1 ULB ಆತನು ನನಗೆ, <<ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು>> ಎಂದು ಅಪ್ಪಣೆಕೊಟ್ಟನು. BSB BSB: “Son of man,” He said to me, “eat what you find here. Eat this scroll, then go and speak to the house of Israel.”
2 ULB ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು. BSB BSB: So I opened my mouth, and He fed me the scroll.
3 ULB ಆಗ ಆತನು ನನಗೆ, <<ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ>> ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು. BSB BSB: “Son of man,” He said to me, “eat and fill your stomach with this scroll I am giving you.” So I ate, and it was as sweet as honey in my mouth.
4 ULB ಆಮೇಲೆ ಆತನು ನನಗೆ ಹೀಗೆಂದನು, <<ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು. BSB BSB: Then He said to me, “Son of man, go now to the house of Israel and speak My words to them.
5 ULB ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ. BSB BSB: For you are not being sent to a people of unfamiliar speech or difficult language, but to the house of Israel—
6 ULB ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಒಳಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. BSB BSB: not to the many peoples of unfamiliar speech and difficult language whose words you cannot understand. Surely if I had sent you to them, they would have listened to you.
7 ULB ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ. BSB BSB: But the house of Israel will be unwilling to listen to you, since they are unwilling to listen to Me. For the whole house of Israel is hard-headed and hard-hearted.
8 ULB ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ. BSB BSB: Behold, I will make your face as hard as their faces, and your forehead as hard as their foreheads.
9 ULB ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.>> BSB BSB: I will make your forehead like a diamond, harder than flint. Do not be afraid of them or dismayed at their presence, even though they are a rebellious house.”
10 ULB ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ. BSB BSB: “Son of man,” He added, “listen carefully to all the words I speak to you, and take them to heart.
11 ULB ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ಅವರಿಗೆ ಸಾರು.>> BSB BSB: Go to your people, the exiles; speak to them and tell them, ‘This is what the Lord GOD says,’ whether they listen or refuse to listen.”
12 ULB ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, <<ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ>> ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು. BSB BSB: Then the Spirit lifted me up, and I heard a great rumbling sound behind me: “Blessed be the glory of the LORD in His dwelling place!”
13 ULB ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು. BSB BSB: It was the sound of the wings of the living creatures brushing against one another and the sound of the wheels beside them, a great rumbling sound.
14 ULB ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು. BSB BSB: So the Spirit lifted me up and took me away, and I went in bitterness and in the anger of my spirit, with the strong hand of the LORD upon me.
15 ULB ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು. BSB BSB: I came to the exiles at Tel-abib who dwelt by the River Kebar. And for seven days I sat where they sat and remained there among them, overwhelmed.
16 ULB ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, BSB BSB: At the end of seven days the word of the LORD came to me, saying,
17 ULB <<ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು. BSB BSB: “Son of man, I have made you a watchman for the house of Israel. Whenever you hear a word from My mouth, give them a warning from Me.
18 ULB ನಾನು ದುಷ್ಟನಿಗೆ, <ನೀನು ಖಂಡಿತವಾಗಿ ಸಾಯುವೆ> ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ. BSB BSB: If I say to the wicked man, ‘You will surely die,’ but you do not warn him or speak out to warn him from his wicked way to save his life, that wicked man will die in his iniquity, and I will hold you responsible for his blood.
19 ULB ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. BSB BSB: But if you warn a wicked man and he does not turn from his wickedness and his wicked way, he will die in his iniquity, but you will have saved yourself.
20 ULB ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ. BSB BSB: Now if a righteous man turns from his righteousness and commits iniquity, and I put a stumbling block before him, he will die. If you did not warn him, he will die in his sin, and the righteous acts he did will not be remembered. And I will hold you responsible for his blood.
21 ULB ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.>> BSB BSB: But if you warn the righteous man not to sin, and he does not sin, he will indeed live because he heeded your warning, and you will have saved yourself.”
22 ULB ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, <<ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು>> ಎಂದು ಹೇಳಿದನು. BSB BSB: And there the hand of the LORD was upon me, and He said to me, “Get up, go out to the plain, and there I will speak with you.”
23 ULB ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು. BSB BSB: So I got up and went out to the plain, and behold, the glory of the LORD was present there, like the glory I had seen by the River Kebar, and I fell facedown.
24 ULB ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, <<ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ. BSB BSB: Then the Spirit entered me and set me on my feet. He spoke with me and said, “Go, shut yourself inside your house.
25 ULB ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ. BSB BSB: And you, son of man, they will tie with ropes, and you will be bound so that you cannot go out among the people.
26 ULB ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ. BSB BSB: I will make your tongue stick to the roof of your mouth, and you will be silent and unable to rebuke them, though they are a rebellious house.
27 ULB ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.>> BSB BSB: But when I speak with you, I will open your mouth, and you are to tell them, ‘This is what the Lord GOD says.’ Whoever listens, let him listen; and whoever refuses, let him refuse, for they are a rebellious house.
Select verses for actions: Enter goes to them and Escape comes back.