1 ULB ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Again the word of the LORD came to me, saying,
2 ULB <<ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ, BSB BSB: “Son of man, confront Jerusalem with her abominations
3 ULB ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, <ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. BSB BSB: and tell her that this is what the Lord GOD says to Jerusalem: Your origin and your birth were in the land of the Canaanites. Your father was an Amorite and your mother a Hittite.
4 ULB ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ. BSB BSB: On the day of your birth your cord was not cut, nor were you washed with water for cleansing. You were not rubbed with salt or wrapped in cloths.
5 ULB ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು. BSB BSB: No one cared enough for you to do even one of these things out of compassion for you. Instead, you were thrown out into the open field, because you were despised on the day of your birth.
6 ULB <<ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, <ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು> ಎಂದು ಹೇಳಿದೆನು. ಹೌದು, <ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು> ಎಂದು ಹೇಳಿ ಬದುಕಿಸಿದೆನು. BSB BSB: Then I passed by and saw you wallowing in your blood, and as you lay there in your blood I said to you, ‘Live!’ There I said to you, ‘Live!’
7 ULB <ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ. BSB BSB: I made you thrive like a plant of the field. You grew up and matured and became very beautiful. Your breasts were formed and your hair grew, but you were naked and bare.
8 ULB ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ>>> ಇದು ಕರ್ತನಾದ ಯೆಹೋವನ ನುಡಿ. BSB BSB: Then I passed by and saw you, and you were indeed old enough for love. So I spread My cloak over you and covered your nakedness. I pledged Myself to you, entered into a covenant with you, and you became Mine, declares the Lord GOD.
9 ULB <<ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು. BSB BSB: Then I bathed you with water, rinsed off your blood, and anointed you with oil.
10 ULB ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. BSB BSB: I clothed you in embroidered cloth and gave you sandals of fine leather. I wrapped you in fine linen and covered you with silk.
11 ULB ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು, BSB BSB: I adorned you with jewelry, and I put bracelets on your wrists and a chain around your neck.
12 ULB ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು. BSB BSB: I put a ring in your nose, earrings on your ears, and a beautiful crown upon your head.
13 ULB ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ. BSB BSB: So you were adorned with gold and silver, and your clothing was made of fine linen, silk, and embroidered cloth. You ate fine flour, honey, and oil. You became very beautiful and rose to be queen.
14 ULB ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು>> ಇದು ಕರ್ತನಾದ ಯೆಹೋವನ ನುಡಿ. BSB BSB: Your fame spread among the nations on account of your beauty, for it was perfect in the splendor I bestowed on you, declares the Lord GOD.
15 ULB <<ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ. BSB BSB: But because of your fame, you trusted in your beauty and played the harlot. You lavished your favors on everyone who passed by, and your beauty was theirs for the asking.
16 ULB ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು. BSB BSB: You took some of your garments and made colorful high places for yourself, and on them you prostituted yourself. Such things should not have happened; never should they have occurred!
17 ULB ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ. BSB BSB: You also took the fine jewelry of gold and silver I had given you, and you made male idols with which to prostitute yourself.
18 ULB ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ. BSB BSB: You took your embroidered garments to cover them, and you set My oil and incense before them.
19 ULB ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!>> ಇದು ಕರ್ತನಾದ ಯೆಹೋವನ ನುಡಿ. BSB BSB: And you set before them as a pleasing aroma the food I had given you—the fine flour, oil, and honey that I had fed you. That is what happened, declares the Lord GOD.
20 ULB <<ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ? BSB BSB: You even took the sons and daughters you bore to Me and sacrificed them as food to idols. Was your prostitution not enough?
21 ULB ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ? BSB BSB: You slaughtered My children and delivered them up through the fire to idols.
22 ULB ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ. BSB BSB: And in all your abominations and acts of prostitution, you did not remember the days of your youth when you were naked and bare, wallowing in your own blood.
23 ULB ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!>> ಎಂಬುದು ಕರ್ತನಾದ ಯೆಹೋವನ ನುಡಿ. BSB BSB: Woe! Woe to you, declares the Lord GOD. And in addition to all your other wickedness,
24 ULB <<ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ. BSB BSB: you built yourself a mound and made yourself a lofty shrine in every public square.
25 ULB ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ. BSB BSB: At the head of every street you built your lofty shrines and degraded your beauty. With increasing promiscuity, you spread your legs to all who passed by.
26 ULB ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ. BSB BSB: You prostituted yourself with your lustful neighbors, the Egyptians, and increased your promiscuity to provoke Me to anger.
27 ULB ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು. BSB BSB: Therefore I stretched out My hand against you and reduced your portion. I gave you over to the desire of those who hate you, the daughters of the Philistines, who were ashamed of your lewd conduct.
28 ULB ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ. BSB BSB: Then you prostituted yourself with the Assyrians, because you were not yet satisfied. Even after that, you were still not satisfied.
29 ULB ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.>> BSB BSB: So you extended your promiscuity to Chaldea, the land of merchants—but even with this you were not satisfied!
30 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ. BSB BSB: How weak-willed is your heart, declares the Lord GOD, while you do all these things, the acts of a shameless prostitute!
31 ULB ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ. BSB BSB: But when you built your mounds at the head of every street and made your lofty shrines in every public square, you were not even like a prostitute, because you scorned payment.
32 ULB <<ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ! BSB BSB: You adulterous wife! You receive strangers instead of your own husband!
