1 ULB ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: And the word of the LORD came to me, saying,
2 ULB <<ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು> ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ. BSB BSB: “Son of man, tell the ruler of Tyre that this is what the Lord GOD says: Your heart is proud, and you have said, ‘I am a god; I sit in the seat of gods in the heart of the sea.’ Yet you are a man and not a god, though you have regarded your heart as that of a god.
3 ULB <<ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ? BSB BSB: Behold, you are wiser than Daniel; no secret is hidden from you!
4 ULB ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ. BSB BSB: By your wisdom and understanding you have gained your wealth and amassed gold and silver for your treasuries.
5 ULB ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.>> BSB BSB: By your great skill in trading you have increased your wealth, but your heart has grown proud because of it.
6 ULB ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. <<ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ. BSB BSB: Therefore this is what the Lord GOD says: Because you regard your heart as the heart of a god,
7 ULB ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು. BSB BSB: behold, I will bring foreigners against you, the most ruthless of nations. They will draw their swords against the beauty of your wisdom and will defile your splendor.
8 ULB <<ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ. BSB BSB: They will bring you down to the Pit, and you will die a violent death in the heart of the seas.
9 ULB ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ. BSB BSB: Will you still say, ‘I am a god,’ in the presence of those who slay you? You will be only a man, not a god, in the hands of those who wound you.
10 ULB ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ>> ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ. BSB BSB: You will die the death of the uncircumcised at the hands of foreigners. For I have spoken, declares the Lord GOD.”
11 ULB ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Again the word of the LORD came to me, saying,
12 ULB <<ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ. BSB BSB: “Son of man, take up a lament for the king of Tyre and tell him that this is what the Lord GOD says: ‘You were the seal of perfection, full of wisdom and perfect in beauty.
13 ULB ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. BSB BSB: You were in Eden, the garden of God. Every kind of precious stone adorned you: ruby, topaz, and diamond, beryl, onyx, and jasper, sapphire, turquoise, and emerald. Your mountings and settings were crafted in gold, prepared on the day of your creation.
14 ULB << <ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ. BSB BSB: You were anointed as a guardian cherub, for I had ordained you. You were on the holy mountain of God; you walked among the fiery stones.
15 ULB ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. BSB BSB: From the day you were created you were blameless in your ways—until wickedness was found in you.
16 ULB << <ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು. BSB BSB: By the vastness of your trade, you were filled with violence, and you sinned. So I drove you in disgrace from the mountain of God, and I banished you, O guardian cherub, from among the fiery stones.
17 ULB << <ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು. BSB BSB: Your heart grew proud of your beauty; you corrupted your wisdom because of your splendor; so I cast you to the earth; I made you a spectacle before kings.
18 ULB ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು. BSB BSB: By the multitude of your iniquities and the dishonesty of your trading you have profaned your sanctuaries. So I made fire come from within you, and it consumed you. I reduced you to ashes on the ground in the eyes of all who saw you.
19 ULB ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.>>> BSB BSB: All the nations who know you are appalled over you. You have come to a horrible end and will be no more.’”
20 ULB ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Then the word of the LORD came to me, saying,
21 ULB <<ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು. BSB BSB: “Son of man, set your face against Sidon and prophesy against her.
22 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು> ಎಂದು ಎಲ್ಲರಿಗೂ ಗೊತ್ತಾಗುವುದು. BSB BSB: And you are to declare that this is what the Lord GOD says: ‘Behold, I am against you, O Sidon, and I will be glorified within you. They will know that I am the LORD when I execute judgments against her and demonstrate My holiness through her.
23 ULB <ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು> ಎಂದು ಅವರಿಗೆ ತಿಳಿದು ಬರುವುದು. BSB BSB: I will send a plague against her and shed blood in her streets; the slain will fall within her, while the sword is against her on every side. Then they will know that I am the LORD.
24 ULB <<ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು>> ಎಂದು ಅವರಿಗೆ ತಿಳಿಯುವುದು. BSB BSB: For the people of Israel will no longer face a pricking brier or a painful thorn from all around them who treat them with contempt. Then they will know that I am the Lord GOD.’
25 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ,<< <ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು. BSB BSB: This is what the Lord GOD says: ‘When I gather the house of Israel from the peoples among whom they have been scattered, I will show Myself holy among them in the sight of the nations. Then they will dwell in their own land, which I have given to My servant Jacob.
26 ULB ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.>>> BSB BSB: And there they will dwell securely, build houses, and plant vineyards. They will dwell securely when I execute judgments against all those around them who treat them with contempt. Then they will know that I am the LORD their God.’”
Select verses for actions: Enter goes to them and Escape comes back.