1 ULB ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: And the word of the LORD came to me, saying,
2 ULB <<ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ, BSB BSB: “Son of man, set your face against Jerusalem and preach against the sanctuaries. Prophesy against the land of Israel
3 ULB ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, <ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು. BSB BSB: and tell her that this is what the LORD says: ‘I am against you, and I will draw My sword from its sheath and cut off from you both the righteous and the wicked.
4 ULB ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು. BSB BSB: Because I will cut off both the righteous and the wicked, My sword will be unsheathed against everyone from south to north.
5 ULB ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ> ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.>> BSB BSB: Then all flesh will know that I, the LORD, have taken My sword from its sheath, not to return it again.’
6 ULB <<ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. BSB BSB: But you, son of man, groan! Groan before their eyes with a broken heart and bitter grief.
7 ULB <ಏಕೆ ನರಳಾಡುತ್ತೀ?> ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, <ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು> ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.>> BSB BSB: And when they ask, ‘Why are you groaning?’ you are to say, ‘Because of the news that is coming. Every heart will melt, and every hand will go limp. Every spirit will faint, and every knee will turn to water.’ Yes, it is coming and it will surely happen, declares the Lord GOD.”
8 ULB ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Again the word of the LORD came to me, saying,
9 ULB <<ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, <ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! BSB BSB: “Son of man, prophesy and tell them that this is what the Lord says: ‘A sword, a sword, sharpened and polished—
10 ULB ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ? BSB BSB: it is sharpened for the slaughter, polished to flash like lightning! Should we rejoice in the scepter of My son? The sword despises every such stick.
11 ULB ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ. BSB BSB: The sword is appointed to be polished, to be grasped in the hand. It is sharpened and polished, to be placed in the hand of the slayer.
12 ULB ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.>>> BSB BSB: Cry out and wail, O son of man, for the sword is wielded against My people; it is against all the princes of Israel! They are tossed to the sword with My people; therefore strike your thigh.
13 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು? BSB BSB: Surely testing will come! And what if even the scepter, which the sword despises, does not continue?’ declares the Lord GOD.
14 ULB ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ! BSB BSB: ‘So then, son of man, prophesy and strike your hands together. Let the sword strike two times, even three. It is a sword that slays, a sword of great slaughter closing in on every side!
15 ULB ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ! BSB BSB: So that their hearts may melt and many may stumble, I have appointed at all their gates a sword for slaughter. Yes, it is ready to flash like lightning; it is drawn for slaughter.
16 ULB ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು. BSB BSB: Slash to the right; set your blade to the left—wherever your blade is directed.
17 ULB ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.>> BSB BSB: I too will strike My hands together, and I will satisfy My wrath.’ I, the LORD, have spoken.”
18 ULB ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು, BSB BSB: Then the word of the LORD came to me, saying,
19 ULB <<ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು. BSB BSB: “Now you, son of man, mark out two roads for the sword of the king of Babylon to take, both starting from the same land. And make a signpost where the road branches off to each city.
20 ULB ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. BSB BSB: Mark out one road for the sword to come against Rabbah of the Ammonites, and another against Judah into fortified Jerusalem.
21 ULB <<ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ. BSB BSB: For the king of Babylon stands at the fork in the road, at the junction of the two roads, to seek an omen: He shakes the arrows, he consults the idols, he examines the liver.
22 ULB ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು. BSB BSB: In his right hand appears the portent for Jerusalem, where he is to set up battering rams, to call for the slaughter, to lift a battle cry, to direct the battering rams against the gates, to build a ramp, and to erect a siege wall.
23 ULB ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.>> BSB BSB: It will seem like a false omen to the eyes of those who have sworn allegiance to him, but it will draw attention to their guilt and take them captive.
24 ULB ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ. BSB BSB: Therefore this is what the Lord GOD says: ‘Because you have drawn attention to your guilt, exposing your transgressions, so that your sins are revealed in all your deeds—because you have come to remembrance—you shall be taken in hand.
25 ULB ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.>> BSB BSB: And you, O profane and wicked prince of Israel, the day has come for your final punishment.’
26 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು. BSB BSB: This is what the Lord GOD says: ‘Remove the turban, and take off the crown. Things will not remain as they are: Exalt the lowly and bring low the exalted.
27 ULB ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.>> BSB BSB: A ruin, a ruin, I will make it a ruin! And it will not be restored until the arrival of Him to whom it belongs, to whom I have assigned the right of judgment.’
28 ULB ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, <<ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ. BSB BSB: Now prophesy, son of man, and declare that this is what the Lord GOD says concerning the Ammonites and their contempt: ‘A sword! A sword is drawn for slaughter, polished to consume, to flash like lightning—
29 ULB ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ. BSB BSB: while they offer false visions for you and lying divinations about you—to be placed on the necks of the wicked who are slain, whose day has come, the time of their final punishment.
30 ULB << <ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು. BSB BSB: Return the sword to its sheath! In the place where you were created, in the land of your origin, I will judge you.
31 ULB ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು. BSB BSB: I will pour out My anger upon you; I will breathe the fire of My fury against you; I will hand you over to brutal men, skilled in destruction.
32 ULB ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ> ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.>> BSB BSB: You will be fuel for the fire. Your blood will stain your own land. You will not be remembered, for I, the LORD, have spoken.’”
Select verses for actions: Enter goes to them and Escape comes back.