1 ULB ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು. BSB BSB: In the seventh year, on the tenth day of the fifth month, some of the elders of Israel came to inquire of the LORD, and they sat down before me.
2 ULB ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Then the word of the LORD came to me, saying,
3 ULB <<ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ>>> ಇದು ಕರ್ತನಾದ ಯೆಹೋವನ ನುಡಿ. BSB BSB: “Son of man, speak to the elders of Israel and tell them that this is what the Lord GOD says: Have you come to inquire of Me? As surely as I live, I will not be consulted by you, declares the Lord GOD.
4 ULB <<ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು, BSB BSB: Will you judge them, will you judge them, son of man? Confront them with the abominations of their fathers
5 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು> ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ, BSB BSB: and tell them that this is what the Lord GOD says: On the day I chose Israel, I swore an oath to the descendants of the house of Jacob and made Myself known to them in the land of Egypt. With an uplifted hand I said to them, ‘I am the LORD your God.’
6 ULB ಆ ದಿನದಲ್ಲಿ ನಾನು ಅವರಿಗೆ, <ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು> ಎಂದು ಪ್ರಮಾಣಮಾಡಿದೆನು. BSB BSB: On that day I swore to bring them out of the land of Egypt into a land that I had searched out for them, a land flowing with milk and honey, the glory of all lands.
7 ULB <ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು>>> ಎಂಬುದಾಗಿ ಅವರನ್ನು ಎಚ್ಚರಿಸಿದೆನು. BSB BSB: And I said to them: ‘Each of you must throw away the abominations before his eyes, and you must not defile yourselves with the idols of Egypt. I am the LORD your God.’
8 ULB << <ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು> ಅಂದುಕೊಂಡೆನು. BSB BSB: But they rebelled against Me and refused to listen. None of them cast away the abominations before their eyes, and they did not forsake the idols of Egypt. So I resolved to pour out My wrath upon them and vent My anger against them in the land of Egypt.
9 ULB <ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು. BSB BSB: But I acted for the sake of My name, that it should not be profaned in the eyes of the nations among whom they were living, in whose sight I had revealed Myself to Israel by bringing them out of the land of Egypt.
10 ULB ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು, BSB BSB: So I brought them out of the land of Egypt and led them into the wilderness.
11 ULB ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು. BSB BSB: And I gave them My statutes and made known to them My ordinances—for the man who does these things will live by them.
12 ULB ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು. BSB BSB: I also gave them My Sabbaths as a sign between us, so that they would know that I am the LORD who sanctifies them.
13 ULB << <ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು> ಅಂದುಕೊಂಡೆನು. BSB BSB: Yet the house of Israel rebelled against Me in the wilderness. They did not follow My statutes and they rejected My ordinances—though the man who does these things will live by them—and they utterly profaned My Sabbaths. Then I resolved to pour out My wrath upon them and put an end to them in the wilderness.
14 ULB <ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು. BSB BSB: But I acted for the sake of My name, so that it would not be profaned in the eyes of the nations in whose sight I had brought them out.
15 ULB ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು. BSB BSB: Moreover, with an uplifted hand I swore to them in the wilderness that I would not bring them into the land that I had given them—a land flowing with milk and honey, the glory of all lands—
16 ULB ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು. BSB BSB: because they kept rejecting My ordinances, refusing to walk in My statutes, and profaning My Sabbaths; for their hearts continually went after their idols.
17 ULB ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.>>> BSB BSB: Yet I looked on them with pity and did not destroy them or bring them to an end in the wilderness.
18 ULB ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, <<ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು. BSB BSB: In the wilderness I said to their children: ‘Do not walk in the statutes of your fathers or keep their ordinances or defile yourselves with their idols.
19 ULB ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ. BSB BSB: I am the LORD your God; walk in My statutes, keep My ordinances, and practice them.
20 ULB ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು>> ಎಂದು ಹೇಳಿದೆನು. BSB BSB: Keep My Sabbaths holy, that they may be a sign between us, so that you may know that I am the LORD your God.’
21 ULB <<ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು>> ಅಂದುಕೊಂಡೆನು. BSB BSB: But the children rebelled against Me. They did not walk in My statutes or carefully observe My ordinances—though the man who does these things will live by them—and they profaned My Sabbaths. So I resolved to pour out My wrath upon them and vent My anger against them in the wilderness.
22 ULB <<ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು. BSB BSB: But I withheld My hand and acted for the sake of My name, so that it would not be profaned in the eyes of the nations in whose sight I had brought them out.
23 ULB ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ. BSB BSB: However, with an uplifted hand I swore to them in the wilderness that I would scatter them among the nations and disperse them throughout the lands.
24 ULB ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.>> ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು. BSB BSB: For they did not practice My ordinances, but they rejected My statutes and profaned My Sabbaths, fixing their eyes on the idols of their fathers.
25 ULB <<ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು. BSB BSB: I also gave them over to statutes that were not good and ordinances by which they could not live.
