1 ULB ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: In the eleventh month of the twelfth year, on the first day of the month, the word of the LORD came to me, saying,
2 ULB <<ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು>> ಅಂದುಕೊಳ್ಳುವೆನು. BSB BSB: “Son of man, because Tyre has said of Jerusalem, ‘Aha! The gate to the nations is broken; it has swung open to me; now that she lies in ruins I will be filled,’
3 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು. BSB BSB: therefore this is what the Lord GOD says: ‘Behold, O Tyre, I am against you, and I will raise up many nations against you, as the sea brings up its waves.
4 ULB ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು. BSB BSB: They will destroy the walls of Tyre and demolish her towers. I will scrape the soil from her and make her a bare rock.
5 ULB ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, <ಅದು ಜನಾಂಗಗಳಿಗೆ ಸೂರೆಯಾಗುವುದು.> BSB BSB: She will become a place to spread nets in the sea, for I have spoken, declares the Lord GOD. She will become plunder for the nations,
6 ULB ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು>> ಎಂದು ಎಲ್ಲರಿಗೂ ಗೊತ್ತಾಗುವುದು. BSB BSB: and the villages on her mainland will be slain by the sword. Then they will know that I am the LORD.’
7 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು. BSB BSB: For this is what the Lord GOD says: ‘Behold, I will bring against Tyre from the north Nebuchadnezzar king of Babylon, king of kings, with horses and chariots, with cavalry and a great company of troops.
8 ULB ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು. BSB BSB: He will slaughter the villages of your mainland with the sword; he will set up siege works against you, build a ramp to your walls, and raise his shields against you.
9 ULB ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು. BSB BSB: He will direct the blows of his battering rams against your walls and tear down your towers with his axes.
10 ULB ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು. BSB BSB: His multitude of horses will cover you in their dust. When he enters your gates as an army entering a breached city, your walls will shake from the noise of cavalry, wagons, and chariots.
11 ULB ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು. BSB BSB: The hooves of his horses will trample all your streets. He will slaughter your people with the sword, and your mighty pillars will fall to the ground.
12 ULB ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು. BSB BSB: They will plunder your wealth and pillage your merchandise. They will demolish your walls, tear down your beautiful homes, and throw your stones and timber and soil into the water.
13 ULB ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು. BSB BSB: So I will silence the sound of your songs, and the music of your lyres will no longer be heard.
14 ULB ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ>> ಇದು ಕರ್ತನಾದ ಯೆಹೋವನ ನುಡಿ. BSB BSB: I will make you a bare rock, and you will become a place to spread the fishing nets. You will never be rebuilt, for I, the LORD, have spoken, declares the Lord GOD.’
15 ULB ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, <<ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ? BSB BSB: This is what the Lord GOD says to Tyre: ‘Will not the coastlands quake at the sound of your downfall, when the wounded groan at the slaughter in your midst?
16 ULB ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು. BSB BSB: All the princes of the sea will descend from their thrones, remove their robes, and strip off their embroidered garments. Clothed with terror, they will sit on the ground, trembling every moment, appalled over you.
17 ULB ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು! BSB BSB: Then they will lament for you, saying, “How you have perished, O city of renown inhabited by seafaring men—she who was powerful on the sea, along with her people, who imposed terror on all peoples!
18 ULB ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.>> BSB BSB: Now the coastlands tremble on the day of your downfall; the islands in the sea are dismayed by your demise.”’
19 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು. BSB BSB: For this is what the Lord GOD says: ‘When I make you a desolate city like other deserted cities, and when I raise up the deep against you so that the mighty waters cover you,
20 ULB <<ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು. BSB BSB: then I will bring you down with those who descend to the Pit, to the people of antiquity. I will make you dwell in the earth below like the ancient ruins, with those who descend to the Pit, so that you will no longer be inhabited or set in splendor in the land of the living.
21 ULB ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ>> ಇದು ಕರ್ತನಾದ ಯೆಹೋವನ ನುಡಿ. BSB BSB: I will make you an object of horror, and you will be no more. You will be sought, but will never be found,’ declares the Lord GOD.”
Select verses for actions: Enter goes to them and Escape comes back.