33 ULB ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ. BSB BSB: Men give gifts to all their prostitutes, but you gave gifts to all your lovers. You bribed them to come to you from everywhere for your illicit favors.
34 ULB ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!>> BSB BSB: So your prostitution is the opposite of that of other women: No one solicited your favors, and you paid a fee instead of receiving one; so you are the very opposite!
35 ULB ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು, BSB BSB: Therefore, O prostitute, hear the word of the LORD!
36 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ, BSB BSB: This is what the Lord GOD says: Because you poured out your wealth and exposed your nakedness in your promiscuity with your lovers and with all your detestable idols, and because of the blood of your children which you gave to them,
37 ULB ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು. BSB BSB: therefore I will surely gather all the lovers with whom you found pleasure, all those you loved and all those you hated. I will gather them against you from all around and expose you before them, and they will see you completely naked.
38 ULB ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು. BSB BSB: And I will sentence you to the punishment of women who commit adultery and those who shed blood; so I will bring upon you the wrath of your bloodshed and jealousy.
39 ULB ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು. BSB BSB: Then I will deliver you into the hands of your lovers, and they will level your mounds and tear down your lofty shrines. They will strip off your clothes, take your fine jewelry, and leave you naked and bare.
40 ULB ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು. BSB BSB: They will bring a mob against you, who will stone you and cut you to pieces with their swords.
41 ULB ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ. BSB BSB: Then they will burn down your houses and execute judgment against you in the sight of many women. I will put an end to your prostitution, and you will never again pay your lovers.
42 ULB ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು. BSB BSB: So I will lay to rest My wrath against you, and My jealousy will turn away from you. Then I will be calm and no longer angry.
43 ULB <<ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ>> ಇದು ಕರ್ತನಾದ ಯೆಹೋವನ ನುಡಿ. BSB BSB: Because you did not remember the days of your youth, but enraged Me with all these things, I will surely bring your deeds down upon your own head, declares the Lord GOD. Have you not committed this lewdness on top of all your other abominations?
44 ULB <<ಆಹಾ, ಗಾದೆಗಳಲ್ಲಿ ಜಾಣರು <ತಾಯಿಯಂತೆ ಮಗಳು> ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು. BSB BSB: Behold, all who speak in proverbs will quote this proverb about you: ‘Like mother, like daughter.’
45 ULB ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. BSB BSB: You are the daughter of your mother, who despised her husband and children. You are the sister of your sisters, who despised their husbands and children. Your mother was a Hittite and your father an Amorite.
46 ULB ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. BSB BSB: Your older sister was Samaria, who lived with her daughters to your north; and your younger sister was Sodom, who lived with her daughters to your south.
47 ULB ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.>> BSB BSB: And you not only walked in their ways and practiced their abominations, but soon you were more depraved than they were.
48 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ. BSB BSB: As surely as I live, declares the Lord GOD, your sister Sodom and her daughters never did as you and your daughters have done.
49 ULB ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ. BSB BSB: Now this was the iniquity of your sister Sodom: She and her daughters were arrogant, overfed, and complacent; they did not help the poor and needy.
50 ULB ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. BSB BSB: Thus they were haughty and committed abominations before Me. Therefore I removed them, as you have seen.
51 ULB ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ. BSB BSB: Furthermore, Samaria did not commit half the sins you did. You have multiplied your abominations beyond theirs, and all the abominations you have committed have made your sisters appear righteous.
52 ULB ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ. BSB BSB: So now you must bear your disgrace, since you have brought justification for your sisters. For they appear more righteous than you, because your sins were more vile than theirs. So you too must bear your shame and disgrace, since you have made your sisters appear righteous.
53 ULB <<ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು. BSB BSB: But I will restore Sodom and her daughters from captivity, as well as Samaria and her daughters. And I will restore you along with them.
54 ULB ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ. BSB BSB: So you will bear your disgrace and be ashamed of all you did to comfort them.
55 ULB ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ. BSB BSB: And your sisters, Sodom with her daughters and Samaria with her daughters, will return to their former state. You and your daughters will also return to your former state.
56 ULB ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು, BSB BSB: Did you not treat your sister Sodom as an object of scorn in the day of your pride,
57 ULB ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ. BSB BSB: before your wickedness was uncovered? Even so, you are now scorned by the daughters of Edom and all those around her, and by the daughters of the Philistines—all those around you who despise you.
58 ULB ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು>> ಇದು ಯೆಹೋವನ ನುಡಿ. BSB BSB: You will bear the consequences of your lewdness and your abominations, declares the LORD.
59 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು. BSB BSB: For this is what the Lord GOD says: I will deal with you according to your deeds, since you have despised the oath by breaking the covenant.
60 ULB ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು. BSB BSB: But I will remember the covenant I made with you in the days of your youth, and I will establish an everlasting covenant with you.
61 ULB ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ. BSB BSB: Then you will remember your ways and be ashamed when you receive your older and younger sisters. I will give them to you as daughters, but not because of My covenant with you.
62 ULB ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು. BSB BSB: So I will establish My covenant with you, and you will know that I am the LORD,
63 ULB ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ>> ಇದು ಕರ್ತನಾದ ಯೆಹೋವನ ನುಡಿ. BSB BSB: so that when I make atonement for all you have done, you will remember and be ashamed and never again open your mouth because of your disgrace, declares the Lord GOD.”
Select verses for actions: Enter goes to them and Escape comes back.