you out from under the yoke of the Egyptians and deliver you from their bondage. I will redeem you with an outstretched arm and with mighty acts of judgment.
7 ULB ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು. BSB BSB: I will take you as My own people, and I will be your God. Then you will know that I am the LORD your God, who brought you out from under the yoke of the Egyptians.
8 ULB ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ> ಎಂದು ಅವರಿಗೆ ಹೇಳು>> ಅಂದನು. BSB BSB: And I will bring you into the land that I swore to give to Abraham, Isaac, and Jacob. I will give it to you as a possession. I am the LORD!’”
9 ULB ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ. BSB BSB: Moses relayed this message to the Israelites, but on account of their broken spirit and cruel bondage, they did not listen to him.
10 ULB ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ, BSB BSB: So the LORD said to Moses,
11 ULB <<ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು>> ಅಂದನು. BSB BSB: “Go and tell Pharaoh king of Egypt to let the Israelites go out of his land.”
12 ULB ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, <<ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?>> ಅಂದನು. BSB BSB: But in the LORD’s presence Moses replied, “If the Israelites will not listen to me, then why would Pharaoh listen to me, since I am unskilled in speech?”
13 ULB ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು. BSB BSB: Then the LORD spoke to Moses and Aaron and gave them a charge concerning both the Israelites and Pharaoh king of Egypt, to bring the Israelites out of the land of Egypt.
14 ULB ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು. BSB BSB: These were the heads of their fathers’ houses: The sons of Reuben, the firstborn of Israel, were Hanoch and Pallu, Hezron and Carmi. These were the clans of Reuben.
15 ULB ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು. BSB BSB: The sons of Simeon were Jemuel, Jamin, Ohad, Jachin, Zohar, and Shaul, the son of a Canaanite woman. These were the clans of Simeon.
16 ULB ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು. BSB BSB: These were the names of the sons of Levi according to their records: Gershon, Kohath, and Merari. Levi lived 137 years.
17 ULB ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ. BSB BSB: The sons of Gershon were Libni and Shimei, by their clans.
18 ULB ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು. BSB BSB: The sons of Kohath were Amram, Izhar, Hebron, and Uzziel. Kohath lived 133 years.
19 ULB ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು. BSB BSB: The sons of Merari were Mahli and Mushi. These were the clans of the Levites according to their records.
20 ULB ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು. BSB BSB: And Amram married his father’s sister Jochebed, and she bore him Aaron and Moses. Amram lived 137 years.
21 ULB ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ. BSB BSB: The sons of Izhar were Korah, Nepheg, and Zichri.
22 ULB ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ. BSB BSB: The sons of Uzziel were Mishael, Elzaphan, and Sithri.
23 ULB ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು. BSB BSB: And Aaron married Elisheba, the daughter of Amminadab and sister of Nahshon, and she bore him Nadab and Abihu, Eleazar and Ithamar.
24 ULB ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು. BSB BSB: The sons of Korah were Assir, Elkanah, and Abiasaph. These were the clans of the Korahites.
25 ULB ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು. BSB BSB: Aaron’s son Eleazar married one of the daughters of Putiel, and she bore him Phinehas. These were the heads of the Levite families by their clans.
26 ULB ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ. BSB BSB: It was this Aaron and Moses to whom the LORD said, “Bring the Israelites out of the land of Egypt by their divisions.”
27 ULB ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ. BSB BSB: Moses and Aaron were the ones who spoke to Pharaoh king of Egypt in order to bring the Israelites out of Egypt.
28 ULB ಯೆಹೋವನು ಐಗುಪ್ತದೇಶದಲ್ಲಿ, ಮೋಶೆಯ ಸಂಗಡ ಮಾತನಾಡಿದಾಗ BSB BSB: Now on the day that the LORD spoke to Moses in Egypt,
29 ULB ಆತನು ಮೋಶೆಗೆ, <<ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು>> ಎಂದನು. BSB BSB: He said to him, “I am the LORD; tell Pharaoh king of Egypt everything I say to you.”
30 ULB ಆದರೆ ಮೋಶೆಯು ಯೆಹೋವನಿಗೆ, <<ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು>> ಅಂದನು. BSB BSB: But in the LORD’s presence Moses replied, “Since I am unskilled in speech, why would Pharaoh listen to me?”