26 ULB ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.>> BSB BSB: And I pronounced them unclean through their gifts—the sacrifice of every firstborn in the fire—so that I might devastate them, in order that they would know that I am the LORD.
27 ULB ಹೀಗಿರಲು, <<ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ. BSB BSB: Therefore, son of man, speak to the house of Israel, and tell them that this is what the Lord GOD says: In this way also your fathers blasphemed Me by their unfaithfulness against Me.
28 ULB ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.> BSB BSB: When I brought them into the land that I swore to give them and they saw any high hill or leafy tree, there they offered their sacrifices, presented offerings that provoked Me, sent up their fragrant incense, and poured out their drink offerings.
29 ULB ನೀವು ಹೋಗುವ, <ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?>>> (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು). BSB BSB: So I asked them: ‘What is this high place to which you go?’ (And to this day it is called Bamah.)
30 ULB ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ? BSB BSB: Therefore tell the house of Israel that this is what the Lord GOD says: Will you defile yourselves the way your fathers did, prostituting yourselves with their abominations?
31 ULB ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ>> ಇದು ಕರ್ತನಾದ ಯೆಹೋವನ ನುಡಿ. BSB BSB: When you offer your gifts, sacrificing your sons in the fire, you continue to defile yourselves with all your idols to this day. So should I be consulted by you, O house of Israel? As surely as I live, declares the Lord GOD, I will not be consulted by you!
32 ULB <<ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.>> BSB BSB: When you say, ‘Let us be like the nations, like the peoples of the lands, serving wood and stone,’ what you have in mind will never come to pass.
33 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು. BSB BSB: As surely as I live, declares the Lord GOD, with a strong hand, an outstretched arm, and outpoured wrath I will rule over you.
34 ULB ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು. BSB BSB: With a strong hand, an outstretched arm, and outpoured wrath I will bring you out from the peoples and gather you from the lands to which you have been scattered.
35 ULB ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು. BSB BSB: And I will bring you into the wilderness of the nations, where I will enter into judgment with you face to face.
36 ULB ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು>> ಇದು ಕರ್ತನಾದ ಯೆಹೋವನ ನುಡಿ. BSB BSB: Just as I entered into judgment with your fathers in the wilderness of the land of Egypt, so I will enter into judgment with you, declares the Lord GOD.
37 ULB <<ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು. BSB BSB: I will make you pass under the rod and will bring you into the bond of the covenant.
38 ULB ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು>> ಎಂದು ನಿಮಗೆ ಗೊತ್ತಾಗುವುದು. BSB BSB: And I will purge you of those who rebel and transgress against Me. I will bring them out of the land in which they dwell, but they will not enter the land of Israel. Then you will know that I am the LORD.
39 ULB ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.>> BSB BSB: And as for you, O house of Israel, this is what the Lord GOD says: Go and serve your idols, every one of you. But afterward, you will surely listen to Me, and you will no longer defile My holy name with your gifts and idols.
40 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು. BSB BSB: For on My holy mountain, the high mountain of Israel, declares the Lord GOD, there the whole house of Israel, all of them, will serve Me in the land. There I will accept them and will require your offerings and choice gifts, along with all your holy sacrifices.
41 ULB ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. BSB BSB: When I bring you from the peoples and gather you from the lands to which you have been scattered, I will accept you as a pleasing aroma. And I will show My holiness through you in the sight of the nations.
42 ULB ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. BSB BSB: Then you will know that I am the LORD, when I bring you into the land of Israel, the land that I swore to give your fathers.
43 ULB ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ. BSB BSB: There you will remember your ways and all the deeds with which you have defiled yourselves, and you will loathe yourselves for all the evils you have done.
44 ULB ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು>> ಇದು ಕರ್ತನಾದ ಯೆಹೋವನ ನುಡಿ. BSB BSB: Then you will know, O house of Israel, that I am the LORD, when I have dealt with you for the sake of My name and not according to your wicked ways and corrupt acts, declares the Lord GOD.”
45 ULB ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Now the word of the LORD came to me, saying,
46 ULB <<ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ, BSB BSB: “Son of man, set your face toward the south, preach against it, and prophesy against the forest of the Negev.
47 ULB ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು. BSB BSB: Say to the forest of the Negev: Hear the word of the LORD! This is what the Lord GOD says: I am about to ignite in you a fire, and it will devour all your trees, both green and dry. The blazing flame will not be quenched, and by it every face from south to north will be scorched.
48 ULB ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.> BSB BSB: Then all people will see that I, the LORD, have kindled it; it will not be quenched.”
49 ULB <<ಆಗ ನಾನು, <ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?> ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ>> ಎಂಬುದಾಗಿ ಅರಿಕೆಮಾಡಿದೆನು. BSB BSB: Then I said, “Ah, Lord GOD, they are saying of me, ‘Is he not just telling parables?’”
Select verses for actions: Enter goes to them and Escape comes back.