1 ULB ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು, BSB BSB: Then some of the elders of Israel came and sat down before me.
2 ULB ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು, BSB BSB: And the word of the LORD came to me, saying,
3 ULB <<ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.>> BSB BSB: “Son of man, these men have set up idols in their hearts and put wicked stumbling blocks before their faces. Should I consult with them in any way?
4 ULB ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು. BSB BSB: Therefore speak to them and tell them that this is what the Lord GOD says: ‘When any Israelite sets up idols in his heart and puts a wicked stumbling block before his face, and then comes to the prophet, I the LORD will answer him according to his great idolatry,
5 ULB ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.>> BSB BSB: so that I may take hold of the hearts of the people of Israel. For because of their idols, they are all estranged from Me.’
6 ULB ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ. BSB BSB: Therefore tell the house of Israel that this is what the Lord GOD says: ‘Repent and turn away from your idols; turn your faces away from all your abominations.
7 ULB <<ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು. BSB BSB: For when any Israelite or any foreigner dwelling in Israel separates himself from Me, sets up idols in his heart, and puts a wicked stumbling block before his face, and then comes to the prophet to inquire of Me, I the LORD will answer him Myself.
8 ULB ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. BSB BSB: I will set My face against that man and make him a sign and a proverb; I will cut him off from among My people. Then you will know that I am the LORD.
9 ULB <<ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು. BSB BSB: But if the prophet is enticed to speak a message, then it was I the LORD who enticed him, and I will stretch out My hand against him and destroy him from among My people Israel.
10 ULB ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು. BSB BSB: They will bear their punishment—the punishment of the inquirer will be the same as that of the prophet—
11 ULB ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು>> ಇದು ಕರ್ತನಾದ ಯೆಹೋವನ ನುಡಿ. BSB BSB: in order that the house of Israel may no longer stray from Me and no longer defile themselves with all their transgressions. Then they will be My people and I will be their God, declares the Lord GOD.’”
12 ULB ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: And the word of the LORD came to me, saying,
13 ULB <<ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ. BSB BSB: “Son of man, if a land sins against Me by acting unfaithfully, and I stretch out My hand against it to cut off its supply of food, to send famine upon it, and to cut off from it both man and beast,
14 ULB ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು>> ಇದು ಕರ್ತನಾದ ಯೆಹೋವನ ನುಡಿ. BSB BSB: then even if these three men—Noah, Daniel, and Job—were in it, their righteousness could deliver only themselves, declares the Lord GOD.
15 ULB <<ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ, BSB BSB: Or if I send wild beasts through the land to leave it childless and desolate, with no man passing through it for fear of the beasts,
16 ULB ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು>> ಇದು ಕರ್ತನಾದ ಯೆಹೋವನ ನುಡಿ. BSB BSB: then as surely as I live, declares the Lord GOD, even if these three men were in it, they could not deliver their own sons or daughters. They alone would be delivered, but the land would be desolate.
17 ULB <<ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ, BSB BSB: Or if I bring a sword against that land and say, ‘Let a sword pass through it,’ so that I cut off from it both man and beast,
18 ULB ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ>> ಇದು ಕರ್ತನಾದ ಯೆಹೋವನ ನುಡಿ. BSB BSB: then as surely as I live, declares the Lord GOD, even if these three men were in it, they could not deliver their own sons or daughters. They alone would be delivered.
19 ULB <<ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ, BSB BSB: Or if I send a plague into that land and pour out My wrath upon it through bloodshed, cutting off from it both man and beast,
20 ULB ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ>> ಇದು ಕರ್ತನಾದ ಯೆಹೋವನ ನುಡಿ. BSB BSB: then as surely as I live, declares the Lord GOD, even if Noah, Daniel, and Job were in it, they could not deliver their own sons or daughters. Their righteousness could deliver only themselves.
21 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು! BSB BSB: For this is what the Lord GOD says: ‘How much worse will it be when I send against Jerusalem My four dire judgments—sword, famine, wild beasts, and plague—in order to cut off from it both man and beast?
22 ULB ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ. BSB BSB: Yet, behold, some survivors will be left in it—sons and daughters who will be brought out. They will come out to you, and when you see their conduct and actions, you will be comforted regarding the disaster I have brought upon Jerusalem—all that I have brought upon it.
23 ULB ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು>> ಇದು ಕರ್ತನಾದ ಯೆಹೋವನ ನುಡಿ. BSB BSB: They will bring you consolation when you see their conduct and actions, and you will know that it was not without cause that I have done all these things within it,’ declares the Lord GOD.”
Select verses for actions: Enter goes to them and Escape comes back.